SSLC ಪರೀಕ್ಷೆಯ ತೃತೀಯ ಭಾಷೆ ಅಂಕಕ್ಕೆ ಕೊಕ್: ನಿರ್ಧಾರ ಪರಿಶೀಲಿಸುವಂತೆ ಸಿಎಸ್​​ಗೆ ರಾಜ್ಯಪಾಲರ ಪತ್ರ

SSLC ಪರೀಕ್ಷೆಯ ತೃತೀಯ ಭಾಷೆ ಅಂಕಕ್ಕೆ ಕೊಕ್: ನಿರ್ಧಾರ ಪರಿಶೀಲಿಸುವಂತೆ ಸಿಎಸ್​​ಗೆ ರಾಜ್ಯಪಾಲರ ಪತ್ರ


ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತೃತೀಯ ಭಾಷೆ ಅಂಕಕ್ಕೆ ಕೊಕ್: ನಿರ್ಧಾರ ಪರಿಶೀಲಿಸುವಂತೆ ಎಸ್‌ಎಸ್‌ಗೆ ರಾಜ್ಯಪಾಲರ ಪತ್ರ

ಬೆಂಗಳೂರು, ಏಪ್ರಿಲ್ 03: ಎಸ್.ಎಸ್.ಎಲ್.ಸಿ ಹಿಂದಿ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್ ನೀಡುವ ರಾಜ್ಯ ಸರ್ಕಾರದ ನಿರ್ಧಾರ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿಗೆ ರಾಜ್ಯಪಾಲರು ಪತ್ರ ಬರೆದಿದ್ದಾರೆ. ಈ ಕುರಿತು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್ ಲೆಟರ್ ಬರೆದಿದ್ದು, ಸರ್ಕಾರದ ನಿರ್ಧಾರವನ್ನು ಮರು ಪರಿಶೀಲನೆ ಮಾಡುವಂತೆ ತಿಳಿಸಲಾಗಿದೆ. SSLC ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಅಂಕಗಳನ್ನು ನೀಡದೆ ಕೇವಲ ಗ್ರೇಡ್ ನೀಡುವ ನಿರ್ಧಾರವನ್ನು ಮರು ಪರಿಶೀಲಿಸಿ. ಭಾಷಾವೈವಿಧ್ಯತೆ, ಜಾಗೃತಿ, ಬೌದ್ಧಿಕ ಬೆಳವಣಿಗೆಯನ್ನು ಬೆಳೆಸುವಲ್ಲಿ ತೃತೀಯ ಭಾಷೆಯು ಪ್ರಮುಖ ಪಾತ್ರ ವಹಿಸುತ್ತದೆ. ಹೀಗಾಗಿ ಗ್ರೇಡ್ ನೀಡಿದರೆ ಶೈಕ್ಷಣಿಕ ಪ್ರಾಮುಖ್ಯತೆ ಕಡಿಮೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಜೊತೆಗೆ ಸರ್ಕಾರದ ಈ ನಿರ್ಧಾರ ವಿದ್ಯಾರ್ಥಿಗಳು ಕಲಿಯುವ ಆಸಕ್ತಿಯ ಮೇಲೆ ಪರಿಣಾಮ ಬೀರಬಹುದು. ಶಿಕ್ಷಣದ ಮೇಲೆ ಬೀರುವ ಪರಿಣಾಮದ ಬಗ್ಗೆ ಪೋಷಕರಿಗೂ ಈ ಆತಂಕವಿದೆ, ರಾಜ್ಯಪಾಲರು ವಿಷಯವನ್ನು ಗಮನಿಸಿದ್ದಾರೆ. ಈ ರೀತಿಯಾಗಿ ಶೈಕ್ಷಣಿಕ, ಆಡಳಿತಾತ್ಮಕ ಅಂಶವನ್ನು ಗಮನದಲ್ಲಿಟ್ಟುಕೊಂಡು ಈ ಬಗ್ಗೆ ಸಂಬಂಧಿತ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಶೈಕ್ಷಣಿಕ ಉದ್ದೇಶಗಳಿಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಿ ಎಂದು ಎಸ್‌ಎಸ್‌ಎಸ್‌ಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭು ಬರೆದಿದ್ದಾರೆ.

ಇದನ್ನೂ ಓದಿ: SSLC ತೃತೀಯ ಭಾಷೆ ವಿವಾದ; ಉನ್ನತ ಮಟ್ಟದ ಮೆಟ್ಟಿಲೇರಿದ ಸರ್ಕಾರದ ‘ಗ್ರೇಡಿಂಗ್’ ನಿರ್ಧಾರ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಭಾಷೆಯನ್ನು ಕಡ್ಡಾಯಗೊಳಿಸಬಾರದು ಮತ್ತು ಅಂಕ ಪಟ್ಟಿಯಿಂದ ಹೊರಗಿಡುವಂತೆ ವಿವಿಧ ಕನ್ನಡ ಸಂಘಟನೆಗಳು ಸರ್ಕಾರಕ್ಕೆ ಒತ್ತಾಯಿಸಿವೆ. ಆ ಬೆನ್ನಲ್ಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 525 ಅಂಕಗಳನ್ನು ನಿಗದಿ ಮಾಡಿ, ತೃತೀಯ ಭಾಷೆಯ ಅಂಕಕ್ಕೆ ಸರ್ಕಾರ ಕೊಕ್ ನೀಡಿತ್ತು. ಇನ್ನು ಮುಂದೆ ತೃತೀಯ ಭಾಷೆಯ (ಹಿಂದಿ, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು ಮತ್ತು ಮರಾಠಿ) ಅಂಕಗಳನ್ನು ಒಟ್ಟು ಅಂಕಗಳಿಗೆ ಪರಿಗಣಿಸಲಾಗಿದೆ. ಬದಲಿಗೆ ತೃತೀಯ ಭಾಷೆ ಪರೀಕ್ಷೆಯ ಅಂಕವನ್ನು ಗ್ರೇಡ್ ಮೂಲಕ ಗುರಿಪಡಿಸಲಾಗಿದೆ. ಆದರೆ ವಿದ್ಯಾರ್ಥಿಗಳು ತೃತೀಯ ಭಾಷೆಯ ಪರೀಕ್ಷೆಯನ್ನು ಬರೆಯುವುದು ಕಡ್ಡಾಯ ಎಂದು ಶಿಕ್ಷಣ ಇಲಾಖೆ ಹೇಳಿರೋದು ಭಾರಿ ಚರ್ಚೆಗೂ ಗ್ರಾಸವಾಗಿತ್ತು. ಕರ್ನಾಟಕ ಹೈಕೋರ್ಟ್‌ನಲ್ಲಿ ಈ ಸಂಬಂಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೂ ಸಲ್ಲಿಕೆಯಾಗಿರುವ ನಡುವೆ ರಾಜ್ಯಪಾಲರ ಕಡೆಯಿಂದ ಬಂದಿರುವ ಈ ಪತ್ರ ಪ್ರಾಮುಖ್ಯತೆ ಪಡೆದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *