
ಬಳ್ಳಾರಿ, ಏಪ್ರಿಲ್ 08: ಜೈಲು ಎಂದರೆ ಮಾಡಿದ ತಪ್ಪಿಗೆ ಅಪರಾಧಿಗಳು ಶಿಕ್ಷೆಯ ಅವಧಿಯನ್ನು ಕಳೆಯಬೇಕಾದ ಮತ್ತು ತಾವು ತಿದ್ದುಕೊಳ್ಳಬೇಕಾದ ಜಾಗ. ಆದರೆ ಪ್ರಸ್ತುತವಾಗಿ ರಾಜ್ಯದ ಜೈಲುಗಳು ಇವಕ್ಕೆ ತದ್ವಿರುದ್ಧವಾದವು. ಮನಃ ಪರಿವರ್ತನೆ ಮಾಡಿಕೊಳ್ಳುವ ಬದಲು ಕೈದಿಗಳು ಹೊರಗಿನ ಬಂಧಿಖಾನೆಗಳಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದಾರೆ. ಇರೋದು ಕಾರಗೃಹದಲ್ಲಿ ಅನ್ನೋದು ಒಂದನ್ನು ಪಡಿಸಿದರೆ ದುಡ್ಡು ಕೊಟ್ಟರೆ ಬೇಕಾದರೂ ಇಲ್ಲಿ ಸಿಗುತ್ತೆ ಎಂಬ ಸ್ಥಿತಿ ಇದೆ. ರಾಜಾತಿಥ್ಯ ಪ್ರಕರಣಗಳ ಬಗ್ಗೆ ಸಾಲು ಸಾಲು ವರದಿಯಾಗುತ್ತಿದ್ದರೂ, ಕೈದಿಗಳ ಪುಂಡಾಟಕ್ಕೆ ಮಾತ್ರ ಬ್ರೇಕ್ ಬಿದ್ದಿಲ್ಲ.
ಇನ್ನು ಜೈಲು ಸಿಬ್ಬಂದಿಗೆ ಹೆದರಬೇಕಿದ್ದ ಕೈದಿಗಳು ಅವರನ್ನೇ ಹೆದರಿಸುತ್ತಿರೋದು, ಇಲಾಖೆಯ ವೈಫಲ್ಯಕ್ಕೆ ಹಿಡಿದ ಕೈಗನ್ನಡಿಯೇ ಸರಿ. ಮೊನ್ನೆ ಮೊನ್ನೆಯಷ್ಟೇ ಮೊಬೈಲ್ ತಪಾಸಣೆಗೆ ಹೋದ ಸಿಬ್ಬಂದಿಗೆ ಪರಪ್ಪನ ಅಗ್ರಹಾರದ ಕೈದಿಗಳು ಬೆದರಿಕೆ ಹಾಕಿರುವ ಮಾಸುವ ಮುನ್ನವೇ ಇತ್ತ ಬಳ್ಳಾರಿಯಲ್ಲಿ ಇಂತಹ ಘಟನೆ ನಡೆದಿದೆ. ಸೆಂಟ್ರಲ್ ಜೈಲಿನಲ್ಲಿ ಬೀಡಿ, ಸಿಗರೇಟ್ ನೀಡದಿರುವ ವಿಚಾರಕ್ಕೆ ಸಿಬ್ಬಂದಿ ಮೇಲೆಯೇ ಕೈಗಳಿಂದ ಹಲ್ಲೆ. ಜೈಲರ್ ಅಶೋಕ ಹೊಸಮನಿ ಜೊತೆ ಮಾತಿನಚಕಮಕಿ ನಡೆಸಿದ ಕೈದಿಗಳು, ವಾಗ್ವಾದದ ನಂತರ ದಾಳಿ. ಅಲ್ತಾಫ್, ರಶೀದ್ ಸೇರಿದಂತೆ ಐವರು ಕೈದಿಗಳಿಂದ ಅಟ್ಯಾಕ್ ನಡೆದಿದ್ದು, ಈ ಸಂಬಂಧ ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಕೆಐಎಡಿಬಿ ಕಚೇರಿಯಲ್ಲಿ 16 ಕೋಟಿ ಲೂಟಿ! ಗುತ್ತಿಗೆ ನೌಕರ ಸೇರಿ ಏಳು ಮಂದಿ ಮೇಲೆ ಎಫ್ಐಆರ್
ಕಾರವಾರ ಜೈಲಿನಲ್ಲೂ ನಡೆದಿತ್ತು ಇಂತಹದ್ದೇ ಘಟನೆ
ತುಂಬಾಕು ಮತ್ತು ಇತರ ಮದಕ ವಸ್ತುಗಳ ಬಳಕೆಗೆ ಆಸ್ಪದ ನೀಡದ ಕಾರಣಕ್ಕೆ ಮೂವರು ಸಿಬ್ಬಂದಿ ಮತ್ತು ಜೈಲರ್ ಮೇಲೆ ಕೈದಿಗಳು ಹಲ್ಲೆಗೆ ಮುಂದಾದ ಘಟನೆ ಕೆಲವು ತಿಂಗಳುಗಳ ಹಿಂದೆಯೇ ಕಾರವಾರ ಜೈಲಿನಲ್ಲಿಯೂ ನಡೆದಿತ್ತು. ಮಂಗಳೂರು ಮೂಲದ ಮೊಹಮ್ಮದ್ ಅಬ್ದುಲ್, ಫಯಾನ್ ಹಾಗೂ ಕೌಶಿಕ್ ನಿಹಾಲ್ ಎಂಬವರು ಅಟ್ಯಾಕ್‌ಗೆ ಯತ್ನಿಸಿದ್ದರು. ವಿಷಯ ತಿಳಿಯದಂತೆ ಸ್ಥಳಕ್ಕೆ ಧಾವಿಸಿದ ಹೆಚ್ಚಿನ ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದರು.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.