Headlines

ದಾಖಲೆ ಬರೆದ ಧುರಂಧರ್ 2: ಭಾರತದಲ್ಲಿ 1000 ಕೋಟಿ ರೂ. ಗಳಿಸಿದ ಮೊದಲ ಹಿಂದಿ ಸಿನಿಮಾ

ದಾಖಲೆ ಬರೆದ ಧುರಂಧರ್ 2: ಭಾರತದಲ್ಲಿ 1000 ಕೋಟಿ ರೂ. ಗಳಿಸಿದ ಮೊದಲ ಹಿಂದಿ ಸಿನಿಮಾ


ದಾಖಲೆ ಬರೆದ ಧುರಂಧರ 2: ಭಾರತದಲ್ಲಿ 1000 ಕೋಟಿ ರೂ. ಗಳಿಸಿದ ಮೊದಲ ಹಿಂದಿ ಸಿನಿಮಾ

ನಟ ರಣವೀರ್ ಸಿಂಗ್ (ರಣವೀರ್ ಸಿಂಗ್) ಮತ್ತು ನಿರ್ದೇಶಕ ಆದಿತ್ಯ ಧರ್ ಅವರ ಕಾಂಬಿನೇಷನ್‌ನಲ್ಲಿ ಬಂದ ‘ಧುರಂಧರ 2’ ಸಿನಿಮಾ ಅಕ್ಷರಶಃ ಹೊಸ ಇತಿಹಾಸ ಬರೆದಿದೆ. ಭಾರತೀಯ ಬಾಕ್ಸ್ ಆಫೀಸ್ ಇತಿಹಾಸದಲ್ಲೇ 1000 ಕೋಟಿ ರೂಪಾಯಿ ನಿವ್ವಳ ಗಳಿಕೆ (ಬಾಕ್ಸ್ ಆಫೀಸ್ ಕಲೆಕ್ಷನ್) ಮಾಡಿದ ಮೊದಲ ಹಿಂದಿ ಚಿತ್ರ ಎಂಬ ಹೆಗ್ಗಳಿಕೆಗೆ ಈ ಸಿನಿಮಾ ಪಾತ್ರವಾಗಿದೆ. ಮಾರ್ಚ್ 19 ರಂದು ತೆರೆಕಂಡ ಈ ಸಿನಿಮಾ, ಮೂರನೇ ವಾರದಲ್ಲೂ ತನ್ನ ನಾಗಾಲೋಟವನ್ನು ಮುಂದುವರೆಸಿದೆ. ವೀಕ್ಷಿಸಲು ಥಿಯೇಟರ್‌ಗಳತ್ತ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಭಾರತದಲ್ಲೇ 1000 ಕೋಟಿ ರೂಪಾಯಿ ಕಲೆಕ್ಷನ್ ಆಗಿದ್ದಕ್ಕೆ ‘ಧುರಂಧರ 2’ (ಧುರಂಧರ 2) ಚಿತ್ರತಂಡಕ್ಕೆ ಖುಷಿ ಆಗಿದೆ.

ವರದಿಗಳ ಪ್ರಕಾರ, ‘ಧುರಂಧರ 2’ ಸಿನಿಮಾ ಬಿಡುಗಡೆಯಾಗಿ 18ನೇ ದಿನ (ಏಪ್ರಿಲ್ 5) ಬರೋಬ್ಬರಿ 28.75 ಕೋಟಿ ರೂಪಾಯಿ ಬಾಚಿಕೊಂಡಿದೆ. ಮೂರನೇ ವಾರದಲ್ಲೂ ಈ ಮಟ್ಟದ ಗಳಿಕೆ ಮಾಡಿರುವುದು ಚಿತ್ರರಂಗವನ್ನು ಬೆರಗುಗೊಳಿಸಿದೆ. ಮೊದಲ ವಾರ 674 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಎರಡನೇ ವಾರ 263.65 ಕೋಟಿ ರೂಪಾಯಿ ಸೇರ್ಪಡೆಯಾಯಿತು.

ಈವರೆಗೂ ‘ಧುರಂಧರ್ 2’ ಸಿನಿಮಾಗೆ ಭಾರತದಲ್ಲಿ ಆಗಿರುವ ಒಟ್ಟು ಗಳಿಕೆ (ಒಟ್ಟು) 1,209 ಕೋಟಿ ರೂಪಾಯಿ. ಭಾರತದಲ್ಲಿನ ನಿವ್ವಳ ಗಳಿಗೆ (ನೆಟ್) 1,013 ಕೋಟಿ ಎಂಬ ಮಾಹಿತಿ ಸಿಕ್ಕಿದೆ. ‘ಧುರಂಧರ 2’ ಸಿನಿಮಾ ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ ಕೇವಲ ಮೊದಲ ವಾರದಲ್ಲೇ 1000 ಕೋಟಿ ರೂಪಾಯಿ ಗಡಿ ದಾಟುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿತ್ತು.

‘ಧುರಂಧರ್ 2’ ಚಿತ್ರವು ಭಾರತದ ಬ್ಲಾಕ್‌ಬಸ್ಟರ್ ಸಿನಿಮಾಗಳಾದ ‘ಆರ್’ಆರ್’ (782.20 ಕೋಟಿ ರೂ.), ‘ಕಲ್ಕಿ 2898 AD’ (646 ಕೋಟಿ ರೂ.), ‘ಕೆಜಿಎಫ್: ಅಧ್ಯಾಯ 2’ (859.70 ಕೋಟಿ ರೂ.), ಜವಾನ್ ಮತ್ತು ಪಠಾಣ ಚಿತ್ರಗಳ ಲೈಫ್‌ಟೈಮ್ ಕಲೆಕ್ಷನ್ ಹಿಂದಿಕ್ಕಿದೆ. 1,030 ಕೋಟಿ ರೂಪಾಯಿ ಗಳಿಸಿದ್ದ ‘ಬಾಹುಬಲಿ 2’ ದಾಖಲೆಯನ್ನು ಮುರಿಯಲು ಸಜ್ಜಾಗಿರುವ ಈ ಚಿತ್ರ, ನಂತರ ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ (1,234 ಕೋಟಿ ರೂ.) ದಾಖಲೆಯನ್ನು ಮೀರಿಸುತ್ತದೆಯೇ ಎಂದು ನೋಡಬೇಕಾಗಿದೆ.

ಇದನ್ನೂ ಓದಿ: ‘ಧುರಂಧರ’, ‘ಕೇರಳ ಸ್ಟೋರಿ’ ಸುಳ್ಳು ಎಂದವರ ವಿರುದ್ಧ ನರೇಂದ್ರ ಮೋದಿ ಗರಂ

ಆದಿತ್ಯ ಧರ್ ನಿರ್ದೇಶನದ ಈ ಚಿತ್ರದಲ್ಲಿ ರಣವೀರ್ ಸಿಂಗ್ ಅವರು ಭಾರತೀಯ ಗೂಢಚಾರನಾಗಿ ನಟಿಸಿದ್ದಾರೆ. ಪಾಕಿಸ್ತಾನದ ಭೂಗತ ಲೋಕಕ್ಕೆ ನುಗ್ಗಿ ಭಾರತವನ್ನು ಗುರಿಯಾಗಿಸಿಕೊಂಡಿರುವ ಭಯೋತ್ಪಾದಕ ಜಾಲವನ್ನು ಮಟ್ಟಹಾಕುವ ರೋಚಕ ಕಥೆ ಚಿತ್ರದಲ್ಲಿದೆ. ಚಿತ್ರದಲ್ಲಿ ರಣವೀರ್ ಜೊತೆಗೆ ಆರ್. ಮಾಧವನ್, ಸಂಜಯ್ ದತ್, ಅರ್ಜುನ್ ರಾಮ್‌ಪಾಲ್, ಸಾರಾ ಅರ್ಜುನ್ ಅವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *