
ಬೆಂಗಳೂರು, ಏಪ್ರಿಲ್ 06: ಹಲವು ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾರ್ಭಟ (ಹವಾಮಾನ ಮುನ್ಸೂಚನೆ)ಕಾಣಸಿಗುತ್ತಿದೆ. ಅಂತೆಯೇ ಇಂದು ಸಹ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ, 10 ಜಿಲ್ಲೆಗಳಿಗೆ ಎಲ್ಲಾ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಯಾವೆಲ್ಲಾ ಜಿಲ್ಲೆಗಳಿಗೆ ಎಲ್ಲೋ ಎಚ್ಚರಿಕೆ?
ಕಲಬುರ್ಗಿ, ಧಾರವಾಡ, ಗದಗ, ಶಿವಮೊಗ್ಗ ಉಡುಪಿ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ. ಆದ್ದರಿಂದ ಈ 10 ಜಿಲ್ಲೆಗಳಿಗೆ ಎಲ್ಲಾ ಎಚ್ಚರಿಕೆ ಸೂಚಿಸಲಾಗಿದೆ.
ಇದನ್ನೂ ಓದಿ 1,2,3,4,5,6,7 ಈ ದಿನದಂದು ಮಧ್ಯಾಹ್ನದ ನಂತರ ಬರಲಿದೆ ಗುಡುಗು ಸಹಿತ ಮಳೆ; ಎಲ್ಲೆಲ್ಲಿ ಮಳೆಯಾಗಬಹುದೇ?
ಎಲ್ಲೆಲ್ಲಿ ಮಳೆ
ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಸೇರದಂತೆ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ರಾಯಚೂರು ಮತ್ತು ಕಲ್ಬುರ್ಗಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಚಾಮರಾಜನಗರ, ಮೈಸೂರು, ಮಂಡ್ಯ, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಕೋಲಾರದಲ್ಲಿ 30-40 ಕೀ.ಮಿ/ಗಂ ವೇಗದಲ್ಲಿ ಗಾಳಿ ಮಳೆ ಜೋರಾಗಿರಲಿದೆ. ಉಳಿದೆಡೆ ಒಣ ಹವೆಯ ವಾತಾವರಣವಿರಲಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.