Headlines

Karnataka Weather: ಉತ್ತರ ಒಳನಾಡಿನಲ್ಲಿ ಕೆಂಡದಂಥಾ ಬಿಸಿಲು, ದಕ್ಷಿಣದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

Karnataka Weather: ಉತ್ತರ ಒಳನಾಡಿನಲ್ಲಿ ಕೆಂಡದಂಥಾ ಬಿಸಿಲು, ದಕ್ಷಿಣದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ


ಕರ್ನಾಟಕ ಹವಾಮಾನ: ಉತ್ತರ ಒಳನಾಡಿನಲ್ಲಿ ಕೆಂಡದಂಥಾ ಬಿಸಿಲು, ದಕ್ಷಿಣದ ಈ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ

ಬೆಂಗಳೂರು, ಏಪ್ರಿಲ್ 10: ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಇತ್ತೀಚಿನ ಮುನ್ಸೂಚನೆಯಂತೆ, ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಉಷ್ಣ ಅಲೆ (ಶಾಖದ ಅಲೆ) ಮುಂದುವರಿಯಲಿದೆ. ವಿಜಯನಗರ, ಕಲಬುರಗಿ, ಯಾದಗಿರಿ ಮತ್ತು ಹಾವೇರಿಯಲ್ಲಿಯೂ ಬಿಸಿಲಿನ ಝಳ ಹೆಚ್ಚಾಗಲಿದೆ. ರಾಜ್ಯದಾದ್ಯಂತ ಮುಂದಿನ 5 ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಮಟ್ಟದ ಇಳಿಕೆ ಕಂಡುಬರುವುದಿಲ್ಲ. ಬದಲಿಗೆ ಹಂತ ಹಂತವಾಗಿ 2 ಡಿಗ್ರಿ ಸೆಲ್ಶಿಯಸ್ ನಿಂದ 3 ಡಿಗ್ರಿ ಸೆಲ್ಶಿಯಸ್ ವರೆಗೆ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ.

ಮಧ್ಯ ಕರ್ನಾಟಕ ಭಾಗವಾದ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಬಿಸಿಲು ಮತ್ತು ಆರ್ದ್ರತೆಯಿಂದ ಕೂಡಿದ ವಾತಾವರಣ ಇರುತ್ತದೆ. ಬಾಗಲಕೋಟೆ, ರಾಯಚೂರು, ಬೆಳಗಾವಿ ಮತ್ತು ವಿಜಯನಗರ ಜಿಲ್ಲೆ ಹಗಲಿನಲ್ಲಿ ಉಷ್ಣ ಅಲೆಯಿರುತ್ತದೆ, ರಾತ್ರಿಯ ಅವಧಿಯಲ್ಲೂ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನದ ಸಾಧ್ಯತೆಯಿದೆ.

ಉಷ್ಣ ಅಲೆ ಮತ್ತು ಮುನ್ನೆಚ್ಚರಿಕೆ

ಉತ್ತರ ಒಳನಾಡಿನ ಜಿಲ್ಲೆಗಳಾದ ಕಲಬುರಗಿ, ವಿಜಯಪುರ ಮತ್ತು ಬಾಗಲಕೋಟೆಯಲ್ಲಿ ಗರಿಷ್ಠ ತಾಪಮಾನವು 40 ಡಿಗ್ರಿ ಸೆಲ್ಶಿಯಸ್ ನಿಂದ 42 ಡಿಗ್ರಿ ಸೆಲ್ಶಿಯಸ್ ವರೆಗೆ ತಲುಪುವ ಸಾಧ್ಯತೆಯಿದೆ. ಹೀಗಾಗಿ ಮಧ್ಯಾಹ್ನದ ಸಮಯದಲ್ಲಿ ಸಾರ್ವಜನಿಕರು ಹೊರಗೆ ಹೋಗುವಾಗ ಎಚ್ಚರಿಕೆ ವಹಿಸಬೇಕು.

ಹಲವೆಡೆ ಮಳೆ ಸಾಧ್ಯತೆ

ಮತ್ತೊಂದೆಡೆ, ಬಿಸಿಲಿನ ಬೇಗೆಯಿಂದ ಕಂಗೆಟ್ಟಿರುವ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ, ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಉಷ್ಣಘಾತದಿಂದ ಬಚಾವಾಗಲು ಇಲ್ಲಿದೆ ಟಿಪ್ಸ್

ಉಷ್ಣ ಅಲೆ ಹಾಗೂ ಉಷ್ಣಘಾತದಿಂದ (ಹೀಟ್ ಸ್ಟ್ರೋಕ್) ರಕ್ಷಿಸಲು ಆರೋಗ್ಯ ಇಲಾಖೆ ಕೆಲವು ಸಲಹೆ ಸೂಚನೆಗಳನ್ನು ನೀಡಿದೆ. ಹೀಗಿವೆ;

  • 12 ರಿಂದ 4 ಮಧ್ಯಾಹ್ನ ಸೂರ್ಯನ ಬೆಳಕಿಗೆ ನೇರವಾಗಿ ಮೈಯೊಡ್ಡುವುದನ್ನು ತಪ್ಪಿಸಿ.
  • ಎಲ್ಲಾ ನೀರು ಕುಡಿಯಿರಿ. ಎಳನೀರು, ಮಜ್ಜಿಗೆ ಅಥವಾ ಮನೆಯಲ್ಲಿ ತಯಾರಿಸಿದ ಹಣ್ಣಿನ ರಸಗಳನ್ನು ಸೇವಿಸಿ.
  • ತಿಳಿ ಬಣ್ಣದ, ಸಡಿಲವಾದ ಬಟ್ಟೆಗಳನ್ನು ಧರಿಸಿ. ಹೊರಗೆ ಹೋಗುವಾಗ ಛತ್ರಿ ಅಥವಾ ಟೋಪಿಯನ್ನು ಬಳಸಿ.
  • ಕೆಫೀನ್ (ಕಾಫಿ/ಟೀ) ಮತ್ತು ಹೆಚ್ಚಿನ ಸಕ್ಕರೆ ಪಾನೀಯಗಳ ಸೇವನೆಯನ್ನು ಕಡಿಮೆ ಮಾಡಿ, ಇವುಗಳನ್ನು ನಿರ್ಜಲೀಕರಣಗೊಳಿಸುತ್ತವೆ.

ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಮಳೆ ಮುನ್ಸೂಚನೆ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) ನೀಡಿರುವ ಮಾಹಿತಿಯಂತೆ, ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಯೆಲ್ಲೋ ಎಚ್ಚರಿಕೆ ನೀಡಿದೆ. ಕರಾವಳಿ ಜಿಲ್ಲೆಗಳು ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಬಿಸಿಲಿನ ನಡುವೆ ತಂಪಾದ ಸುದ್ದಿ: ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಇಂದು ಸಂಜೆ ಗುಡುಗು ಸಹಿತ ಮಳೆ!

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲೂ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ದಾವಣಗೆರೆ ಮತ್ತು ಚಿತ್ರದುರ್ಗದಲ್ಲಿ ಬಿಸಿಯಾದ ಗಾಳಿ ಇರಲಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *