
ನಾಸಿಕ್, ಏ.4: ಮಹಾರಾಷ್ಟ್ರದ ನಾಸಿಕ್‌ನಲ್ಲಿ ಭೀಕರ ಘಟನೆಯೊಂದು ನಡೆದಿದೆ. ಕಾರು ಬಾವಿಗೆ ಬಿದ್ದು 9 ಜನರು ಸಾವನ್ನಪ್ಪಿದ್ದಾರೆ. ಮೃತರಲ್ಲಿ 6 ಮಕ್ಕಳಿದ್ದರೂ ಎಂದು ಹೇಳಲಾಗಿದೆ. ನಾಸಿಕ್‌ನ ದಿಂಡೋರಿ ತಾಲ್ಲೂಕಿನಲ್ಲಿ ತಡರಾತ್ರಿ ಈ ಅಪಘಾತ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ.
ಪೊಲೀಸ್ ಪ್ರಕಾರ, ಮಾರುತಿ XL6 ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿರುವ ಬಾವಿಗೆ ಉರುಳಿ ಬಿದ್ದಿದೆ. ವಾಹನದಲ್ಲಿದ್ದ 9 ಜನ ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಮೃತರೆಲ್ಲರೂ ಇಂದೋರ್ ಗ್ರಾಮದ ದರ್ಗುಡೆ ಕುಟುಂಬದವರು ಎಂದು ತಿಳಿಸಿದ್ದಾರೆ.
ಅಪಘಾತದಲ್ಲಿ ಸಾವನ್ನಪ್ಪಿದ 6 ಮಕ್ಕಳಲ್ಲಿ 7 ವರ್ಷದ ಬಾಲಕಿಯೂ ಒಬ್ಬಳು ಎಂದು ಪೊಲೀಸರು ಹೇಳಿದ್ದಾರೆ. ಮೃತರಲ್ಲಿ ಸುನಿಲ್ ದರ್ಗುಡೆ, ಅವರ ಪತ್ನಿ ಮತ್ತು ಅವರ ಮಗಳು ಸೇರಿದ್ದಾರೆ. ಮಾಹಿತಿಯ ಪ್ರಕಾರ, ದರ್ಗುಡೆ ಕುಟುಂಬವು ಖಾಸಗಿ ಕಾರ್ಯಕ್ರಮವೊಂದಕ್ಕೆ ವಾಪಸ್ಸು ಬರುವಾಗ ಈ ಘಟನೆ ನಡೆದಿದೆ.
ಪ್ರಾಥಮಿಕ ವರದಿಗಳ ಪ್ರಕಾರ, ವಾಹನ ಚಾಲಕನ ನಿಯಂತ್ರಣ ತಪ್ಪಿ, ವಾಹನವು ನೇರವಾಗಿ ನೀರು ತುಂಬಿದ ಬಾವಿಗೆ ಬಿದ್ದಿದೆ. ಅಪಘಾತವಾದ ತಕ್ಷಣ, ಅಲ್ಲಿಯ ಜನರು ಮತ್ತು ರಕ್ಷಣಾ ಕಾರ್ಯಕ್ಕಾಗಿ ಸ್ಥಳಕ್ಕೆ ಬಂದರು. ಎನ್‌ಡಿಆರ್‌ಎಫ್ ಸಿಬ್ಬಂದಿ ಕೂಡ ಸ್ಥಳಕ್ಕೆ ತಲುಪಿ ತಕ್ಷಣ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.
ಇದನ್ನೂ ಓದಿ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು; ದಿನದ ಸ್ಥಳದಲ್ಲಿಯೇ ಸಾವು, ಮೂವರಿಗೆ ಗಾಯ
ರಕ್ಷಣಾ ಕಾರ್ಯಾಚರಣೆ ತಡರಾತ್ರಿಯವರೆಗೂ ಮುಂದುವರೆದಿದೆ ಎಂದು ಹೇಳಲಾಗಿದೆ. ಆದರೆ, ಅಪಘಾತದ ಸ್ಥಳದಲ್ಲಿ ಹೆಚ್ಚಿನ ಜನಸಂದಣಿ ಕಾರಣ ರಕ್ಷಣಾ ಸಿಬ್ಬಂದಿ ತೊಂದರೆಗಳನ್ನು ಎದುರಿಸಿದರು. ಕಾರ್ಯಾಚರಣೆಗೆ ಅಡ್ಡಿಯಾಯಿತು ಎಂದು ಹೇಳಿದರು. ದಿಂಡೋರಿ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಅಪಘಾತದ ನಿಖರವಾದ ಕಾರಣವನ್ನು ಏನು ಎಂಬ ಬಗ್ಗೆ ಹುಡುಕಲಾಗುತ್ತಿದೆ.
ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ