ಪಂಚಮಸಾಲಿ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಬೆಂಗಳೂರು ಮಹಿಳೆಯಿಂದ ಲೈಂಗಿಕ ಕಿರುಕುಳ ಆರೋಪ | Basavajaya Mruthyunjaya Swamiji Sexual Harassment Allegations Counter Complaint 3 Crore Rs Blackmail Claim Surfaces Gdp

ಪಂಚಮಸಾಲಿ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಬೆಂಗಳೂರು ಮಹಿಳೆಯಿಂದ ಲೈಂಗಿಕ ಕಿರುಕುಳ ಆರೋಪ | Basavajaya Mruthyunjaya Swamiji Sexual Harassment Allegations Counter Complaint 3 Crore Rs Blackmail Claim Surfaces Gdp



ಪಂಚಮಸಾಲಿ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಬೆಂಗಳೂರು ಮಹಿಳೆಯಿಂದ ಲೈಂಗಿಕ ಕಿರುಕುಳ ಆರೋಪ | Basavajaya Mruthyunjaya Swamiji Sexual Harassment Allegations Counter Complaint 3 Crore Rs Blackmail Claim Surfaces Gdp

ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪ ಮಾಡಿ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಇದಕ್ಕೆ ಪ್ರತಿಯಾಗಿ, ಸ್ವಾಮೀಜಿ ತಮ್ಮ ತೇಜೋವಧೆ ಮಾಡಲು 3 ಕೋಟಿ ರೂಪಾಯಿಗಾಗಿ ಮಹಿಳೆ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಪ್ರತಿದೂರು ದಾಖಲಿಸಿದ್ದಾರೆ.

ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದ ಪ್ರಮುಖ ನಾಯಕ, ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿರುವ ಪ್ರಕರಣ ರಾಜ್ಯದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಸಂಬಂಧ ಬೆಂಗಳೂರಿನ ಮಹಿಳೆಯೊಬ್ಬರು ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿರುವುದಾಗಿ ತಿಳಿದುಬಂದಿದೆ.

ಮಹಿಳೆ ನೀಡಿದ ದೂರಿನ ಪ್ರಕಾರ, ಸ್ವಾಮೀಜಿ ತಮ್ಮ ಮೇಲೆ ಅಸಭ್ಯ ವರ್ತನೆ ತೋರಿದ್ದು, ಬೆತ್ತಲೆ ವಿಡಿಯೋ ಕಾಲ್ ಮಾಡುವ ಮೂಲಕ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಈ ಆರೋಪಗಳು ಹೊರಬಿದ್ದ ತಕ್ಷಣವೇ ಪ್ರಕರಣಕ್ಕೆ ಹೊಸ ತಿರುವು ದೊರೆತಿದ್ದು, ಸ್ವಾಮೀಜಿ ಕಡೆಯಿಂದಲೂ ಪ್ರತಿದೂರು ದಾಖಲಾಗಿರುವುದು ಗಮನಾರ್ಹ ಸಂಗತಿಯಾಗಿದೆ.

ಸ್ವಾಮೀಜಿ ಪ್ರತಿದೂರು

ಇನ್ನೊಂದೆಡೆ, ಜಯಮೃತ್ಯುಂಜಯ ಸ್ವಾಮೀಜಿ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ವಿರುದ್ಧ ದೂರು ದಾಖಲಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಸ್ವಾಮೀಜಿ ತಮ್ಮ ದೂರಿನಲ್ಲಿ, ಸಂಬಂಧಿತ ಮಹಿಳೆ ತಾನು ಅನಾಥಾಶ್ರಮ ನಡೆಸುತ್ತಿರುವುದಾಗಿ ಹೇಳಿ ಪರಿಚಯ ಮಾಡಿಕೊಂಡಿದ್ದಳು ಎಂದು ತಿಳಿಸಿದ್ದಾರೆ.

ಪರಿಚಯವಾದ ನಂತರ ಆಕೆ ತನ್ನ ಬಳಿ ಹಣಕಾಸಿನ ನೆರವು ಕೇಳುತ್ತಾ ಬಂದಿದ್ದು, ಕ್ರಮೇಣ ಹಣಕ್ಕಾಗಿ ಒತ್ತಡ ಹೇರುತ್ತಿದ್ದಳು ಎಂದು ಸ್ವಾಮೀಜಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ತಮ್ಮ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪಗಳು ಸಂಪೂರ್ಣ ಸುಳ್ಳು ಎಂದು ತಳ್ಳಿ ಹಾಕಿರುವ ಅವರು, ಕೆಲವು ರಾಜಕೀಯ ವ್ಯಕ್ತಿಗಳ ಪ್ರಚೋದನೆಯಿಂದ ತಮ್ಮ ತೇಜೋವಧೆ ಮಾಡಲು ಸಂಚು ರೂಪಿಸಲಾಗಿದೆ ಎಂದು ಆರೋಪಿಸಿದ್ದಾರೆ.

3 ಕೋಟಿಗೆ ಮಹಿಳೆ ಬೇಡಿಕೆ

ಹಣ ನೀಡಲು ನಿರಾಕರಿಸಿದ ಬಳಿಕ, ಆ ಮಹಿಳೆ ಇಲ್ಲಸಲ್ಲದ ಆರೋಪಗಳನ್ನು ಮಾಡಿ ಬ್ಲಾಕ್‌ಮೇಲ್ ಮಾಡಲು ಯತ್ನಿಸಿದ್ದಾಳೆ ಎಂದು ಸ್ವಾಮೀಜಿ ಹೇಳಿದ್ದಾರೆ. ಅಲ್ಲದೆ, ತಾವು ಮಠಕ್ಕೆ ತೆರಳುತ್ತಿದ್ದ ವೇಳೆ ತಮ್ಮ ಕಾರನ್ನು ಅಡ್ಡಗಟ್ಟಿ ಹಣದ ಬೇಡಿಕೆ ಇಟ್ಟಿದ್ದಳು ಹಾಗೂ ಹಣ ನೀಡದಿದ್ದಕ್ಕೆ ಹಲ್ಲೆ ನಡೆಸಿದ್ದಾಳೆ ಎಂಬ ಗಂಭೀರ ಆರೋಪವನ್ನೂ ಮಾಡಿದ್ದಾರೆ. ಮೂರು ಕೋಟಿ ರೂಪಾಯಿ ಹಣ ನೀಡದಿದ್ದರೆ ತಮ್ಮ ವಿರುದ್ಧ ಅಪಪ್ರಚಾರ ಮಾಡುವುದಾಗಿ ಮಹಿಳೆ ಬೆದರಿಕೆ ಹಾಕಿದ್ದಾಳೆ ಎಂದು ಸ್ವಾಮೀಜಿ ದೂರಿನಲ್ಲಿ ತಿಳಿಸಿದ್ದಾರೆ. ಒಟ್ಟಾರೆ, ಪರಸ್ಪರ ವಿರುದ್ಧ ಆರೋಪ-ಪ್ರತ್ಯಾರೋಪಗಳಿಂದ ಈ ಪ್ರಕರಣ ಗಂಭೀರ ಸ್ವರೂಪ ಪಡೆದಿದ್ದು, ಸತ್ಯಾಸತ್ಯತೆ ತಿಳಿಯಲು ಸಮಗ್ರ ತನಿಖೆ ಅಗತ್ಯವಾಗಿದೆ.



Source link

Leave a Reply

Your email address will not be published. Required fields are marked *