
ಚಿಕ್ಕಮಗಳೂರು, ಏ.6: ಜಿಲ್ಲೆಯ ನರಸಿಂಹರಾಜಪುರ (ಎನ್.ಆರ್.ಪುರ) ತಾಲ್ಲೂಕಿನ ಬನ್ನೂರು ಗ್ರಾಮದ ಬಳಿ ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಐಟಿ ಉದ್ಯೋಗಿಯೊಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಗದಗ ಮೂಲದ, ಬೆಂಗಳೂರಿನ ಖಾಸಗಿ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಅಭಿಷೇಕ್ (27) ಎಂದು ಗುರುತಿಸಲಾಗಿದೆ.
ಅಭಿಷೇಕ್ ಅವರು ತಮ್ಮ ಸ್ನೇಹಿತನ ಮದುವೆಯಲ್ಲಿ ಭಾಗವಹಿಸಲು ಸ್ನೇಹಿತರ ಜೊತೆ ಸೇರಿ ಬಾಳೆಹೊನ್ನೂರು ಸಮೀಪದ ಬನ್ನೂರು ಗ್ರಾಮಕ್ಕೆ ಬಂದಿದ್ದರು. ಸ್ಥಳೀಯ ಮನೆಯಲ್ಲಿ ವಾಸ್ತವ್ಯ ಹೂಡಿದ್ದ ಇವರು, ಇಂದು ಬೆಳಿಗ್ಗೆ ಭದ್ರಾ ನದಿಗೆ ಈಜಲು ತೆರಳಿದ್ದರು. ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಅಭಿಷೇಕ್ ನಾಪತ್ತೆಯಾಗಿದ್ದರು.
ಇದನ್ನೂ ಓದಿ: ಸಿಗರೇಟ್ ವಿಚಾರವಾಗಿ ಎರಡು ಗುಂಪಿನ ನಡುವೆ ಹೊಡೆದಾಟ! ಆಹಾರ ಸಾವು
ಯುವಕ ನಾಪತ್ತೆಯಾದ ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳೀಯರು ಹುಡುಕಾಟ ನಡೆಸಿದ್ದರು. ಗಂಟೆಗಳ ಕಾಲ ನಡೆಸಿದ ಕಾರ್ಯಾಚರಣೆಯ ನಂತರ, ಬನ್ನೂರು ಗ್ರಾಮದ ಸಮೀಪದ ನದಿಯಲ್ಲಿ ಅಭಿಷೇಕ್ ಅವರ ಮೃತದೇಹವಿದೆ. ಮದುವೆ ಸಂಭ್ರಮದಲ್ಲಿದ್ದ ಸ್ನೇಹಿತರು ಮತ್ತು ಕುಟುಂಬದವರಲ್ಲಿ ಈ ಘಟನೆ ತೀವ್ರ ಶೋಕವನ್ನುಂಟು ಮಾಡಿದೆ. ಬಾಳೆಹೊನ್ನೂರು ಪೊಲೀಸ್ ಠಾಣೆ ಈ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ