
IPL 2026: ಇಂಡಿಯನ್ ಪ್ರೀಮಿಯರ್ ಲೀಗ್‌ನ 4ನೇ ತಂಡ ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದೆ. ಮುಲ್ಲನ್ಪುರ್ನ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಆಟದ ಟಾಸ್ ಗೆದ್ದಿರುವ ಪಂಜಾಬ್ ಕಿಂಗ್ಸ್ ತಂಡವು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇನ್ನು ಈ ಪಂದ್ಯದ ಮೂಲಕ ಉಭಯ ತಂಡಗಳು ಐಪಿಎಲ್ ಅಭಿಯಾನ ಆರಂಭಿಸಿದ್ದು, ಹೀಗಾಗಿ ಎರಡೂ ತಂಡಗಳು ಶುಭಾರಂಭ ಮಾಡುವ ಇರಾದೆಯಲ್ಲಿದೆ. ಈ ಪಂದ್ಯಕ್ಕಾಗಿ ಉಭಯ ತಂಡಗಳ ಆಟದಲ್ಲಿ ಈ ಕೆಳಗಿನಂತಿದೆ…
ಗುಜರಾತ್ ಟೈಟಾನ್ಸ್ (ಪ್ಲೇಯಿಂಗ್ XI): ಸಾಯಿ ಸುದರ್ಶನ್, ಶುಭಮನ್ ಗಿಲ್ (ನಾಯಕ), ಜೋಸ್ ಬಟ್ಲರ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಕಗಿಸೊ ರಬಾಡ, ಅಶೋಕ್ ಶರ್ಮಾ, ಮೊಹಮ್ಮದ್ ಸಿರಾಜ್.
ಪಂಜಾಬ್ ಕಿಂಗ್ಸ್ (ಪ್ಲೇಯಿಂಗ್ XI): ಪ್ರಭಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ಕೂಪರ್ ಕೊನೊಲಿ, ಶ್ರೇಯಸ್ ಅಯ್ಯರ್ (ನಾಯಕ), ನೆಹಾಲ್ ವಧೇರಾ, ಶಶಾಂಕ್ ಸಿಂಗ್, ಮಾರ್ಕಸ್ ಸ್ಟೊಯಿನಿಸ್, ಮಾರ್ಕೊ ಯಾನ್ಸೆನ್, ಕ್ಸೇವಿಯರ್ ಬಾರ್ಟ್ಲೆಟ್, ವೈಶಾಕ್ ವಿಜಯಕುಮಾರ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಾಹಲ್.
ಪಂಜಾಬ್ ಕಿಂಗ್ಸ್ vs ಗುಜರಾತ್ ಟೈಟಾನ್ಸ್ ಮುಖಾಮುಖಿ:
ಇಂಡಿಯನ್ ಪ್ರೀಮಿಯರ್ ನಗರದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಈವರೆಗೆ 6 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಪಂಜಾಬ್ ಕಿಂಗ್ಸ್ ತಂಡ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಗುಜರಾತ್ ಟೈಟಾನ್ಸ್ 3 ಮ್ಯಾಚ್‌ಗಳಲ್ಲಿ ಗೆಲುವು ದಾಖಲಿಸಿದೆ. ಹೀಗಾಗಿ ಇಂದಿನ ಪಂದ್ಯದಲ್ಲೂ ಉಭಯ ತಂಡಗಳಿಂದ ಸಮಬಲದ ಪೈಪೋಟಿಯನ್ನು ನಿರೀಕ್ಷಿಸಬಹುದು.