
ಬೆಂಗಳೂರು/ಚಿಕ್ಕಮಗಳೂರು, (ಏಪ್ರಿಲ್ 06): ಕೋಲಾರದ ಮಾಲೂರು ವಿಧಾನಸಭಾ ಕ್ಷೇತ್ರದ ಫಲಿತಾಂಶ ತಕರಾರು ಪ್ರಕರಣ ಸುಖಾಂತ್ಯ ಕಂಡಿದೆ. ಇದರ ಬೆನ್ನಲ್ಲೇ ಇದೀಗ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ (ಶೃಂಗೇರಿ ವಿಧಾನಸಭಾ ಕ್ಷೇತ್ರ) ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಆಯ್ಕೆ ಅಸಿಂಧು ಕೋರಿ ಬಿಜೆಪಿ ಅಭ್ಯರ್ಥಿ ಡಿ.ಎನ್.ರಾಜ್ ಅವರು ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ (ಕರ್ನಾಟಕ ಹೈಕೋರ್ಟ್), 279 ಅಂಚೆ ಮತಪತ್ರಗಳನ್ನು 2 ವಾರದಲ್ಲಿ ಮರುಪರಿಶೀಲನೆ ಮಾಡಿ ಫಲಿತಾಂಶ ಪ್ರಕಟಿಸುವಂತೆ ಆದೇಶ ಹೊರಡಿಸಿದ್ದಾರೆ. ಹೀಗಾಗಿ ಫಲಿತಾಂಶ ಏನಾಗಲಿದೆ ಎಂಬ ಕುತೂಹಲ ಕೆರಳಿಸಿದೆ.