
ಬೆಂಗಳೂರು, (ಮಾರ್ಚ್ 31): ಕೆಲಸದಿಂದ ತೆಗೆದಿದ್ದಕ್ಕೆ ಆಕ್ರೋಶಗೊಂಡ ವ್ಯಕ್ತಿಯೋರ್ವ, ಕಂಪನಿಯ ಮ್ಯಾನೇಜರ್ ನನ್ನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಭಯಾನಕ ಘಟನೆ (ಬೆಂಗಳೂರು) ತಿಗಳರಪಾಳ್ಯದಲ್ಲಿ ನಡೆದಿದೆ. ತಿಗಳರಪಾಳ್ಯದ ಪವರ್ ಪ್ಲಾಸ್ಟಿಕ್ ಪ್ರೈವೆಟ್ ಕಂಪನಿ ಮ್ಯಾನೇಜರ್ ರಾಹುಲ್(38) ಹತ್ಯೆಯಾದ ವ್ಯಕ್ತಿ. ಕೆಲಸದಿಂದ ತೆಗೆದಿದ್ದಕ್ಕೆ ಆಕ್ರೋಶಗೊಂಡ ಉದ್ಯೋಗಿ ಯಾದಗಿರಿ ಮೂಲದ ಹನುಮಂತಪ್ಪ, ನಿನ್ನೆ (ಮಾರ್ಚ್ 30) ಮ್ಯಾನೇಜರ್ ರಾಹುಲ್ ಗೆ ಚಾಕುವಿನಿಂದ ಇದ್ದಿದ್ದ. ಇದರಿಂದ ರಾಹುಲ್ ನನ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮ್ಯಾನೇಜರ್ ರಾಹುಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಯಾದಗಿರಿ ಮೂಲದ ಹನುಮಂತಪ್ಪ ಎಂಬಾತ ಬೆಂಗಳೂರಿನ ತಿಗಳರಪಾಳ್ಯದಲ್ಲಿರುವ ಪವರ್ ಪ್ಲಾಸ್ಟಿಕ್ ಪ್ರೈವೆಟ್ ಲಿಮಿಟೆಡ್ ಕಂಪನಿಯಲ್ಲಿ ಕೆಲಸ ಮಾಡುತ್ತಿದೆ. ಆದರೆ, ಏಕಾಏಕಿ ಹನುಮಂತಪ್ಪನನ್ನು ಕೆಲಸದಿಂದ ತೆಗೆದು ಹಾಕಲಾಗಿದೆ. ಇದರಿಂದ ಕೋಪಗೊಂಡ ಹನುಮಂತಪ್ಪ, ನಿನ್ನೆ(ಮಾರ್ಚ್ 30) ಕಂಪನಿಯಲ್ಲಿದ್ದ ಮ್ಯಾನೇಜರ್ ರಾಹುಲ್ ಗೆ ಸುಮಾರು 10 ಬಾರಿ ಚಾಕುವಿನಿಂದ ಇದ್ದಿದ್ದ. ಪರಿಣಾಮ ತೀವ್ರ ರಕ್ತಸ್ರಾವದಿಂದ ರಾಹುಲ್, ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ, ದುರದೃಷ್ಟವಶಾತ್, ಚಿಕಿತ್ಸೆ ಫಲಿಸದೇ ಮ್ಯಾನೇಜರ್ ರಾಹುಲ್ ಮಂಗಳವಾರ ಪ್ರಕಟಿಸಿದ್ದಾರೆ.
ಇದನ್ನೂ ಓದಿ: ಮದ್ವೆಯಾದ ಒಂದೇ ತಿಂಗಳಲ್ಲಿ ವಿರಸ:ಮೇಕಪ್ ಆರ್ಟಿಸ್ಟ್ ನ ವಿವಾಹವಾದ ಉದ್ಯಮಿ ದುರಂತ ಸಾವು
ಮೃತ ರಾಹುಲ್ ಉತ್ತರ ಪ್ರದೇಶದ ಮೂಲದವರು ಎಂದು ತಿಳಿದುಬಂದಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮುಗಿಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಸದ್ಯ ರಾಜಗೋಪಾಲ್ ನಗರ ಪೊಲೀಸರು, ಯಾದಗಿರಿ ಮೂಲಕ ಆರೋಪಿ ಹನುಮಂತಪ್ಪನನ್ನ ಬಂಧಿಸಿದ್ದಾರೆ.