IPL 2026: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ದಾಂಡಿಗರು ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಹೊಸ ಇತಿಹಾಸ ಬರೆದಿದೆ. ಅದು ಕೂಡ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ವಿರುದ್ಧ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ.
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ 11ನೇ ಆಟಗಾರ ಟಾಸ್ ಗೆದ್ದ ಸಿಎಸ್ಕೆ ತಂಡವು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.
ಈ ಸಿಡಿಲಬ್ಬರದ ಬ್ಯಾಟಿಂಗ್ನೊಂದಿಗೆ ಆರ್ಸಿಬಿ ದಾಂಡಿಗರು 20 ಪಂದ್ಯಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 250 ರನ್ಗಳು. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 250 ರನ್ ಗಳಿಸಿದ ಮೊದಲ ತಂಡವೆಂಬ ಹೆಗ್ಗಳಿಕೆ ಆರ್ಸಿಬಿ ಪಾಲಾಯಿತು.
ಕಳೆದ 18 ವರ್ಷಗಳಲ್ಲಿ ಎಸ್ಎಸ್ಕೆ ವಿರುದ್ಧ ಯಾವುದೇ ತಂಡ 235 ಕ್ಕಿಂತ ಹೆಚ್ಚು ಸ್ಕೋರ್ ಮಾಡಲು ಸಾಧ್ಯವಾಗಲಿಲ್ಲ. 2014 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ 2024 ರಲ್ಲಿ ಗುಜರಾತ್ ಟೈಟಾನ್ಸ್ ತಂಡವು 231 ರನ್ ಗಳಿಸಿದ್ದು ಈ ಸಾಧನೆ ಮಾಡಿತು.
ಆದರೆ ಈ ಬಾರಿ ಆರ್ಸಿಬಿ ದಾಂಡಿಗರು ಸಿಎಸ್ಕೆ ತಂಡದ ಎಲ್ಲಾ ಲೆಕ್ಕಾಚಾರಗಳನ್ನು ತಲೆ ಕೆಳಗಾಗಿಸಿದ್ದಾರೆ. 20 ಔಟ್ಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬೌಲರ್ ಚೆಂಡಾಡುವ ಮೂಲಕ ಬರೋಬ್ಬರಿ 250 ರನ್ ಚಚ್ಚಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ 5 ಬಾರಿಯ ಚಾಂಪಿಯನ್ ಸಿಎಸ್ ಕೆ ವಿರುದ್ಧ 250 ರನ್ ಕಲೆಹಾಕಿದ ಮೊದಲ ತಂಡವೆಂಬ ಹೆಗ್ಗಳಿಕೆಗೆ ಆರ್ಸಿಬಿ ತಂಡ ತನ್ನದಾಗಿಸಿಕೊಂಡಿದೆ.




