Breaking: PUC ವಿದ್ಯಾರ್ಥಿಗಳೇ ಗಮನಿಸಿ: ನಾಳೆ ಪ್ರಕಟವಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ | Karnataka 2nd Puc Results 2026 To Be Declared Tomorrow Check Details San

ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಏಪ್ರಿಲ್ 9 ರಂದು ಪ್ರಕಟಗೊಳ್ಳಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಖಚಿತಪಡಿಸಿದ್ದಾರೆ. ಉಪ ಚುನಾವಣೆ ಮುಗಿದ ನಂತರ ಸಂಜೆ ವೇಳೆಗೆ ಫಲಿತಾಂಶ ಘೋಷಣೆಯಾಗಲಿದೆ.

ಬೆಂಗಳೂರು (ಏ.8): ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್ 9) ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದ್ದು, ಈ ಕುರಿತು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಧಿಕೃತ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ನಾಳೆ ಎರಡು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ, ಮತದಾನ ಪ್ರಕ್ರಿಯೆ ಮುಕ್ತಾಯಗೊಂಡ ನಂತರ ಸಂಜೆ ವೇಳೆಗೆ ಸಚಿವರು ಫಲಿತಾಂಶವನ್ನು ಘೋಷಿಸಲಿದ್ದಾರೆ. ಈಗಾಗಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಫಲಿತಾಂಶ ಪ್ರಕಟಣೆಗೆ ಸಂಬಂಧಿಸಿದ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಈ ಬಾರಿಯ ಫಲಿತಾಂಶವು ಅತ್ಯುತ್ತಮವಾಗಿ ಬರಲಿದೆ ಎಂದು ಸಚಿವ ಮಧು ಬಂಗಾರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳು ಹಾಗೂ ಪೋಷಕರು ಫಲಿತಾಂಶಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ.

Source link

Leave a Reply

Your email address will not be published. Required fields are marked *