
ಚಿತ್ರದುರ್ಗ, ಏಪ್ರಿಲ್ 08: ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿಯಿಂದ ಹಣ ಸುಲಿಗೆ ಮಾಡಿದ ಪ್ರಕರಣ ಸಂಬಂಧ ಚಿತ್ರದುರ್ಗ ಪಾಲಿಕೆ ನಗರಸಭೆಯ ಮಾಜಿ ಸದಸ್ಯ ಚಂದ್ರಶೇಖರ್ ಅಲಿಯಾಸ್ ಖೋಟಾ ನೋಟು ಚಂದ್ರನನ್ನು ಬಂಧಿಸಿದ್ದಾರೆ. ಈತನಿಗ ಸಾಥ್ ನೀಡಿದ್ದ ಮಂಗಳೂರು ಮೂಲದ ಕುಖ್ಯಾತ ವಂಚಕ ರೋಷನ್ ಸಾಲ್ಡಾನ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ, ಆರೋಪಿ ಚಂದ್ರನಿಗೆ ಬ್ಯಾಂಕ್ ಅಕೌಂಟ್ನಲ್ಲಿ 50 ಲಕ್ಷ ರೂಪಾಯಿ ಹಣವನ್ನು ಫ್ರೀಜ್ ಮಾಡಲಾಗಿದೆ. ಆ ಮೂಲಕ ರಾಜ್ಯ, ಉದ್ಯಮಿಗಳಿಗೆ ಜಾಲ ಬೀಸುತ್ತಿರುವ ಪೊಲೀಸರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.
ಚಿತ್ರದುರ್ಗ ನಗರಸಭೆಗೆ ಸತತ ಎರಡು ಸಲ ಜೆಡಿಎಸ್ ನಿಂದ ಸದಸ್ಯನಾಗಿ ಆಯ್ಕೆ ಆಗಿದ್ದ ಚಂದ್ರಶೇಖ ಅಸಲಿ ದಂಧೆಯೇ ವಂಚನೆ. ಖೋಟಾ ನೋಟು, ಹಣ ಡಬ್ಲಿಂಗ್ ದಂಧೆಯ ಕಿಂಗ್ ಪಿನ್ ಆಗಿರುವ ಈ ಚಂದ್ರ, ಅನೇಕ ಪ್ರಕರಣಗಳ ಆರೋಪಿ ಕೂಡ ಹೌದು. ಇದೆ ವಿಚಾರವಾಗಿ ಅನೇಕ ಸಲ ಜೈಲಿಗೆ ಹೋಗಿ ಬಂದರೂ ಈತ ತನ್ನ ಕರಾಳ ದಂಧೆ ಮಾತ್ರ ಬಿಟ್ಟಿರಲಿಲ್ಲ. ಇದೀಗ ಹೊಸ ರೀತಿಯ ವಂಚನೆಗೆ ಮುಂದಾಗಿರುವ ಆರೋಪಿ, ಕಡಿಮೆ ಬಡ್ಡಿ ದರದಲ್ಲಿ ಕೋಟಿಗಟ್ಟಲೆ ಹಣ ಸಾಲ ನೀಡುವುದಾಗಿ ನಂಬಿಸಿ ಉದ್ಯಮಿಗಳನ್ನು ಬುಟ್ಟಿಗೆ ಹಾಕುತ್ತಿದ್ದಾರೆ. ವರ್ಷಕ್ಕೆ ಶೇ.3 ಬಡ್ಡಿ ದರದಲ್ಲಿ ಐವತ್ತು ಕೋಟಿ, ನೂರು ಕೋಟಿ ಫೈನಾನ್ಸ್ ನೀಡುವುದಾಗಿ ನಂಬಿಸಲು ಏಜಂಟರನ್ನೇ ನೇಮಿಸಿಕೊಂಡಿದ್ದಾರೆ.
ಇದನ್ನೂ ಓದಿ: ನಾಪತ್ತೆಯಾಗಿದ್ದ ಕಾಂಗ್ರೆಸ್ ಮುಖಂಡ ಶವವಾಗಿ ಪತ್ತೆ; ನಡೀತಾ ಭೀಕರ ಕೊಲೆ?
ಇನ್ನು ಇದೇ ರೀತಿ ಪುಣೆ ಮೂಲದ ಉದ್ಯಮಿ ಗುರುರಾಜ್ ಚರಂತಿಮಠ ಎಂಬವರಿಗೆ ಕರೆ ಮಾಡಿದ್ದ ಈತನ ಸಹಚರ ರೋಷನ್ ಸಾಲ್ಡಾನ, ಕಡಿಮೆ ಬಡ್ಡಿ ದರದಲ್ಲಿ ಸಾಲ ಕೊಡಿಸುವುದಾಗಿ ನಂಬಿದ್ದರು. 52 ಕೋಟಿ ರೂ.ಫೈನಾನ್ಸ್ ಮಾಡಲು ಕಾಗದಪತ್ರ ಮತ್ತು ಭದ್ರತೆಗಾಗಿ 75 ಲಕ್ಷಕ್ಕೆ ಡಿಮ್ಯಾಂಡ್ ಮಾಡಿದ್ದಾರೆ. ಅದರಂತೆ 50 ಲಕ್ಷ ರೂಪಾಯಿಯನ್ನು RTGS ಮೂಲಕ ಗುರುರಾಜ್ ನೀಡಿದ್ದರು. ಬಳಿಕ 25 ಲಕ್ಷ ರೂಪಾಯಿ ನಗದು ನೀಡಲೆಂದು ಆಗಮಿಸಿದವರಿಗೆ ಚಿತ್ರದುರ್ಗದ ಕೋಟೆ ರಸ್ತೆಯಲ್ಲಿರುವ ಚಂದ್ರಶೇಖರ್ ಮನೆಗೆ ಕರೆಸಿಕೊಳ್ಳಲಾಯಿತು. ಅಲ್ಲಿ ಚಾಕು ತೋರಿಸಿ ಬೆದರಿಸಿದ್ದ ಆರೋಪಿಗಳು ಹಣ ಕಿತ್ತುಕೊಂಡು ಕಳುಹಿಸಿದ್ದರು. 2023ರ ಮೇ ತಿಂಗಳ 26ರಂದು ಈ ಘಟನೆ ನಡೆದಿದ್ದು ನಿನ್ನೆ ಅಂದರೆ 2026ರ ಏಪ್ರಿಲ್ 07ರಂದು ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.