
ಹಾವೇರಿ, ಏಪ್ರಿಲ್ 08: ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಂಬೀಡ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟಾಟಾ ಏಸ್ ವಾಹನ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ರೋಗಿಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅರೇಮಲ್ಲಾಪುರ ಗ್ರಾಮದಿಂದ ಹಾನಗಲ್ ಕಡೆಗೆ ಮದುವೆ ಸಮಾರಂಭದ ಅಡುಗೆಗೆ ತೆರಳುತ್ತಿದ್ದ ಟಾಟಾ ಎಸ್ ವಾಹನಕ್ಕೆ ಎದುರಿನಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಆಡೂರು ಪೊಲೀಸ್ ಠಾಣೆಗೆ ಈ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಕಾರಣ ತಿಳಿದುಬಂದಿಲ್ಲ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.