ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆಸಿ ಕುಟುಂಬದವರ ಮೇಲೆ ಹಲ್ಲೆ

ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆಸಿ ಕುಟುಂಬದವರ ಮೇಲೆ ಹಲ್ಲೆ


ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆಸಿ ಕುಟುಂಬದವರ ಮೇಲೆ ಹಲ್ಲೆ

ಚಿತ್ರದುರ್ಗ, ಏಪ್ರಿಲ್ 03: ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ ವ್ಯಕ್ತವಾದ ಗಲಾಟೆ ಸಂಭವಿಸಿದೆ. ಬೇವಿನಹಳ್ಳಿಯ ತೀರ್ಥೇಶ್ವರ ನಾಯ್ಕ್ ತಮ್ಮ ಅತ್ತೆ ಮಗಳು ಭಾವನಾ ಜೊತೆ ಫೆಬ್ರವರಿ 8 ರಂದು ರಿಜಿಸ್ಟರ್ ಮದುವೆಯಾಗಿದ್ದರು. ಆದರೆ ಭಾವನಾ ಈ ಮದುವೆಗೆ ವಿರೋಧ ವ್ಯಕ್ತಪಡಿಸಿ, ತೀರ್ಥೇಶ್ವರ ವಿರುದ್ಧ ಮತಾಂತರ ಆರೋಪ ಮಾಡಿದ್ದಾರೆ. ನಿನ್ನೆ ರಾಜಿ ಸಂಧಾನಕ್ಕೆ ಕರೆದು ಗಲಾಟೆ ನಡೆದಿದ್ದು, ಯುವತಿಯ ದೊಡ್ಡಪ್ಪ ಮಲ್ಲೇಶ್ ನಾಯ್ಕ್ ಸೇರಿದಂತೆ ಮೂವರಿಗೆ ಗಾಯಗಳಾಗುವೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ತೀರ್ಥೇಶ್ವರ ನಾಯ್ಕ್ ಮತ್ತು ಅವರ ಕುಟುಂಬದ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ. ಈ ವೇಳೆ ನಡೆದ ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆ ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *