Headlines

ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು

ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು


ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಬಾಲಕಿ ನಾಪತ್ತೆ ಪ್ರಕರಣ: 3 ದಿನ ಕಳೆದರೂ ಸಿಕ್ಕಿಲ್ಲ

ಚಿಕ್ಕಮಗಳೂರು, ಏಪ್ರಿಲ್ 10: ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಕೇರಳ ಮೂಲದ 15 ವರ್ಷದ ಬಾಲಕಿ ಶ್ರೀನಂದಾ ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಏಪ್ರಿಲ್ 7 ರಂದು ಚಿಕ್ಕಮಗಳೂರು ನಗರಕ್ಕೆ ಆಗಮಿಸಿದ್ದ 40 ಜನರ ಪ್ರವಾಸಿ ತಂಡದಲ್ಲಿ ಶ್ರೀನಂದಾ ಕೂಡ ಇದ್ದರು. ಮಾಣಿಕ್ಯಧಾರ ಜಲಪಾತದ ಬಳಿ ನಾಪತ್ತೆ, ಇನಾಮು ದತ್ತಾತ್ರೇಯ ಬಾಬುಡಂ ಸ್ವಾಮಿ ದರ್ಗಾ ಹಾಗೂ ಮಾಣಿಕ್ಯಧಾರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಎಸ್ಡಿಆರ್ಎಫ್, ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಇಎನ್ಎಫ್ ತಂಡಗಳು ಬಾಲಕಿಯ ಶೋಧ ಕಾರ್ಯದಲ್ಲಿ ತೊಡಗಿವೆ. ಡ್ರೋನ್ ಮತ್ತು ಥರ್ಮಲ್ ಕ್ಯಾಮೆರಾಗಳನ್ನು ಬಳಸಲಾಗಿದೆಯಾದರೂ, ಬಾಲಕಿಯ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಬಾಲಕಿ ಎಲ್ಲಾದರೂ ಬಿದ್ದಿದ್ದಾಳ ಅಥವಾ ಬೇರೆಡೆ ಹೋಗಿದ್ದಾಳೆ ಎಂಬ ಅನುಮಾನದ ಮೇಲೆ ತನಿಖೆ ಮುಂದುವರಿದಿದೆ. ಕೇರಳದ ಪೊಲೀಸರ ತಂಡ ಆಗಮಿಸಿದ್ದು, ಪೋಷಕರ ಮೊಬೈಲ್ ಕರೆ ವಿವರಗಳನ್ನು ಪರಿಶೀಲಿಸಲಾಗುತ್ತಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *