
ತುಮಕೂರು, (ಏ 01): “ಅನ್ನ-ಅಕ್ಷರ-ಆಶ್ರಯ’ ನೀಡಿ ತ್ರಿವಿಧ ದಾಸೋಹಿಯಾದ ಸಿದ್ಧಗಂಗಾ ಶ್ರೀಗಳು (ಸಿದ್ದಗಂಗಾ ಶ್ರೀ) ಸರ್ಕಾರದ ಅನೇಕ ಯೋಜನೆಗಳಿಗೆ ಮಹಾನ್ ಸ್ಪೂರ್ತಿ ಇದೆ” ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ (ಪ್ರಹ್ಲಾದ ಜೋಶಿ) ಸ್ಮರಿಸಿದರು. ತುಮಕೂರಿನಲ್ಲಿ (ತುಮಕೂರು) ಇಂದು (ಏ 01) ಶ್ರೀ ಶಿವಕುಮಾರ ಮಹಾಸ್ವಾಮಿಗಳು (ಶ್ರೀ ಶಿವಕುಮಾರ ಸ್ವಾಮೀಜಿ) 119ನೇ ಜಯಂತ್ಯುತ್ಸವದಲ್ಲಿ ನುಡಿ ನಮನ ಸಲ್ಲಿಸುತ್ತಾ, ಕೇಂದ್ರ ಸರ್ಕಾರದಲ್ಲಿ ನಾವಿಂದು ಅನುಷ್ಠಾನಕ್ಕೆ ತರುತ್ತಿರುವ ಅನೇಕ ಜನಪರ ಯೋಜನೆಗಳಿಗೆ ಈ ಮಠದ ದಾಸೋಹ ತತ್ವವೇ ಸ್ಫೂರ್ತಿಯಾಗಿದೆ ಎಂದು ಬಣ್ಣಿಸಿದರು.
ನಮ್ಮ ಸರ್ಕಾರದ ‘ಅಂತ್ಯೋದಯ’ ಕಲ್ಪನೆಗೆ ಸಿದ್ದಗಂಗಾ ಮಠವೇ ದಾರಿದೀಪವಾಗಿದೆ. ಹಸಿದವರಿಗೆ ಅನ್ನ ನೀಡುವ ‘ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ” ಇರಲಿ, ಬಡ ಮಕ್ಕಳಿಗೆ ಶಿಕ್ಷಣದ ಹಕ್ಕು ನೀಡುವ ನೀತಿಗಳಿರಲಿ, ಎಲ್ಲರಿಗೂ ಸಮಾನ ಅವಕಾಶ ನೀಡುವ ನಮ್ಮ ಧೈರ್ಯವಿರಲಿ ಎಲ್ಲದೂ ಸಿದ್ಧಗಂಗಾ ಶ್ರೀಗಳು ಹಾಕಿಕೊಟ್ಟ ದಾಸೋಹದ ಬುನಾದಿಯಾಗಿದೆ.
ಇದನ್ನೂ ಓದಿ: ಶಿವಕುಮಾರ ಸ್ವಾಮೀಜಿ ಜನ್ಮದಿನೋತ್ಸವ: ಸಿದ್ಧಗಂಗಾ ಮಠದ ಗುಣಗಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸಾಮಾಜಿಕ ನ್ಯಾಯದ ಪ್ರತಿರೂಪ
ಹಸಿದವರಿಗೆ ಅನ್ನ, ನಿರಾಶ್ರಿತರಿಗೆ ಆಶ್ರಯ, ಅಜ್ಞಾನಿಗಳಿಗೆ ಶಿಕ್ಷಣ ಒದಗಿಸುತ್ತಾ ಸಹಸ್ರಾರು ಕುಟುಂಬಗಳನ್ನು ಬೆಳಗಿದ ಸಿದ್ಧಗಂಗಾ ಶಿವಕುಮಾರ ಶ್ರೀಗಳು ಸಾಮಾಜಿಕ ನ್ಯಾಯದ ಪ್ರತಿರೂಪವೇ ಆಗಿದ್ದರು. ತುಮಕೂರು ಸಿದ್ದಗಂಗಾ ಮಠ ಕೇವಲ ಮಠವಲ್ಲ, ಇದು ಆಧುನಿಕ ಭಾರತದ ಸಂಸ್ಕಾರದ ಕೇಂದ್ರ. ಇಲ್ಲಿ ಪ್ರತಿ ದಿನವೂ ನಡೆಯುವ ‘ಅನ್ನ ದಾಸೋಹ’, ‘ಅಕ್ಷರ ದಾಸೋಹ” ವಿಶ್ವದ ಯಾವುದೇ ದೊಡ್ಡ ವಿಶ್ವವಿದ್ಯಾಲಯಕ್ಕೆ ಮತ್ತು ಸರ್ಕಾರಕ್ಕೆ ಮಾದರಿ ಎಂದು ಜೋಶಿ ಹೇಳಿದರು.
ಡಾ.ಶ್ರೀ ಶಿವಕುಮಾರ ಸ್ವಾಮೀಜಿಗಳು ಮಹಾನ್ ಸಂತರಷ್ಟೇ ಅಲ್ಲ ಅವರೊಂದು ದಿವ್ಯಶಕ್ತಿ. ಅವರು ಪ್ರಾರಂಭಿಸಿದ “ಅನ್ನದಾಸೋಹ” ಕೇವಲ ಊಟವಲ್ಲ. ಸಮಾನತೆಯ ಸಂದೇಶ. ಜಾತಿ-ಧರ್ಮ-ಬಡತನವೆಂಬ ಬೇಧ ತೊಡೆದು ಹಾಕಿ ಜಗತ್ತಿಗೆ ಮಾನವೀಯ ಮಂತ್ರವನ್ನು ಸಾರಿದ ದೈವಪುರುಷರು ಎಂದು ಸ್ಮರಿಸಿದರು.
1930ರಲ್ಲಿ ಮಠದ ಜವಾಬ್ದಾರಿ ವಹಿಸಿಕೊಂಡು ದೀನ ದಲಿತರು, ನಿರ್ಗತಿಕರಿಗಾಗಿ ಶ್ರೀಗಳ ಪಟ್ಟ ಶ್ರಮದ ಕಣ್ಣ ಮುಂದಿದೆ. ಬಸವಣ್ಣನವರ “ಕಾಯಕವೇ ಕೈಲಾಸ” ತತ್ವವನ್ನು ಅಕ್ಷರಶಃ ಪಾಲಿಸಿದವರು ಶ್ರೀಗಳು. ಜೀವನದ 111 ವರ್ಷಗಳಲ್ಲಿ ಅವರು ಒಂದು ದಿನವೂ ವಿಶ್ರಮಿಸಲಿಲ್ಲ. ಅವರ ಹಣೆಯಲ್ಲಿ ವಿಭೂತಿ ಸದಾ ಸಮಾಜದ ಹಿತಚಿಂತನೆ ಇರುತ್ತಿತ್ತು. ಅವರದ್ದು ಅನ್ನ-ಅರಿವು ಮತ್ತು ಆಧ್ಯಾತ್ಮದ “ತ್ರಿವಿಧ ದಾಸೋಹ” ಎಂದು ಹೇಳಿದರು.
ಸಿದ್ಧಗಂಗಾ ಮಠದಲ್ಲಿ ಪ್ರತಿದಿನ 10,000 ಹೆಚ್ಚು ವಿದ್ಯಾರ್ಥಿಗಳು ಮತ್ತು ಯಾತ್ರಿಕರಿಗೆ ಉಚಿತವಾಗಿ ಆಹಾರ, ವಸತಿ ಕಲ್ಪಿಸಲಾಗುತ್ತಿದೆ. ನರ್ಸರಿಯಿಂದ ತಾಂತ್ರಿಕ (SIT), ಪಾಲಿಟೆಕ್ನಿಕ್, ಬಿ.ಎಡ್, ಮತ್ತು ಸಂಸ್ಕೃತ ಪಾಠಶಾಲೆಗಳವರೆಗೆ 124ಕ್ಕೂ ಹೆಚ್ಚು ಶೈಕ್ಷಣಿಕ ಸಂಸ್ಥೆಗಳನ್ನು ನಡೆಸುತ್ತಿದೆ ಎಂದು ಶ್ಲಾಘಿಸಿದರು.
ಅನ್ನದಾಸೋಹದ ಓಲೆ ನಿರಂತರ
ಶ್ರೀಮಠ ಗ್ರಾಮೀಣ, ಬಡವರಿಗೆ ಉಚಿತ ಆಶ್ರಯ ನೀಡಿ, ಸ್ವಾವಲಂಬಿಗಳಾಗಲು ನೆರವಾಗಿದೆ. ಸಹಾಯ ಮಾಡಿದೆ. ಅಂಧ ಮಕ್ಕಳಿಗಾಗಿ ವಿಶೇಷ ಶಾಲೆಗಳನ್ನು ನಡೆಸಿ ಪುನರ್ವಸತಿ ಕಲ್ಪಿಸಿದೆ. ಶ್ರೀಮಠದ ವಿಶೇಷತೆ ಅಂದರೆ, 90 ವರ್ಷಗಳ ಮೊದಲು ಹಚ್ಚಿದ ಅಡುಗೆ ಮನೆಯ ಓಲೆ ಇನ್ನೂ ಉರಿಯುತ್ತಲೇ ಇತ್ತು, ಇದು ನಿರಂತರ ಎಂದು ಸಚಿವ ಜೋಶಿ ಆಶಿಸಿದರು.
ಶ್ರೀ ಸಿದ್ದಗಂಗಾ ಮಠದ ಕೊಡುಗೆಯಿಂದಲೇ ಕರುನಾಡು ಇಂದು ದಾಸೋಹದ ನಾಡಾಗಿದೆ ಎಂದರೆ ತಪ್ಪಾಗಲಾರದು. ಜನರಿಗೆ ಉತ್ತಮ ಹುದ್ದೆ, ಉನ್ನತ ಸ್ಥಾನಕ್ಕೇರಿದ್ದಾರೆ, ಅತ್ಯುತ್ತಮ ಸಾಧನೆ ತೋರಿದ್ದಾರೆ ಎಂದರೆ ಕಾರಣ ಶ್ರೀಗಳ ತ್ರಿವಿಧ ದಾಸೋಹವೆಂದು ಬಣ್ಣಿಸಿದರು.
ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿ ಆಗಿದ್ದಾಗ ಸಿದ್ದಗಂಗಾ ಮಠಕ್ಕೆ ಬಂದು, ಸ್ವಾಮೀಜಿಗಳ ಪದಸ್ಪರ್ಶಿ ಆಶೀರ್ವಾದ ಪಡೆದ ಕ್ಷಣ ಸಂಸ್ಕೃತಿಯ ನಮನದ ಸಂಕೇತ. ‘ಶಿವಕುಮಾರ ಸ್ವಾಮಿಗಳು ನಡೆಯುವ ದೇವರು’ ಎಂದಿದ್ದರು ಮತ್ತು ಉತ್ತರದಲ್ಲಿ ಗಂಗಾ ನದಿ ಹರಿಯುತ್ತಿದೆ, ದಕ್ಷಿಣದಲ್ಲಿ ಈ ಸಿದ್ದಗಂಗೆ ಹರಿಯುತ್ತಿದೆ ಎಂದ ಮಾತು ನಿಜಕ್ಕೂ ಸತ್ಯದ ದಾರಿದೀಪವಾಗಿದೆ.
ದಾಸೋಹ ದಿನ ಘೋಷಣೆ ಪಾಲಿಸಲಿ ರಾಜ್ಯ ಸರ್ಕಾರ: ರಾಜ್ಯದಲ್ಲಿ ಈ ಹಿಂದೆ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದಾಗ ಬಿಜೆಪಿ ಸರ್ಕಾರ ‘ಜನವರಿ 21’ ರಿಂದ “ದಾಸೋಹ ದಿನ” ಎಂದು ಘೋಷಿಸಲಾಗಿದೆ, ಇಂದಿನ ರಾಜ್ಯ ಸರ್ಕಾರ ಅದನ್ನು ಪಾಲಿಸುವ ಮೂಲಕ ಶ್ರೀಗಳಿಗೆ ಗೌರವ ನೀಡಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಇದೇ ವೇಳೆ ಪ್ರಕಟಿಸಿದರು.
ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ರಾಜ್ಯಪಾಲ ಥಾವರ್ ಸಿದ್ಧ ಚಂದ್ ಗೆಹ್ಲೋಟ್, ಗಂಗಾ ಮಠದ ಅಧ್ಯಕ್ಷರಾದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಜಿ, ಸಿದ್ಧಗಂಗಾ ಕಿರಿಯ ಶ್ರೀಗಳಾದ ಶ್ರೀ ಶಿವಸಿದ್ಧೇಶ್ವರ ಸ್ವಾಮೀಜಿ, ಕೇಂದ್ರ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ, ರಾಜ್ಯ ಸರ್ಕಾರದ ಆದೇಶ.