ಸುಳ್ಳು ಮತ್ತು ಆಧಾರರಹಿತ; ಕದನ ವಿರಾಮದ ಕುರಿತ ಟ್ರಂಪ್ ಹೇಳಿಕೆಯನ್ನು ನಿರಾಕರಿಸಿದ ಇರಾನ್

ಸುಳ್ಳು ಮತ್ತು ಆಧಾರರಹಿತ; ಕದನ ವಿರಾಮದ ಕುರಿತ ಟ್ರಂಪ್ ಹೇಳಿಕೆಯನ್ನು ನಿರಾಕರಿಸಿದ ಇರಾನ್


ಸುಳ್ಳು ಮತ್ತು ಆಧಾರರಹಿತ; ಕದನ ವಿರಾಮದ ಕುರಿತ ಟ್ರಂಪ್ ಹೇಳಿಕೆಯನ್ನು ನಿರಾಕರಿಸಿದ ಇರಾನ್

ಟೆಹ್ರಾನ್, ಏಪ್ರಿಲ್ 1: ಇರಾನ್ ಜೊತೆಗಿನ ಅಮೆರಿಕ ಮತ್ತು ಇಸ್ರೇಲ್ ಯುದ್ಧ ಸದ್ಯಕ್ಕೆ ನಿಲ್ಲುವ ಲಕ್ಷಣಗಳೇ ಕಾಣುತ್ತಿಲ್ಲ. ಇರಾನ್ (ಇರಾನ್ ಯುದ್ಧ) ಕದನ ವಿರಾಮವನ್ನು ಕೋರಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ ಹೇಳಿಕೆಗಳನ್ನು ಇರಾನ್ ಬಲವಾಗಿ ನಿರಾಕರಿಸಿದ್ದಾರೆ. ಇರಾನ್ ರಾಜ್ಯ ಟಿವಿ ಜೊತೆ ಮಾತನಾಡಿದ ಇರಾನ್ ದೇಶದ ವಿದೇಶಾಂಗ ಸಚಿವಾಲಯದ ವಕ್ತಾರರು ಈ ಹೇಳಿಕೆಯನ್ನು “ಸುಳ್ಳು ಮತ್ತು ಆಧಾರರಹಿತ” ಎಂದು ಕರೆದಿದ್ದಾರೆ. ಕದನವಿರಾಮದ ಯಾವುದೇ ವಿನಂತಿಯನ್ನು ಇರಾನ್ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

“ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷರ ಹಾಸ್ಯಾಸ್ಪದದ ಮೂಲಕ ಹಾರ್ಮುಜ್ ಜಲಸಂಧಿಯನ್ನು ಶತ್ರುಗಳಿಗೆ ತೆರೆಯಲು ಸಾಧ್ಯವಿಲ್ಲ” ಎಂದು ಇರಾನ್ ಹೇಳಿದ್ದಾರೆ.

ಇದನ್ನೂ ಓದಿ: ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾದಲ್ಲಿದ್ದಾರಾ? ರಾಯಭಾರಿ ಹೇಳಿದ್ದೇನು?

ಟ್ರಂಪ್ ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಇರಾನ್ ಕದನ ವಿರಾಮವನ್ನು ಕೋರಿ ಅಮೆರಿಕವನ್ನು ಸಂಪರ್ಕಿಸಿದೆ ಎಂದು ಹೇಳಿದ ನಂತರ ಈ ಪ್ರತಿಕ್ರಿಯೆ ಬಂದಿದೆ. ಇರಾನ್ ನಮ್ಮ ಬಳಿ ಬಂದು ಕದನವಿರಾಮ ಘೋಷಿಸುವ ಮಾತುಕತೆಗೆ ಮುಂದಾಗಿದೆ. ಆದರೆ, ನಾನು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆದ ಮೇಲೆ ನೋಡುತ್ತಿದ್ದೇನೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಇದನ್ನೂ ಓದಿ: ಇರಾನ್ ಕದನವಿರಾಮಕ್ಕೆ ಮನವಿ ಮಾಡಿದೆ; ಡೊನಾಲ್ಡ್ ಟ್ರಂಪ್ ಸ್ಫೋಟಕ ಹೇಳಿಕೆ

ಇರಾನ್ ಈ ಹೇಳಿಕೆಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದೆ. ಈ ಹೇಳಿಕೆಯಲ್ಲಿ ಯಾವುದೇ ಸತ್ಯವಿಲ್ಲ, ಇದು ಇರಾನ್ ದೇಶದ ನಿಲುವನ್ನು ಪ್ರತಿಬಿಂಬಿಸುವುದಿಲ್ಲ ಎಂದು ಸಮರ್ಥಿಸಿಕೊಂಡಿದೆ. ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಕೂಡ ಹೇಳಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *