
ಬೆಂಗಳೂರು, ಏಪ್ರಿಲ್ 01: ಹಲವು ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾರ್ಭಟ (ಹವಾಮಾನ ಮುನ್ಸೂಚನೆ) ಕಾಣಸಿಗುತ್ತಿದೆ. ಅಂತೆಯೇ ಇಂದು ಸಹ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ, 14 ಜಿಲ್ಲೆಗಳಿಗೆ ಎಲ್ಲಾ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಯಾವೆಲ್ಲಾ ಜಿಲ್ಲೆಗಳಿಗೆ ಎಲ್ಲೋ ಎಚ್ಚರಿಕೆ?
ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ. ಆದ್ದರಿಂದ ಈ 14 ಜಿಲ್ಲೆಗಳಿಗೆ ಎಲ್ಲಾ ಎಚ್ಚರಿಕೆ ಸೂಚಿಸಲಾಗಿದೆ.
ಎಲ್ಲೆಲ್ಲಿ ಮಳೆ
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಸೇರಿದಂತೆ ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಯಾದಗಿರಿ, ಕಲಬುರ್ಗಿ, ಬೀದರ್, ಗದಗ, ರಾಯಚೂರು, ಬೀದರ್, ಹಾವೇರಿಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಮನಗರದಲ್ಲಿ 30-40 ಕೀ.ಮಿ/ಗಂ ವೇಗದಲ್ಲಿ ಗಾಳಿ ಮಳೆ ಜೋರಾಗಿರಲಿದೆ. ಉಳಿದೆಡೆ ಒಣ ಹವೆಯ ವಾತಾವರಣವಿರಲಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.