ವಿನಯ ಕುಲಕರ್ಣಿ ವಿರುದ್ಧದ ಕೊಲೆ ಕೇಸ್‌ ತೀರ್ಪು ಇಂದು – ಯೋಗೇಶ್‌ಗೌಡ ಕೊಲೆ: ಕೈ ಶಾಸಕಗೆ ಡವಡವ! | Vinay Kulkarni Murder Case Verdict Today Fate Of Congress Mla To Be Decided After 8 Years Rav

ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣದ ವಿಚಾರಣೆ ಪೂರ್ಣಗೊಂಡಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಂತಿಮ ತೀರ್ಪು ಪ್ರಕಟಿಸಲಿದೆ. 8 ವರ್ಷಗಳ ಸುದೀರ್ಘ ವಿಚಾರಣೆ ಬಳಿಕ, ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ 21 ಆರೋಪಿಗಳ ಭವಿಷ್ಯ ನಿರ್ಧಾರವಾಗಲಿದೆ.

ಬೆಂಗಳೂರು (ಏ.9): ಮಾಜಿ ಸಚಿವ ಹಾಗೂ ಶಾಸಕ ವಿನಯ್ ಕುಲಕರ್ಣಿ ಅವರೂ ಆರೋಪಿಯಾಗಿರುವ ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣದ ವಿಚಾರಣೆ ಪೂರ್ಣಗೊಳಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗುರುವಾರ ಅಂತಿಮ ತೀರ್ಪು ಪ್ರಕಟಿಸಲಿದೆ.

ವಿನಯ್‌ ಕುಲಕರ್ಣಿ ಸೇರಿ ಒಟ್ಟು 21 ಮಂದಿ ಆರೋಪಿಗಳ ಭವಿಷ್ಯ ನಿರ್ಧಾರವಾಗಲಿದೆ. ಸುಮಾರು 8 ವರ್ಷಗಳ ಕಾಲ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ ಅಂತಿಮ ಆದೇಶ ನೀಡಲಿದೆ.

ಯೋಗೇಶ್ ಗೌಡ ಕೊಲೆ ಪ್ರಕರಣದ ಹಿನ್ನೆಲೆ

ಧಾರವಾಡದ ಜಿಪಂ ಮಾಜಿ ಸದಸ್ಯ ಯೋಗೇಶ್‌ ಗೌಡ ಅವರನ್ನು 2016ರ ಜೂ.15ರಂದು ಭೀಕರವಾಗಿ ಕೊಚ್ಚಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಧಾರವಾಡದ ಉಪನಗರ ಪೊಲೀಸರು ತನಿಖೆ ನಡೆಸಿ, ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ಆರು ಮಂದಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ನಡುವೆ, ಕೊಲೆಯಾದ ಯೋಗೇಶ್‌ ಗೌಡ ಕುಟುಂಬದ ಸದಸ್ಯರ ಒತ್ತಾಯ ಮೇರೆಗೆ 2019ರ ಸೆಪ್ಟೆಂಬರ್‌ನಲ್ಲಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು. ಬಳಿಕ ಸಿಬಿಐ ತನಿಖೆಯಲ್ಲಿ ಇದು ರಾಜಕೀಯ ಪ್ರೇರಿತ ಕೊಲೆ ಎಂಬುದು ತಿಳಿದು ಬಂದಿತ್ತು.

ಈ ಸಂಬಂಧ ಮಾಜಿ ಸಚಿವ ವಿನಯ್‌ ಕುಲಕರ್ಣಿ ಅವರನ್ನು 2020ರ ನ.5ರಂದು ಸಿಬಿಐ ಬಂಧಿಸಿತ್ತು. ಬಳಿಕ ವಿಚಾರಣೆ ನಡೆಸಿ ಈ ಪ್ರಕರಣ ಸಂಬಂಧ ಒಟ್ಟು 21 ಮಂದಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಟ್ಟಿ ಸಲ್ಲಿಸಿತ್ತು. ಪ್ರಸ್ತುತ ಪ್ರಮುಖ ಆರೋಪಿ ವಿನಯ್‌ ಕುಲಕರ್ಣಿ ಜಾಮೀನಿನ ಮೇಲೆ ಹೊರಗಿದ್ದಾರೆ. ಇಂದಿನ ನ್ಯಾಯಾಲಯದ ತೀರ್ಪಿನ ಮೇಲೆ ಈ 21 ಆರೋಪಿಗಳ ಮುಂದಿನ ಭವಿಷ್ಯ ನಿರ್ಧಾರವಾಗಲಿದೆ.

Source link

Leave a Reply

Your email address will not be published. Required fields are marked *