
ಬೆಂಗಳೂರು, ಏಪ್ರಿಲ್ 09: 2025-26ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಶೇಕಡಾ 86.48ರಷ್ಟು ಮಕ್ಕಳು ಉತ್ತರರಾಗಿದ್ದಾರೆ. ಪರೀಕ್ಷೆ ಬರೆದಿದ್ದು 6,32,200 ಮಂದಿ ಉನ್ನತ ಶ್ರೇಣಿಯಲ್ಲಿ 5,46,698 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ದಾಖಲೆ ಮಟ್ಟದಲ್ಲಿ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಏರಿಕೆಯಾಗಿದೆ. ಕಳೆದ ವರ್ಷ ಶೇಕಡಾ 73.45ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ, ಪ್ರಸಕ್ತ ಸಾಲಿನಲ್ಲಿ ಶೇಕಡಾ 86ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದ ಸಚಿವ ಮಧುಪ್ಪ, ವಿದ್ಯಾರ್ಥಿಗಳ ಸಾಧನೆಗೆ ಸಂತಸ ವ್ಯಕ್ತಪಡಿಸಿದ್ದಾರೆ. ಕಳೆದಬಾರಿಗಿಂತಲೂ ಈ ಬಾರಿ ಶೇಕಡಾ 13ರ ಹೆಚ್ಚು ಪ್ರತಿಶತ ಫಲಿತಾಂಶದಲ್ಲಿ ಸುಧಾರಣೆ ಆಗಿದೆ.
ಕಲಾ ವಿಭಾಗ ಶೇ.2.86, ವಾಣಿಜ್ಯ ವಿಭಾಗದಲ್ಲಿ ಶೇ.88.0 ಮತ್ತು ವಿಜ್ಞಾನ ವಿಭಾಗ ಶೇ.86.48 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಆ ಮೇಲಿನ ಶೇ. 83.65ರಷ್ಟು ಬಾಲಕರು ಮತ್ತು ಶೇ. 88.70ರಷ್ಟು ಬಾಲಕಿಯರು ಉತ್ತೀರ್ಣರಾಗಿದ್ದಾರೆ. 44 ಸಾವಿರ ಮಕ್ಕಳು ಒಂದು ವಿಷಯದಲ್ಲಿ ಫೇಲ್ ಆಗಿದ್ದಾರೆ, ಎರಡು ಸಬ್ಜೆಕ್ಟ್ಗಳಲ್ಲಿ 18 ಸಾವಿರ ಮಕ್ಕಳು ಅನುತ್ತೀರ್ಣರಾಗಿದ್ದಾರೆ. ಎಲ್ಲಾ ವಿಷಯಗಳಲ್ಲಿಯೂ ಫೇಲ್ ಆದವರ ಸಂಖ್ಯೆ 1,772ಕ್ಕೆ ಇಳಿದಿದೆ ಎಂದು ಅವರು ಸೂಚಿಸಿದ್ದಾರೆ. 1,70,529 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 2,95,385 ವಿದ್ಯಾರ್ಥಿಗಳು ಪ್ರಥಮ ದರ್ಜೆ 63,957 ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಮತ್ತು ಶೇಕಡಾ 50ಕ್ಕಿಂತ ಹೆಚ್ಚು ಅಂಕ ಪಡೆದಿರುವ ವಿದ್ಯಾರ್ಥಿಗಳ ಸಂಖ್ಯೆ 63,957 ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಬಾರಿ ಮೂರನೇ ಪರೀಕ್ಷೆ ಇರುವುದಿಲ್ಲ ಎಂದೂ ಮಧು ಬಂಗಾರಪ್ಪ.
ಇದನ್ನೂ ಓದಿ: 2ನೇ ಪಿಯುಸಿ ಜಿಲ್ಲಾವಾರು ಫಲಿತಾಂಶ 2026; ಯಾವ ಜಿಲ್ಲೆ ಫಸ್ಟ್, ಯಾವುದು ಲಾಸ್ಟ್? ಇಲ್ಲಿದೆ ಜಿಲ್ಲಾವಾರು ಪಟ್ಟಿ
ವಿಜ್ಞಾನ ವಿಭಾಗದ ಸಾಧನೆ
- 600ಕ್ಕೆ 599 ಅಂಕ ಪಡೆದ ವಿದ್ಯಾರ್ಥಿಗಳು- 01
- 600ಕ್ಕೆ 598 ಅಂಕ ಪಡೆದ ವಿದ್ಯಾರ್ಥಿಗಳು-12
- 600ಕ್ಕೆ 597 ಅಂಕ ಪಡೆದ ವಿದ್ಯಾರ್ಥಿಗಳು-19
ದಕ್ಷಿಣ ಕನ್ನಡದ ಕಾವೂರಿನ ದಿ ಲರ್ನಿಂಗ್ ಸೆಂಟರ್ ಪಿಯು ಕಾಲೇಜಿನ ಪ್ರಿನ್ಸಿಲ್ಲಾ 600ಕ್ಕೆ 599 ಅಂಕ ಪಡೆಯುವ ಮೂಲಕ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಸಾಧನೆ
- 600ಕ್ಕೆ 600 ಅಂಕ ಪಡೆದ ವಿದ್ಯಾರ್ಥಿಗಳು- 02
- 600ಕ್ಕೆ 599 ಅಂಕ ಪಡೆದ ವಿದ್ಯಾರ್ಥಿಗಳು- 02
- 600ಕ್ಕೆ 598 ಅಂಕ ಪಡೆದ ವಿದ್ಯಾರ್ಥಿಗಳು- 06
ಬೆಂಗಳೂರಿನ ವಿವಿಪುರನ್ನ ಎಸ್ ಬಿ ಮಹಾವೀರ ಜೈನ್ ಪಿಯು ಕಾಲೇಜಿನ ಅದಿತಿ, ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕ ಪಡೆದಿದ್ದಾರೆ.
ಕಲಾ ವಿಭಾಗದಲ್ಲಿ ಸಾಧನೆ
- 600ಕ್ಕೆ 598 ಅಂಕ ಪಡೆದ ವಿದ್ಯಾರ್ಥಿಗಳು- 03
- 600ಕ್ಕೆ 595 ಅಂಕ ಪಡೆದ ವಿದ್ಯಾರ್ಥಿಗಳು- 05
- 600ಕ್ಕೆ 594 ಅಂಕ ಪಡೆದ ವಿದ್ಯಾರ್ಥಿಗಳು- 08
ಕೊಟ್ಟೂರಿನ ಇಂದು ಪಿಯು ಕಾಲೇಜಿನಲ್ಲಿ ಅರ್ಚನಾ, ಸಂಗೀತಾ ಮತ್ತು ಕಲಬುರಗಿಯ ಎಸ್ಟಿ ವಿಜಿ ಮಹಿಳಾ ಪಿಯು ಕಾಲೇಜಿನ ಶ್ರುತಿ 600ಕ್ಕೆ 598 ಅಂಕಗಳನ್ನು ಪಡೆದು ಕಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.