Headlines

ಕೆಎಸ್‌ಆರ್‌ಟಿಸಿಗೆ ಮತ್ತೊಂದು ಗರಿ: ‘ವರ್ಲ್ಡ್ ಹೆಚ್‌ಆರ್‌ಡಿ ಕಾಂಗ್ರೆಸ್’ನ ಪ್ರತಿಷ್ಠಿತ ಪ್ರಶಸ್ತಿ ಮುಡಿಗೆ!

ಕೆಎಸ್‌ಆರ್‌ಟಿಸಿಗೆ ಮತ್ತೊಂದು ಗರಿ: ‘ವರ್ಲ್ಡ್ ಹೆಚ್‌ಆರ್‌ಡಿ ಕಾಂಗ್ರೆಸ್’ನ ಪ್ರತಿಷ್ಠಿತ ಪ್ರಶಸ್ತಿ ಮುಡಿಗೆ!


ಕೆಎಸ್‌ಆರ್‌ಟಿಸಿಗೆ ಮತ್ತೊಂದು ಗರಿ: 'ವರ್ಲ್ಡ್ ಹೆಚ್‌ಆರ್‌ಡಿ ಕಾಂಗ್ರೆಸ್'ನ ಪ್ರತಿಷ್ಠಿತ ಪ್ರಶಸ್ತಿ ಮುಡಿಗೆ!

ಬೆಂಗಳೂರು/ಕೊಚ್ಚಿನ್, ಏಪ್ರಿಲ್ 1: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) ತರಬೇತಿ ಮತ್ತು ಸಾಂಸ್ಥಿಕ ಅಭಿವೃದ್ಧಿ (ತರಬೇತಿ ಮತ್ತು ಸಂಸ್ಥೆಯ ಅಭಿವೃದ್ಧಿ) ಕ್ಷೇತ್ರದಲ್ಲಿ ಮಾಡಿರುವ ಅಭೂತಪೂರ್ವ ಸಾಧನೆಗಾಗಿ ಪ್ರತಿಷ್ಠಿತ ‘ವರ್ಲ್ಡ್ ಎಚ್‌ಆರ್‌ಡಿ ಕಾಂಗ್ರೆಸ್’ (ವಿಶ್ವ ಮಾನವ ಸಂಪನ್ಮೂಲ ಕಾಂಗ್ರೆಸ್ ಪ್ರಶಸ್ತಿ) ‘ಕೇರಳ ಲೀಡರ್‌ಶಿಪ್ ಅನ್ನು ಪ್ರಶಸ್ತಿ-2026’ ತನ್ನದಾಗಿಸಿಕೊಂಡಿದೆ. ಕೇರಳದ ಕೊಚ್ಚಿನ್‌ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಈ ಗೌರವವನ್ನು ಪ್ರದಾನ ಮಾಡಲಾಯಿತು.

ತರಬೇತಿ ಕ್ಷೇತ್ರದಲ್ಲಿ ಕೆ.ಎಸ್.ಆರ್.ಟಿ.ಸಿ ಕ್ರಾಂತಿ

ನಿಗಮದ ವ್ಯಾಪ್ತಿಯ ಐದು ತರಬೇತಿ ಕೇಂದ್ರಗಳಲ್ಲಿ ಕಳೆದ 6 ತಿಂಗಳ ಅವಧಿಯಲ್ಲಿ 12,000 ಹೆಚ್ಚು ಸಿಬ್ಬಂದಿಗಳಿಗೆ ಪರಿಣಾಮಕಾರಿ ತರಬೇತಿ ನೀಡುವುದನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಕ್ಷಮತೆ, ಅಪಘಾತ ರಹಿತ ಚಾಲನೆ, ಸಿಮ್ಯುಲೇಟರ್ ತರಬೇತಿ ಮತ್ತು ರಸ್ತೆ ಸುರಕ್ಷತೆಯಂತಹ ಪ್ರಮುಖ ವಿಷಯಗಳಲ್ಲಿ ಸಿಬ್ಬಂದಿಗಳನ್ನು ಸಜ್ಜುಗೊಳಿಸಿರುವುದು ನಿಗಮದ ಈ ಸಾಧನೆಗೆ ಕಾರಣವಾಗಿದೆ.

ಇದರೊಂದಿಗೆ ಸಾರಿಗೆ ಇಲಾಖೆ ಮತ್ತು ಅಲ್ಪಸಂಖ್ಯಾತರ ನಿರ್ದೇಶನಾಲಯದ ಜೊತೆಗೆ ಸಾಕಷ್ಟು ಪರಿಶಿಷ್ಟ ಜಾತಿ ಮತ್ತು ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಉಚಿತ ವಾಹನ ತರಬೇತಿ ಮತ್ತು ಪರವಾನಗಿ ನೀಡುವ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳು ಸಹ ಈ ಪ್ರಶಸ್ತಿಗೆ ಪೂರಕವಾಗಿದೆ.

ಕೊಚ್ಚಿನ್‌ನಲ್ಲಿ ನಡೆದ ಸಮಾರಂಭದಲ್ಲಿ ಶಿಪ್ ಟೆಕ್ನಾಲಜಿ ಕಾಲೇಜಿನ ನಿರ್ದೇಶಕ ಕ್ಯಾಪ್ಟನ್ ಎಸ್.ಟಿ. ಶ್ರೀಧರನ್ ಅವರಿಂದ ಕೆಎಸ್‌ಆರ್‌ಟಿಸಿ ಪರವಾಗಿ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಲತಾ ಟಿ.ಎಸ್. ಹಾಗೂ ಹಾಸನ ಪ್ರಾದೇಶಿಕ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಎ.ಎಸ್. ಗೀತಾಂಜಲಿ ಪ್ರಶಸ್ತಿಯನ್ನು ಸ್ವೀಕರಿಸಿದರು.

ಇದನ್ನೂ ಓದಿ: ರಾಷ್ಟ್ರಮಟ್ಟದಲ್ಲಿ ಎರಡು ಪ್ರತಿಷ್ಠಿತ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡ ಕೆಎಸ್ ಆರ್ ಟಿಸಿ!

ಐದು ದಿನಗಳ ಹಿಂದಷ್ಟೇ ಇಲೆಟ್ಸ್ ಮೊಬಿಲಿಟಿ ಎಕ್ಸೆಲೆನ್ಸ್ ಪ್ರಶಸ್ತಿಗಳಲ್ಲಿ ಧ್ವನಿ ಸ್ಪಂದನ ಮತ್ತು AWATAR 4.0 ಯೋಜನೆಗಳಿಗಾಗಿ ಎರಡು ರಾಷ್ಟ್ರೀಯ ಪ್ರಶಸ್ತಿಗಳನ್ನು ಕೆಎಸ್ಆರ್ಟಿಸಿ ತನ್ನ ಮುಡಿಗೇರಿಸಿಕೊಂಡಿತ್ತು. ತಂತ್ರಜ್ಞಾನ ಮತ್ತು ಸಮುದಾಯದ ಸಲಹೆಗಳನ್ನು ಬಳಸಿ, ಸಮಾಜ ಎಲ್ಲರಿಗೂ (ವಿಶೇಷವಾಗಿ ವಿಕಲಚೇತನರು ಮತ್ತು ಹಿರಿಯ ನಾಗರಿಕರಿಗೆ) ಸುಲಭ ಹಾಗೂ ಸುರಕ್ಷಿತ ಸಾರಿಗೆ ವ್ಯವಸ್ಥೆ ಕಲ್ಪಿಸುವ ಧ್ವನಿ ಸ್ಪಂದನ ಯೋಜನೆಗೆ ಪ್ರಶಸ್ತಿ ಲಭಿಸಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *