ದೇವನಹಳ್ಳಿ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು: ಚಲಿಸುತ್ತಿದ್ದ ವಾಹನದಲ್ಲಿ ದಿಢೀರ್ ಬೆಂಕಿ, ಪ್ರಯಾಣಿಕರು ಪಾರು!

ದೇವನಹಳ್ಳಿ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು: ಚಲಿಸುತ್ತಿದ್ದ ವಾಹನದಲ್ಲಿ ದಿಢೀರ್ ಬೆಂಕಿ, ಪ್ರಯಾಣಿಕರು ಪಾರು!


ದೇವನಹಳ್ಳಿಯಲ್ಲಿ ಹೊತ್ತಿ ಉರಿದ ಕಾರು: ಚಲಿಸುತ್ತಿದ್ದ ವಾಹನದಲ್ಲಿ ದಿಢೀರ್ ಬೆಂಕಿ, ಪ್ರಯಾಣಿಕರು ಪಾರು!

ದೇವನಹಳ್ಳಿ,ಮಾ.31: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಹೊರವಲಯ ಹೊಸಕೋಟೆ-ದಾಬಸ್‌ ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಮಂಗಳವಾರ (ಮಾ.31) ನಡೆದಿದೆ. ಕಾರು ರಸ್ತೆಯಲ್ಲಿ ಚಲಿಸುತ್ತಿದ್ದಾಗ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಕಾರು ಚಾಲಕ ಮತ್ತು ಪ್ರಯಾಣಿಕರು ರಸ್ತೆ ಮಧ್ಯೆಯೇ ಕಾರು ನಿಲ್ಲಿಸಿ ಕೆಳಗಿಳಿದಿದ್ದಾರೆ. ಅವರು ಇಳಿಯುತ್ತಿರುವಾಗ ಬೆಂಕಿಯ ಕೆನ್ನಾಲಿಗೆ ಕಾರಿನಾದ್ಯಂತ ಆವರಿಸಿದ್ದು, ನೋಡಿದಾಗ ಇಡೀ ಕಾರು ಬೆಂಕಿಗಾಹುತಿಯಾಗಿದೆ. ಇನ್ನು ಇದನ್ನು ಗಮನಿಸಿದ ಕಾರು ಚಾಲಕ ಕೆಳಗಿಳಿದ ದೊಡ್ಡ ಮಟ್ಟದ ಪ್ರಾಣಪಾಯ ತಪ್ಪಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಈ ಘಟನೆಯಿಂದಾಗಿ ರಸ್ತೆಯಲ್ಲಿ ಕೆಲ ಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು. ದೇವನಹಳ್ಳಿ ಪೊಲೀಸ್ ಠಾಣೆ ಈ ಪ್ರಕರಣ ದಾಖಲಾಗಿದ್ದು, ಶಾರ್ಟ್ ಪ್ರದರ್ಶನದಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *