ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಉತ್ಸವದ ವೈಭವಕ್ಕೆ ಸಾಕ್ಷಿಯಾದ ಲಕ್ಷಾಂತರ ಭಕ್ತರು

ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಉತ್ಸವದ ವೈಭವಕ್ಕೆ ಸಾಕ್ಷಿಯಾದ ಲಕ್ಷಾಂತರ ಭಕ್ತರು


ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಉತ್ಸವದ ವೈಭವಕ್ಕೆ ಸಾಕ್ಷಿಯಾದ ಭಕ್ತರು

ಬೆಂಗಳೂರು, ಏಪ್ರಿಲ್ 2: ಬೆಂಗಳೂರು ನಗರದ ಸಾಂಪ್ರದಾಯಿಕ ಮತ್ತು ಸಾಂಪ್ರದಾಯಿಕ ಉತ್ಸವವಾದ ಬೆಂಗಳೂರು ಕರಗ ಭಕ್ತಿಭಾವ ಹಾಗೂ ವೈಭವದಿಂದ ಬುಧವಾರ ರಾತ್ರಿ ನೆರವೇರಿತು. ಕಣ್ಣು ಹಾಯಿಸಿದಷ್ಟು ಭಕ್ತಸಾಗರ ಕಂಡುಬಂದಿದ್ದು, ಎಲ್ಲೆಡೆ “ಗೋವಿಂದ ಗೋವಿಂದ” ಎಂಬ ನಾಮಸ್ಮರಣೆಯೊಂದಿಗೆ ಭಕ್ತರು ಹರ್ಷೋದ್ಘಾರ ಮಾಡಿದರು. ಮಲ್ಲಿಗೆ ಹೂಗಳಿಂದ ಅಲಂಕೃತಗೊಂಡ ದ್ರೌಪದಮ್ಮನ ಕರಗ ಭಕ್ತಿಯ ಕೇಂದ್ರಬಿಂದುವಾಗಿದ್ದು, ಖಡ್ಗ ಹಿಡಿದ ವೀರಕುಮಾರರ ಅಬ್ಬರ ಮಧ್ಯೆ ಕರಗ ಮೆರವಣಿಗೆ ರಾತ್ರಿಯಿಡೀ ಸಂಭ್ರಮ ಸಡಗರದಿಂದ ಸಾಗಿತು. ನಗರದ ವಿವಿಧ ಭಾಗಗಳಲ್ಲಿ ನಡೆದ ರಥಗಳ ಮೆರವಣಿಗೆ ವೈಭವವನ್ನು ಸಾವಿರಾರು ಭಕ್ತರು ಕಣ್ತುಂಬಿಕೊಂಡರು.

ಈ ಸಂದರ್ಭದಲ್ಲಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಶಾಸಕರಾದ ಗರುಡಾಚಾರ್, ಎನ್.ಎ. ಹ್ಯಾರಿಸ್ ಸೇರಿದಂತೆ ಕರಗದ ದರ್ಶನ ಪಡೆದು ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *