
ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ನಡೆಯಬೇಕಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಐಪಿಎಲ್ 2026 ರ 12ನೇ ಪಂದ್ಯ ಮಳೆಯಿಂದ ರದ್ದಾಗಿದೆ. ಹೀಗಾಗಿ ಉಭಯ ತಂಡಗಳಿಗೆ ತಲಾ ಒಂದೊಂದು ಅಂಕ ಸಿಕ್ಕಿದೆ. ಇದರಿಂದ ಕೆಕೆಆರ್ಗೆ ಲಾಭವಾದರೆ, ಪಂಜಾಬ್ ತಂಡ ಬೇಸರದಿಂದ ಮೈದಾನ ತೊರೆದಿದೆ. ಏಕೆಂದರೆ ಕೆಕೆಆರ್ ತಂಡ ಆಡಿದ ಮೊದಲ ಎರಡು ಪಂದ್ಯಗಳನ್ನು ಸೋತಿತ್ತು. ಈ ತಂಡವು ಯಾವುದೇ ಅಂಕಗಳನ್ನು ಹೊಂದಿರಲಿಲ್ಲ. ಆದರೆ ಈ ಪಂದ್ಯ ರದ್ದಾದ ಕಾರಣ ಕೆಕೆಆರ್ಗೆ 1 ಅಂಕ ಸಿಕ್ಕಿದೆ. ಇತ್ತ ಪಂಜಾಬ್ ಮೊದಲ ಎರಡು ಪಂದ್ಯಗಳನ್ನು ಗೆದ್ದು 4 ಅಂಕಗಳನ್ನು ಹೊಂದಿತ್ತು. ಈಗ ಈ ಪಂದ್ಯವನ್ನು ಗೆದ್ದು 6 ಅಂಕಗಳನ್ನು ಪಡೆಯುವ ಅವಕಾಶ ಹೊಂದಿತ್ತು. ಆದರೆ ಅದಕ್ಕೆ ಮಳೆರಾಯ ಅವಕಾಶ ಮಾಡಿಕೊಡಲಿಲ್ಲ. ಆದಾಗ್ಯೂ ಪಂಜಾಬ್ 5 ಅಂಕಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.