
ಚಂಡೀಗ: ವೈದ್ಯಕೀಯ ವೃತ್ತಿ ಎಂದರೆ ಅದೊಂದು ಪವಿತ್ರ ಸೇವೆ. ಆದರೆ ಇತ್ತೀಚಿನ ದಿನಗಳಲ್ಲಿ ಕೆಲವು ಖಾಸಗಿ ಆಸ್ಪತ್ರೆಗಳ ರೋಗಿಗಳನ್ನು ‘ಹಣ ಮಾಡುವ ಯಂತ್ರ’ಗಳಂತೆ ನೋಡುತ್ತಿದ್ದಾರೆ ಎಂಬ ಕಹಿಸತ್ಯ ಯುವ ವೈದ್ಯೆಯೊಬ್ಬರು ಧೈರ್ಯವಾಗಿ ಬಯಲಿಗೆಳೆದಿದ್ದಾರೆ. ಚಂಡೀಗಢದ ಖಾಸಗಿ ಆಸ್ಪತ್ರೆಯಲ್ಲಿ ನಡೆದ ಈ ಘಟನೆ ಈಗ ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸಆಗಿದೆ.
ಏನಿದು ಘಟನೆ?
ಯುವ ವೈದ್ಯೆ ಡಾ. ಪ್ರಬ್ಲೀನ್ ಕೌರ್ ಅವರು ಚಂಡೀಗಢದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯೊಂದಕ್ಕೆ ವೈದ್ಯರಾಗಿ ಕೆಲಸಕ್ಕೆ ಸೇರಿದ್ದರು. ಆದರೆ, ಕೆಲಸಕ್ಕೆ ಸೇರಿದ ಮೊದಲ ದಿನವೇ ಆಸ್ಪತ್ರೆಯ ಆಡಳಿತ ಮಂಡಳಿಯ ಅಮಾನವೀಯ ಧೋರಣೆಯನ್ನು ಕಂಡು ಬೆಚ್ಚಿಬಿದ್ದ ಅವರು, ಕೂಡಲೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಆಸ್ಪತ್ರೆಯ ವಿರುದ್ಧ ಡಾ. ಪ್ರಬ್ಲೀನ್ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಆಸ್ಪತ್ರೆಯ ‘ಕಲೆಕ್ಷನ್’ ದಂಧೆಯನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಆಸ್ಪತ್ರೆಗೆ ಬರುವ ಸಾಮಾನ್ಯ ರೋಗಿಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡುವ ಬದಲು, ಹಣ ಸುಲಿಗೆ ಉದ್ದೇಶದಿಂದ ನೇರವಾಗಿ ಐಸಿಯು (ICU) ಗೆ ದಾಖಲಿಸಲಾಗುತ್ತಿದೆ. ಆಸ್ಪತ್ರೆಯ ಆದಾಯವನ್ನು ವೈದ್ಯರ ಮೇಲೆ ಒತ್ತಡ ಹೇರಲಾಗುತ್ತಿದೆ. ರೋಗಿಗಳಿಗೆ ಅಗತ್ಯವಿಲ್ಲದಿದ್ದರೂ ದುಬಾರಿ ಪರೀಕ್ಷೆ ಮತ್ತು ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಪೂರ್ಣ ದಂಧೆಯು ಆಸ್ಪತ್ರೆಯ ಹಿರಿಯ ವೈದ್ಯರ ನೇರ ನಿಯಂತ್ರಣದಲ್ಲಿ ನಡೆಯುತ್ತಿದೆ ಎಂದು ಅವರು ಗಂಭೀರವಾಗಿ ಆರೋಪಿಸಿದ್ದಾರೆ.
ವಿಡಿಯೋ ಇಲ್ಲಿದೆ ನೋಡಿ:
ಯುವ ವೈದ್ಯ: ನಾನು ನನ್ನ ಕೆಲಸವನ್ನು ಬಿಡುತ್ತಿದ್ದೇನೆ.
“ಅಗತ್ಯವಿಲ್ಲದಿದ್ದರೂ ಸಹ, ಬಹುತೇಕ ಪ್ರತಿ ರೋಗಿಯನ್ನು ಸೇರಿಸಿಕೊಳ್ಳಲು ನನ್ನ ಮಹಿಳಾ ಬಾಸ್ ನನ್ನನ್ನು ಕೇಳಿದರು”
“ಆಸ್ಪತ್ರೆಯ ಬಿಲ್ಗಳನ್ನು ಹೆಚ್ಚಿಸಲು ಐಸಿಯು ತಂಗುವಿಕೆಗಳನ್ನು ವಿಸ್ತರಿಸಲಾಗಿದೆ”
“ಯಾವುದೇ ಸಂಬಳವು ನೈತಿಕತೆ ಮತ್ತು ರೋಗಿಗಳ ಸುರಕ್ಷತೆಗಿಂತ ದೊಡ್ಡದಲ್ಲ” pic.twitter.com/WyF1inwCUl
— ಸುದ್ದಿ ಬೀಜಗಣಿತ (@NewsAlgebraIND) ಏಪ್ರಿಲ್ 6, 2026
ಇದನ್ನೂ ಓದಿ: ವಿಮಾನ ನಿಲ್ದಾಣದಲ್ಲಿ ಉದ್ಯೋಗ ಪಡೆಯುವುದು ಹೇಗೆ? ಅರ್ಹತೆ ಮತ್ತು ಆಯ್ಕೆ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ
ನನಗೆ ವೃತ್ತಿ ನೈತಿಕತೆಯ ಮುಖ್ಯ:
ವಿಡಿಯೋದಲ್ಲಿ ಭಾವುಕರಾಗಿಯೇ ಮಾತನಾಡಿದ ಡಾ. ಪ್ರಬ್ಲೀನ್, “ನನಗೆ ಸಂಬಳ ಅಥವಾ ದೊಡ್ಡ ಹುದ್ದೆಗಿಂತ ರೋಗಿಗಳಿಗೆ ಮತ್ತು ವೈದ್ಯಕೀಯ ವೃತ್ತಿಯ ನೈತಿಕತೆಯೇ ಮುಖ್ಯ. ರೋಗಿಗಳನ್ನು ಲೂಟಿ ಮಾಡುವ ಇಂತಹ ವ್ಯವಸ್ಥೆಯಲ್ಲಿ ನಾನು ಭಾಗವಹಿಸುತ್ತೇನೆ,” ಎಂದು ಹೇಳಿದರು.
ಸೋಷಿಯಲ್ ಮೀಡಿಯಾದಲ್ಲಿ ವೈರಲ್:
ಡಾ. ಪ್ರಬ್ಲೀನ್ ಕೌರ್ ಅವರ ಈ ಧೈರ್ಯದ ನಡೆಗೆ ಸಾಮಾಜಿಕ ಜಾಲತಾಣಗಳಲ್ಲಿ ಬೆಂಬಲವಿದೆ. ನೆಟ್ಟಿಗರು ಆಸ್ಪತ್ರೆಯ ಹೆಸರನ್ನು ಬಹಿರಂಗಪಡಿಸಿ ಅದರ ಪರವಾನಗಿಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಲಾಗುತ್ತಿದೆ. “ವೈದ್ಯಕೀಯ ಕ್ಷೇತ್ರಕ್ಕೆ ಇಂತಹ ಪ್ರಾಮಾಣಿಕ ವೈದ್ಯರ ಅಗತ್ಯವಿದೆ” ಎಂದು ಸಾವಿರಾರು ಜನರು ಕಮೆಂಟ್ ಮಾಡುತ್ತಿದ್ದಾರೆ.
ಉದ್ಯೋಗಕ್ಕೆ ಸಂಬಂಧಿಸಿದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಯುವ ವೈದ್ಯ: ನಾನು ನನ್ನ ಕೆಲಸವನ್ನು ಬಿಡುತ್ತಿದ್ದೇನೆ.