Headlines

ಏಪ್ರಿಲ್ 4ರಿಂದ ಜೀ ಕನ್ನಡದಲ್ಲಿ ‘ಜೋಡಿ ನಂ.1′ ಶೋ; ಜಡ್ಜ್​​-ಸ್ಪರ್ಧಿ ಇಬ್ಬರೂ ಸೂಪರ್

ಏಪ್ರಿಲ್ 4ರಿಂದ ಜೀ ಕನ್ನಡದಲ್ಲಿ ‘ಜೋಡಿ ನಂ.1′ ಶೋ; ಜಡ್ಜ್​​-ಸ್ಪರ್ಧಿ ಇಬ್ಬರೂ ಸೂಪರ್


ಏಪ್ರಿಲ್ 4 ರಿಂದ ಜೀ ಕನ್ನಡದಲ್ಲಿ 'ಜೋಡಿ ನಂ.1′ ಶೋ; ಜಡ್ಜ್ -ಸ್ಪರ್ಧಿ ಎರಡೂ ಸೂಪರ್

ಜೀ ಕನ್ನಡದಲ್ಲಿ ಹೊಸ ಹೊಸ ರಿಯಾಲಿಟಿ ಶೋಗಳು ಪ್ರಸಾರ ಕಾಣುತ್ತಾ ಇರುತ್ತವೆ. ಎಲ್ಲಾ ರಿಯಾಲಿಟಿ ಶೋಗಳು ಸಾಕಷ್ಟು ಮನರಂಜನೆ ನೀಡುವ ರೀತಿಯಲ್ಲಿದೆ. ಈಗ ಹೊಸ ರಿಯಾಲಿಟಿ ಶೋ ಪ್ರಸಾರ ಕಾಣಲು ರೆಡಿ ಆಗಿದೆ. ಅದುವೇ ‘ಜೋಡಿ ನಂಬರ್ 1’. ಏಪ್ರಿಲ್ 4 ರಂದು ರಾತ್ರಿ 9 ಗಂಟೆಗೆ ಈ ಶೋ ಪ್ರಸಾರವಾಗಲಿದೆ. ‘ಅಮೃತಧಾರೆ’ ಧಾರಾವಾಹಿ ಜೋಡಿ ರಾಜೇಶ್ ನಟರಂಗ ಹಾಗೂ ಛಾಯಾ ಸಿಂಗ್ ಸೇರಿದಂತೆ ಅನೇಕರು ಜಡ್ಜ್ ಸ್ಥಾನದಲ್ಲಿದ್ದಾರೆ ಅನ್ನೋದು ವಿಶೇಷ.

ಜೀ ಕನ್ನಡದಲ್ಲಿ ಕಾಮಿಡಿ ಕಿಲಾಡಿಗಳು, ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್, ಸರಿಗಮಪ ಸೇರಿದಂತೆ ಅನೇಕ ರಿಯಾಲಿಟಿ ಶೋಗಳು ಪ್ರಸಾರ ಕಂಡಿವೆ. ಇದರ ಮೂಲಕ ಅನೇಕ ಪ್ರತಿಭೆಗಳಿಗೆ ವಾಹಿನಿ ವೇದಿಕೆಯಾಗಿದೆ. ಈಗ ಸೆಲೆಬ್ರಿಟಿ ಜೋಡಿಯನ್ನು ತೆರೆಗೆ ತರುವ ಪ್ರಯತ್ನ ನಡೆದಿದೆ. ಈ ಶೋಗೆ ‘ಜೋಡಿ ನಂಬರ್ 1’ ಎಂದು ಹೆಸರು ಇಡಲಾಗಿದೆ.

ಹಿರಿಯ ಹಾಗೂ ಇತ್ತೀಚೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸೆಲೆಬ್ರಿಟಿ ಜೋಡಿಯನ್ನು ಈ ಶೋನಲ್ಲಿ ಕರೆತರಲಾಗುತ್ತಿದೆ. ಮನರಂಜನೆ ಜೊತೆಗೆ ಜೋಡಿಯ ಹಿನ್ನೆಲೆ, ಪರಸ್ಪರ ಭೇಟಿ ಆದ ಕಥೆ ಹಾಗೂ ಮದುವೆ ಆದ ಬಳಿಕ ಜೀವನದಲ್ಲಿ ಆದ ಬದಲಾವಣೆಯನ್ನು ರಿಯಾಲಿಟಿ ಶೋನಲ್ಲಿ ಹೇಳಲಾಗುತ್ತಿದೆ.

ಈ ಶೋನಲ್ಲಿ ತೀರ್ಪುಗಾರರೇ ಹೈಲೈಟ್. ಏಕೆಂದರೆ ಹಿರಿಯ ನಟಿ ಮಾಳವಿಕಾ ಅವಿನಾಶ್ ಜಡ್ಜ್ ಸ್ಥಾನದಲ್ಲಿದ್ದಾರೆ. ‘ಅಮೃತಧಾರೆ’ ಧಾರಾವಾಹಿ ಮೂಲಕ ಎಲ್ಲರ ಮೆಚ್ಚುಗೆ ಪಡೆದ ಭೂಮಿಕಾ-ಗೌತಮ್ ಅಲಿಯಾಸ್ ಛಾಯಾ ಸಿಂಗ್ ಮತ್ತು ರಾಜೇಶ್ ನಟರಂಗ, ನೆನಪಿರಲಿ ಪ್ರೇಮ್ ಈ ಶೋ ನ ತೀರ್ಪುಗಾರರು. ಇವರು ಸ್ಪರ್ಧಿಗಳಿಗೆ ಮಾರ್ಗದರ್ಶಕರೂ ಆಗಿರುತ್ತಾರೆ. ತೀರ್ಪುಗಾರರು ಶೋನಲ್ಲಿರೋ ಜೋಡಿಗಳಿಗೆ, ವೀಕ್ಷಕರ ದಾಂಪತ್ಯಕ್ಕೂ ಟಿಪ್ಸ್ ನೀಡುವ ಕೆಲಸ ಮಾಡಲಿದ್ದಾರೆ. ಈ ಶೋನ ಕುರಿ ಪ್ರತಾಪ್ ಮತ್ತು ಚೆಲುವೆ ಶ್ವೇತಾ ಚೆಂಗಪ್ಪ ಅವರು ನಿರೂಪಿಸಲಿದ್ದಾರೆ. ಹೀಗಾಗಿ, ಇಲ್ಲಿ ಹಾಸ್ಯಕ್ಕೆ ಯಾವುದೇ ಕೊರತೆ ಇರೋದಿಲ್ಲ.

ಇದನ್ನೂ ಓದಿ: ‘ಹೂವಿನ ಬಾಣದಂತೆ’ ಹುಡುಗಿಗೆ ಜೀ ಕನ್ನಡ ಅವಕಾಶ; ಟ್ರೋಲ್ ಮಾಡಿದವರಿಗೆ ನಿತ್ಯಶ್ರೀ ತಿರುಗೇಟು

ಶೋನಲ್ಲಿ ಭಾಗವಹಿಸಲಿರೋ ಜೋಡಿಗಳು:

ರುದ್ರ ಮಾಸ್ಟರ್ – ನಿರೀಕ್ಷ, ಧನರಾಜ್ – ಪ್ರಜ್ಞಾ, ರಜನಿ-ಅರುಣ್ ಗೌಡ, ನಯನಾ ನಾಗರಾಜ್ – ಸುಹಾಸ್, ಬಾಳು ಬೆಳಗುಂದಿ – ಮಾಲಾಶ್ರೀ, ಜಗ್ಗಪ್ಪ – ಸುಶ್ಮಿತಾ, ಮಿಮಿಕ್ರಿ ಗೋಪಿ – ಉಷಾರಾಣಿ, ಗೀತಾ ಭಾರತೀ ಭಟ್ – ರಾಜಾರಾಮ್ ಭಟ್, ಕೋಟೆ ಪ್ರಭಾಕರ್ – ಮಾಲತಿ ಹಾಗೂ ಅಭಿಲಾಷ್ – ಅಪೂರ್ವ ಜೋಡಿಯಾಗಿ ಅವರ ಜೋಡಿ. ಇವರಿಗೆ ವಿವಿಧ ಟಾಸ್ಕ್ಗಳು,ರ್ಯಾಪಿಡ್ ಫೈಯರ್ ರೀತಿಯ ಟಾಸ್ಕ್ ಇರಲಿದೆ. ಜೀ ಕನ್ನಡದಲ್ಲಿ ಪ್ರತಿ ಶನಿವಾರ ಮತ್ತು ಭಾನುವಾರ ಶೋ ಪ್ರಸಾರ ಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *