Headlines

ಕುಮಾರಸ್ವಾಮಿ-ಲೋಕಾಯುಕ್ತ ಎಡಿಜಿಪಿ ಜಟಾಪಟಿ ಕ್ಲೈಮ್ಯಾಕ್ಸ್ ಹಂತಕ್ಕೆ: ರಾಜಿ ಸಂಧಾನಕ್ಕೆ ಸಮ್ಮತಿ

ಕುಮಾರಸ್ವಾಮಿ-ಲೋಕಾಯುಕ್ತ ಎಡಿಜಿಪಿ ಜಟಾಪಟಿ ಕ್ಲೈಮ್ಯಾಕ್ಸ್ ಹಂತಕ್ಕೆ: ರಾಜಿ ಸಂಧಾನಕ್ಕೆ ಸಮ್ಮತಿ


ಕುಮಾರಸ್ವಾಮಿ-ಲೋಕಯುಕ್ತ ಎಡಿಜಿಪಿ ಜಟಾಪಟಿ ಕ್ಲೈಮ್ಯಾಕ್ಸ್ ಹಂತಕ್ಕೆ: ರಾಜಿ ಸಂಧಾನಕ್ಕೆ ಸಮ್ಮತಿ

ಬೆಂಗಳೂರು, (ಏಪ್ರಿಲ್ 02): ಲೋಕಾಯುಕ್ತ ಎಡಿಜಿಪಿ ಮತ್ತು ಎಸ್‌ಐಟಿ ಮುಖ್ಯಸ್ಥ ಎಂ.ಚಂದ್ರಶೇಖರ್ (ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್) ಅವರಿಗೆ ಮತ್ತು ಅವರ ಕುಟುಂಬಕ್ಕೆ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ (ಎಚ್‌ಡಿ ಕುಮಾರಸ್ವಾಮಿ) ಬೆದರಿಕೆ ಹಾಕಿರುವ ಪ್ರಕರಣ ರಾಜಿ ಸಂಧಾನ ಮಾತುಕತೆ ಹಂತಕ್ಕೆ ಬಂದಿದೆ. ಎಚ್.ಡಿ.ಕುಮಾರಸ್ವಾಮಿ ಹಾಗೂ ದೂರುದಾರ ಚಂದ್ರಶೇಖರ್ ರಾಜಿ ಸಂದ ಮಾತುಕತೆಗೆ ಒಪ್ಪಿಗೆ ಸೂಚಿಸಿದ್ದಾರೆ. ಹೀಗಾಗಿ ಅಧಿಕ (ಕರ್ನಾಟಕ ಹೈಕೋರ್ಟ್).ರಾಜಿ ಸಂಧಾನಕ್ಕೆ ಸೂಕ್ತ ಮಧ್ಯಸ್ಥಿಕೆದಾರರನ್ನು ನೇಮಿಸಲಾಗಿದೆ ಎಂದು ಹೇಳಿದ್ದು, ಹಾಜರಾಗಬೇಕಾದ ದಿನಾಂಕವನ್ನು ತಿಳಿಸಲಾಗಿದೆ ಎಂದು ಇಬ್ಬರು ವಕೀಲರಿಗೆ ಹೇಳಿ ವಿಚಾರಣೆಯನ್ನು ಏಪ್ರಿಲ್ 30 ಕ್ಕೆ ಮುಂದೂಡಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಸಾಲು ಸಾಲು ಆರೋಪ ಮಾಡಿರುವ ಸಂಬಂಧ ಎಂ ಚಂದ್ರಶೇಖರ್ ಅವರು ಕುಮಾರಸ್ವಾಮಿ ವಿರುದ್ಧ ಬೆದರಿಕೆ ಪ್ರಕರಣ ದಾಖಲಿಸಿದ್ದರು. ಬಳಿಕ ಪ್ರಕರಣ ರದ್ದುಕೋರಿ ಕುಮಾರಸ್ವಾಮಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದು ಈ ಅರ್ಜಿಯನ್ನು ಹಲವು ಬಾರಿ ವಿಚಾರಣೆ ನಡೆಸಲಾಗಿದೆ. ಕೊನೆಗೆ ಪ್ರಕರಣವನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಿ ಎಂದು ಕುಮಾರಸ್ವಾಮಿ ಹಾಗೂ ಚಂದ್ರಶೇಖರ್ ಪರ ವಕೀಲರಿಗೆ ಸಲಹೆ ನೀಡಿದ್ದರು. ಅದರಂತೆ ಇದೀಗ ರಾಜಿ ಸಂಧಾನ ಮಾತುಕತೆಗೆ ಇಬ್ಬರು ವಕೀಲರು ಸಮ್ಮತಿಸಿದ್ದಾರೆ. ಈ ನ್ಯಾಯಾಲಯ, ರಾಜಿ ಸಂಧಾನಕ್ಕೆ ಸೂಕ್ತ ಮಧ್ಯಸ್ಥಿಕೆದಾರರನ್ನು ನೇಮಿಸಲಾಯಿತು. ಹಾಜರಾಗಬೇಕಾದ ದಿನಾಂಕ, ಸ್ಥಳವನ್ನು ತಿಳಿಸಲಾಗುವುದು ಎಂದು ಎರಡೂ ಕಡೆ ವಕೀಲರಿಗೆ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಪೀಠ ಸೂಚಿಸಿ ವಿಚಾರಣೆ ಏಪ್ರಿಲ್ 30 ಕ್ಕೆ ಮುಂದೂಡಲಾಗಿದೆ.

ಇದನ್ನೂ ಓದಿ: ಬೆದರಿಕೆ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ದೂರು ದಾಖಲಿಸಿದ ಎಡಿಜಿಪಿ ಚಂದ್ರಶೇಖರ್

ಪ್ರಕರಣದ ಹಿನ್ನೆಲೆ

ನಿಯಮ ಉಲ್ಲಂಘಿಸಿ ಸಾಯಿ ಮಿನರಲ್ಸ್ ಕಂಪನಿಗೆ ಗಣಿ ಗುತ್ತಿಗೆ ಮಂಜೂರು ಮಾಡಿದ ಆರೋಪದ ಮೇಲೆ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಲೋಕಾಯುಕ್ತ ಎಸ್‌ಐಟಿ ಎಡಿಜಿಪಿ ಚಂದ್ರಶೇಖರ್ ಅವರು ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಇದರಿಂದ ಕುಮಾರಸ್ವಾಮಿ, ನಿಖಿಲ್‌ ಮತ್ತು ಶಾಸಕ ಸುರೇಶ್‌ ಬಾಬು ಮಾಧ್ಯಮಗಳಲ್ಲಿ ಚಂದ್ರಶೇಖರ್‌ ಅವರ ವಿರುದ್ಧ ಆರೋಪ ಮಾಡಿದ್ದಾರೆ.

ಈ ಸಂಬಂಧ ಎಡಿಜಿಪಿ ಚಂದ್ರಶೇಖರ್ ಅವರು ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ, ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಮತ್ತು ಸುರೇಶ್ ಬಾಬು ತಮ್ಮ ವಿರುದ್ಧ ಸುಳ್ಳು ಆರೋಪ ಮಾಡಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದರು. ಅಧಿಕಾರಿ ಸರ್ಕಾರಿ ಅಧಿಕಾರಿಗೆ ಬೆದರಿಕೆ ಹಾಕಿದ ಆರೋಪ ಸಂಬಂಧ ನ್ಯಾಯ ಭಾರತೀಯ ಸಂಹಿತೆ (ಬಿಎನ್‌ಎಸ್‌) ಸೆಕ್ಷನ್‌ 223 ಮತ್ತು 224 ಅಡಿ ಎಫ್‌ಐಆರ್‌ ದಾಖಲಿಸಿದ್ದಾರೆ. ಬಳಿಕ ಕುಮಾರಸ್ವಾಮಿ, ಈ ಪ್ರಕರಣವನ್ನು ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *