Headlines

ಶಿವಕುಮಾರ ಸ್ವಾಮೀಜಿ ಜನ್ಮದಿನೋತ್ಸವ: ಸಿದ್ಧಗಂಗಾ ಮಠದ ಗುಣಗಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಶಿವಕುಮಾರ ಸ್ವಾಮೀಜಿ ಜನ್ಮದಿನೋತ್ಸವ: ಸಿದ್ಧಗಂಗಾ ಮಠದ ಗುಣಗಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು


ಶಿವಕುಮಾರ ಸ್ವಾಮೀಜಿ ಜನ್ಮದಿನೋತ್ಸವ: ಸಿದ್ಧಗಂಗಾ ಮಠದ ಗುಣಗಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ತುಮಕೂರು, ಏಪ್ರಿಲ್ 01: ದೇಶದ ವಿಕಾಸಕ್ಕೆ ಸಿದ್ಧಗಂಗಾ ಮಠದ ಪಾತ್ರ ಬಹುದೊಡ್ಡದಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. ಸಿದ್ಧಗಂಗಾಮಠದ ವಸ್ತು ಮಂದಿರದ ಮೈದಾನದಲ್ಲಿ ನಡೆದ ಡಾ.ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಿದ್ಧಗಂಗಾ ಮಠಕ್ಕೆ ಬಂದಿರುವುದಕ್ಕೆ ನನಗೆ ಖುಷಿಯಾಗಿದೆ. ಬಡ ಮಕ್ಕಳಿಗೆ ಶಿಕ್ಷಣ, ದಾಸೋಹ ಆಶ್ರಯದ ಮೂಲಕ ಮಠ ಸೇವೆ ಸಲ್ಲಿಸಿದ್ದು, ದಯವೇ ಧರ್ಮದ ಮೂಲವಯ್ಯ ಎಂಬಂತೆ ಶ್ರೀಮಠ ನಡೆಯುತ್ತಿದೆ ಎಂದು ಅವರು ಹೇಳಿದರು.

‘ಸ್ವಾಮೀಜಿಗಳ ದಾರಿ ಪವಾಡ ಎನ್ನಬಹುದು

ವೀರಶೈವ-ಲಿಂಗಾಯತ ಮಠಗಳು ಸಾಕಷ್ಟು ಆದ ಸೇವೆ ಸಲ್ಲಿಸುತ್ತಾ ಬಂದಿದ್ದು, ಅದರಲ್ಲಿ ಸಿದ್ಧಗಂಗಾಮಠ ಮುಂಚೂಣಿಯಲ್ಲಿದೆ. ಶಿವಕುಮಾರ ಸ್ವಾಮೀಜಿಗಳು ಇಷ್ಟು ವರ್ಷಗಳು ಒಂದೇ ಸ್ಥಳದಲ್ಲಿ ಒಂದೇ ಕಾರ್ಯ ನಿರಂತರವಾಗಿ ಮಾಡುವ ಮೂಲಕ ಜೀವನ ಸಮರ್ಪಣೆ ಮಾಡುತ್ತಾರೆ. ಸ್ವಾಮೀಜಿಗಳ ದಾರಿಯನ್ನು ವಿಸ್ಮಯ ಹಾಗೂ ಪವಾಡ ಎನ್ನಬಹುದು ಎಂದು ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದಲಿಂಗಸ್ವಾಮೀಜಿ. ಶಿವಕುಮಾರ ಸ್ವಾಮೀಜಿಗಳ ಬದುಕಿನಲ್ಲಿ 2 ಘಟನೆಗಳಿವೆ. ಅವೆಂದರೆ ಬಡಮಕ್ಕಳಿಗೆ ಮತ್ತು ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡೋದು ಎಂದು ಶ್ರೀಗಳು ಬಯಸುತ್ತಾರೆ.

ಇದನ್ನೂ ಓದಿ: ಡಾ. ಶಿವಕುಮಾರ ಸ್ವಾಮೀಜಿಯವರ 119ನೇ ಜನ್ಮದಿನೋತ್ಸವ; ಬೆಳ್ಳಂ ಬೆಳಿಗ್ಗೆ ಮಠಕ್ಕೆ ಭಕ್ತರ ದಂಡು

ಇದೇ ವೇಳೆ ಮಾತನಾಡಿದ ರಾಜ್ಯಪಾಲ ಗೆಹ್ಲೋಟ್, ಮಾನವತಾ ಕಲ್ಯಾಣಕ್ಕಾಗಿ ದುಡಿದ ಶಿವಕುಮಾರ ಶ್ರೀಗಳ ಸೇವೆ ಅನನ್ಯವಾಗಿದೆ. ಸಬಕ್ ಸಾಥ್ ಸಬ್ ಕಾ ವಿಕಾಸ್ ರೀತಿ ಶ್ರೀಗಳು ಸೇವೆ ಮಾಡುತಿದ್ದರು ಎಂದು ಗುಣಗಾನ ಮಾಡಿದ್ದಾರೆ. ಶಿವಕುಮಾರ ಸ್ವಾಮೀಜಿಗಳು ಒಂದು ಶಕ್ತಿಯಾಗಿದ್ದರು. ಅನಾಥ ಮಕ್ಕಳ ಅಪ್ಪನಾಗಿ ಸಲಹಿದ ಕಥೆ ಅವರದ್ದು. ಸ್ವಾಮೀಜಿ ಮನಷ್ಯನಿಂದ ಮಹದೇವರಾದವರು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅಭಿಪ್ರಾಯಪಟ್ಟಿದ್ದಾರೆ. ತ್ರಿವಿಧ ದಾಸೋಹದ ಮೂಲಕ ಸಿದ್ಧಗಂಗಾ ಮಠ ಪ್ರಸಿದ್ಧಿ ಹೊಂದಿದ್ದು, ಆಧ್ಯಾತ್ಮಿಕ ಕ್ಷೇತ್ರದಲ್ಲಿ ಸಿದ್ಧಗಂಗಾ ಮಠ ಜನಪರ ಕೆಲಸ ಮಾಡಿದೆ. ಸಿದ್ಧಗಂಗಾ ಮಠ ಕೇವಲ ಧರ್ಮ ಕ್ಷೇತ್ರವಲ್ಲ. ಬದಲಾಗಿ ಶೈಕ್ಷಣಿಕ ಮತ್ತು ಸಾಮಾಜಿಕ ಕ್ರಾಂತಿಯ ಕ್ಷೇತ್ರ ಎಂದು ಗೃಹ ಸಚಿವ ಡಾ.ಪರಮೇಶ್ವರ್ ಕೂಡ ಶ್ರೀಗಳ ಸಮಾಜ ಸೇವೆಯನ್ನು ಕೊಂಡಾಡಿದ್ದಾರೆ. ಇದೇ ವೇಳೆ ರಾಷ್ಟ್ರಪತಿಗಳಿಗೆ ಮಠದ ಪರವಾಗಿ ಬಸವಣ್ಣನ ಮೂರ್ತಿಯನ್ನ ಸಿದ್ದಲಿಂಗ ಸ್ವಾಮೀಜಿ ಉಡುಗೊರೆಯಾಗಿ ನೀಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *