ಗರ್ಭಗುಡಿಗೆ ನುಗ್ಗಿ ದೇವರ ವಿಗ್ರಹದ ಮೇಲಿರುವ ಚಿನ್ನಾಭರಣವನ್ನೇ ಕದ್ದ ಕಳ್ಳ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಗರ್ಭಗುಡಿಗೆ ನುಗ್ಗಿ ದೇವರ ವಿಗ್ರಹದ ಮೇಲಿರುವ ಚಿನ್ನಾಭರಣವನ್ನೇ ಕದ್ದ ಕಳ್ಳ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಗರ್ಭಗುಡಿಗೆ ನುಗ್ಗಿ ದೇವರ ವಿಗ್ರಹದ ಮೇಲಿರುವ ಚಿನ್ನಾಭರಣವನ್ನೇ ಕದ್ದ ಕಳ್ಳ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಕಲಬುರಗಿ, ಏಪ್ರಿಲ್ 01: ಜಿಲ್ಲೆಯಲ್ಲಿ ದೇವಸ್ಥಾನದ ಕಳ್ಳತನದ ಘಟನೆ ಬೆಳಕಿಗೆ ಬಂದಿದೆ. ನಗರದ ಕುವೆಂಪು ನಗರದಲ್ಲಿರುವ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಕಳ್ಳನು ಗರ್ಭಗುಡಿಗೆ ನುಗ್ಗಿ ದೇವರ ವಿಗ್ರಹದ ಮೇಲಿದ್ದ ಚಿನ್ನಾಭರಣ ಕದ್ದಿದ್ದಾನೆ. ಕಬ್ಬಿಣದ ರಾಡಿನಿಂದ ದೇವಸ್ಥಾನದ ಬೀಗ ಮುರಿದು ಒಳನುಗ್ಗಿದ ಖದೀಮನು ದೇವಿಯ ಕೊರಳಲ್ಲಿದ್ದ ಸುಮಾರು 9 ಗ್ರಾಂ ತೂಕದ ಚಿನ್ನದ ತಾಳಿ ಹಾಗೂ 100 ಗ್ರಾಂ ತೂಕದ ಬೆಳ್ಳಿಯ ಮುಖವಾಡವನ್ನು ಕಳವು ಮಾಡಿ ಪರಾರಿಯಾಗಿದ್ದಾನೆ. ಈ ಘಟನೆಯ ಸಿಸಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ದೃಶ್ಯಾವಳಿಗಳ ಆಧಾರದಲ್ಲಿ ದೇವಸ್ಥಾನ ತನಿಖೆ ಆರಂಭಿಸಿದೆ. ಈ ಸಂಬಂಧ ಸ್ಟೇಷನ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *