
ದಾವಣಗೆರೆ, (ಏಪ್ರಿಲ್ 03): ಶಾಮನೂರು ಶಿವಶಂಕರಪ್ಪನವರು ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ (ದಾವಣಗೆರೆ ದಕ್ಷಿಣ ಉಪಚುನಾವಣೆ)ಎದುರಾಗಿದ್ದು, ಕಾಂಗ್ರೆಸ್ (ಕಾಂಗ್ರೆಸ್) ಹಾಗೂ ಬಿಜೆಪಿ ನಾಯಕರು ಬಿರುಸಿನ ಪ್ರಚಾರ. ಅದಕ್ಕಿಂತ ಹೆಚ್ಚಾಗಿ ಈ ಬೈಎಲೆಕ್ಷನ್ ನಲ್ಲಿ ಕಾಂಗ್ರೆಸ್ ಪಣತೊಟ್ಟಿದ್ದು, ಸಿಎಂ ಸಿದ್ದರಾಮಣ್ಣ, ಡಿಸಿಎಂ ಡಿಕೆ ಶಿವಕುಮಾರ್ ಆದಿಯಾಗಿ ಸಚಿವ, ಶಾಸಕರು, ವಿಧಾನಪರಿಷತ್ ಸದಸ್ಯರು ಮತಬೇಟೆಗಿಳಿದಿದ್ದಾರೆ. ಇನ್ನೊಂದೆಡೆ ವಿಪಕ್ಷ ಬಿಜೆಪಿ, ಆಡಳಿರೂಢ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರ ಅವರನ್ನ ಸೋಲಿಸಲು ಇನ್ನಿಲ್ಲದ ಕಸರತ್ತು ನಡೆಸಿದೆ. ಈ ನಡುವೆ ಬಿಜೆಪಿ ಶಾಸಕ ಶ್ರೀರಾಮುಲು ಅವರು ಇಂದು (ಏಪ್ರಿಲ್ 03) ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಸಮರ್ಥನನ್ನು ಸೋಲಿಸಲು ಕಾಂಗ್ರೆಸ್ ನಲ್ಲೇ ಷಡ್ಯಂತ್ರ ನಡೆದಿದೆ ಎಂದು ಸ್ಫೋಟಕ ಆರೋಪ ಮಾಡಿದ್ದಾರೆ.