
ಚಾಮರಾಜನಗರ, ಏಪ್ರಿಲ್ 05: ಗಡಿ ಜಿಲ್ಲೆಯಲ್ಲಿ ವನ್ಯ ಜೀವಿಗಳ ಉಪಟಳ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇತ್ತೀಚೆಗೆ ಜಿಲ್ಲೆಯ ಪಾಲಾರ್ ಚೆಕ್ ಪೋಸ್ಟ್ ಬಳಿ ರಾತ್ರಿ ವೇಳೆ ಕಾಡಾನೆ ಓಡಾಟ ಸಂಭವಿಸಿದೆ. ಅದರ ಬೆನ್ನಲ್ಲೇ ಈಗ ಗುಂಡ್ಲುಪೇಟೆ ತಾಲ್ಲೂಕಿನ ಶಿವಪುರದಲ್ಲಿ ಚಿರತೆ ಉಪಟಳ ಮುಂದುವರಿದಿದೆ. ನಾಯಿ ಮೇಲೆ ದಾಳಿ ನಡೆಸಿದ ಚಿರತೆ, ಜನರು ಬರುತ್ತಿದ್ದಂತೆ ಕಾಡಿಗೆ ಓಡಿದೆ. ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ ಹಿಡಿದ, ಚಿರತೆ ಸೆರೆಹಿಡಿಯುವಂತೆ ಅರಣ್ಯ ಇಲಾಖೆಗೆ ಸ್ಥಳೀಯರು ಕಾಣಿಸಿಕೊಂಡಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.