
ಮಂಡ್ಯ, ಏಪ್ರಿಲ್ 10: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೆಯಲ್ಲಿ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಟೋಲ್ ಸಿಬ್ಬಂದಿ ಯುವಕನ ಮೇಲೆ ಹಲ್ಲೆ ನಡೆಸಿ ಗೂಂಡಾವರ್ತನೆ ತೋರಿದ್ದಾರೆ. ಫಾಸ್ಟ್‌ಟ್ಯಾಗ್‌ನಲ್ಲಿ ಹಣ ಖಾಲಿಯಾದ ಕಾರಣಕ್ಕೆ ಉಂಟಾದ ಮಾತಿನ ಚಕಮಕಿ ವಿಕೋಪಕ್ಕೆ ಹೋಗಿ, ಮಹೇಶ್ ಎಂಬ ಯುವಕನಿಗೆ ಟೋಲ್ ಸಿಬ್ಬಂದಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಎರಡು ದಿನದ ಹಿಂದೆ ಮಹೇಶ್ ತನ್ನ ಕಾರಿನಲ್ಲಿ ಬರುತ್ತಿದ್ದಾಗ ಫಾಸ್ಟ್ಯಾಗ್‌ನಲ್ಲಿ ಹಣವಿಲ್ಲದಿರುವುದು ಗೊತ್ತಾಗಿತ್ತು. ಈ ವೇಳೆ ಯುವಕ ತನ್ನ ಪರಿಚಿತರಿಗೆ ಕರೆ ಮಾಡಿ ಮಾತಾಡುವುದಾಗಿ ಹೇಳಿದರೂ ಕೇಳದ ಸಿಬ್ಬಂದಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಆತನ ಮೊಬೈಲ್ ಕಿತ್ತುಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಮಹೇಶ್ ಮೇಲೆ ಗೂಂಡಾಗಳಂತೆ ಮುಗಿಬಿದ್ದು ಹಲ್ಲೆ ನಡೆಸಿದ್ದು, ಈ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಟೋಲ್ ಸಿಬ್ಬಂದಿಯ ಈ ದರ್ಪಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ