
ಬೆಂಗಳೂರು, ಮಾ.31: ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ ಕರ್ನಾಟಕ ಕೌನ್ಸಿಲ್ ಫಾರ್ ಟೆಕ್ನಿಕಲ್ ವ್ಯವಸ್ಥಾಪಕ ನಿರ್ದೇಶಕ (MD) ವಿ. ಮುನಿಯಪ್ಪ ದೋಷಿ ಎಂದು ಕರ್ನಾಟಕ ಲೋಕಾಯುಕ್ತ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ. ಬರೋಬ್ಬರಿ 12 ವರ್ಷಗಳ ಸುದೀರ್ಘ ಕಾನೂನು ಹೋರಾಟದ ಬಳಿಕ ಈ ತೀರ್ಪು ಹೊರಬಿದ್ದಿದೆ.
ಬೆಂಗಳೂರಿನ ಬಸವ ಭವನದ ವ್ಯವಸ್ಥಾಪಕ ನಿರ್ದೇಶಕ ವಿ. ಮುನಿಯಪ್ಪ ವಿರುದ್ಧ 2014ರಲ್ಲಿ ಭ್ರಷ್ಟಾಚಾರ ಮತ್ತು ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು. ಲೋಕಾಪ್ಪ ಅವರು ನಡೆಸಿದ ತನಿಖೆಯಲ್ಲಿ ತಮ್ಮ ಅಧಿಕೃತ ಆದಾಯದ ಮೂಲದಿಂದ ಅಕ್ರಮವಾಗಿ ಕೋಟ್ಯಾಂತರ ರೂಪಾಯಿಗಳನ್ನು ಸಂಪಾದಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣಕ್ಕೆ ಮಾಟ ಮಂತ್ರ ಕೇಸಿಗೆ ಟ್ವಿಸ್ಟ್: ಸ್ವಯಂ ಘೋಷಿತ ಬಾಬಾ ಅರೆಸ್ಟ್!
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಮುನಿಯಪ್ಪ ಅವರಿಗೆ 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 4.5 ಕೋಟಿ ರೂಪಾಯಿ ದಂಡ ವಿಧಿಸಿದೆ. ಒಂದು ವೇಳೆ ವಿಧಿಸಲಾದ ದಂಡದ ಮೊತ್ತವನ್ನು ಪಾವತಿಸಲು ವಿಫಲವಾದರೆ, ಆರೋಪಿಯು ಹೆಚ್ಚುವರಿಯಾಗಿ 6 ತಿಂಗಳ ಕಾಲ ಜೈಲು ಶಿಕ್ಷೆ ಅನುಭವಿಸಲಾಗಿದೆ ಎಂದು ತಿಳಿಸಲಾಗಿದೆ. 2014ರಲ್ಲಿ ದಾಖಲಾಗಿದ್ದ ಈ ಭ್ರಷ್ಟಾಚಾರದ ಕಲೆಗೆ 2026ರಲ್ಲಿ ಅಂತಿಮವಾಗಿ ಶಿಕ್ಷೆಯ ಮುದ್ರೆ ಬಿದ್ದಂತಾಗಿದೆ.