Headlines

West Asia Conflict: ಬೆಲೆ ಏರಿಕೆ ತಡೆಯಲು ಮೋದಿ ಖಡಕ್ ಸೂಚನೆ, ಎಲ್‌ಪಿಜಿ ಆಮದು ಹೆಚ್ಚಿಸಲು ಪ್ಲಾನ್ | West Asia Conflict Pm Modi Orders Action To Control Price Hike Boost Lpg Imports Rav

ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದಿಂದ ದೇಶದ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಪ್ರಧಾನಿ ಮೋದಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಬೆಲೆ ಏರಿಕೆ ನಿಯಂತ್ರಿಸಲು ನಿಗಾ ವಹಿಸುವಂತೆ ಹಾಗೂ ಪೆಟ್ರೋಲಿಯಂ ಉತ್ಪನ್ನಗಳು ಮತ್ತು ರಸಗೊಬ್ಬರಗಳ ಸಾಕಷ್ಟು ದಾಸ್ತಾನು ಖಚಿತಪಡಿಸಿಕೊಳ್ಳುವಂತೆ ಹೇಳಿದ್ದಾರೆ. 

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಬಿಸಿ ಸಾಮಾನ್ಯ ಜನರಿಗೆ ತಟ್ಟಬಾರದು. ಇದಕ್ಕಾಗಿ ಬೇಕಾದ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಖಡಕ್ ಸೂಚನೆ ನೀಡಿದ್ದಾರೆ. ಬೆಲೆ ಏರಿಕೆ ನಿಯಂತ್ರಿಸಲು ನಿರಂತರವಾಗಿ ನಿಗಾ ಇಡುವಂತೆ ಪ್ರಧಾನಿ ಮೋದಿ ಸಚಿವರಿಗೆ ನಿರ್ದೇಶನ ನೀಡಿದ್ದಾರೆ.

ದೇಶದಲ್ಲಿ ಪೆಟ್ರೋಲಿಯಂ ಉತ್ಪನ್ನಗಳು ಮತ್ತು ರಸಗೊಬ್ಬರಗಳ ಸಾಕಷ್ಟು ದಾಸ್ತಾನು ಇದೆ. ಜೊತೆಗೆ, ಬೇರೆ ಬೇರೆ ದೇಶಗಳಿಂದ ಎಲ್‌ಪಿಜಿ ಆಮದು ಮಾಡಿಕೊಳ್ಳುವ ಪ್ರಯತ್ನಗಳು ನಡೆಯುತ್ತಿವೆ ಎಂದು ಮೋದಿ ತಿಳಿಸಿದ್ದಾರೆ. 

ಇದನ್ನೂ ಓದಿ: ಕೇರಳವನ್ನು ಕಾಂಗ್ರೆಸ್ ಮುಕ್ತ ಮಾಡಲು ರಾಹುಲ್ ಪ್ರಯತ್ನ: ರಾಜೀವ್ ಚಂದ್ರಶೇಖರ್ ವ್ಯಂಗ್ಯ

ಹೋರ್ಮುಜ್ ಜಲಸಂಧಿ ಮೂಲಕ ಭಾರತದ ಹಡಗುಗಳು ಸುರಕ್ಷಿತವಾಗಿ ಸಂಚರಿಸಲು ಸರ್ಕಾರ ರಾಜತಾಂತ್ರಿಕ ಪ್ರಯತ್ನಗಳನ್ನು ಮುಂದುವರಿಸಲಿದೆ. ಈ ಯುದ್ಧದ ಪರಿಸ್ಥಿತಿಯಲ್ಲಿ, ಜನರಿಗೆ ಸರಿಯಾದ ಮಾಹಿತಿ ತಲುಪುವಂತೆ ನೋಡಿಕೊಳ್ಳಬೇಕು ಎಂದು ಭದ್ರತಾ ಕ್ಯಾಬಿನೆಟ್ ಸಮಿತಿ (CCS) ಸಭೆಯಲ್ಲಿ ಪ್ರಧಾನಿ ನಿರ್ದೇಶನ ನೀಡಿದರು.

ಇದನ್ನೂ ಓದಿ: ಕೊಲ್ಲಿ ಯುದ್ಧ ಜಾಗತಿಕ ಬಿಕ್ಕಟ್ಟು. ಇದನ್ನು ನಾವು ತಾಳ್ಮೆ, ಒಗ್ಗಟ್ಟಿನಿಂದ ಎದುರಿಸಬೇಕು, ರಾಜಕೀಯಕ್ಕಾಗಿ ಟೀಕೆ ಬೇಡ: ವಿಪಕ್ಷಕ್ಕೆ ಮೋದಿ ಮನವಿ

Source link

Leave a Reply

Your email address will not be published. Required fields are marked *