Headlines

Karnataka Government Jobs: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳ ಗಮನಕ್ಕೆ; KEAಯಿಂದ ನೇಮಕಾತಿ ಪರೀಕ್ಷೆಗಳ ದಿನಾಂಕ ಪ್ರಕಟ

Karnataka Government Jobs: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳ ಗಮನಕ್ಕೆ; KEAಯಿಂದ ನೇಮಕಾತಿ ಪರೀಕ್ಷೆಗಳ ದಿನಾಂಕ ಪ್ರಕಟ


ಕರ್ನಾಟಕ ಸರ್ಕಾರಿ ಉದ್ಯೋಗಗಳು: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳ ಗಮನಕ್ಕೆ; KEA ಯಿಂದ ನೇಮಕಾತಿ ಪರೀಕ್ಷೆಗಳ ದಿನಾಂಕ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ರಾಜ್ಯದ ವಿವಿಧ ಪ್ರಮುಖ ನಿಗಮ, ಮಂಡಳಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಲಿಖಿತ ಪರೀಕ್ಷೆಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (RGUHS), ಬೆಂಗಳೂರು ಜಲಮಂಡಳಿ (BWSSB) ಮತ್ತು ಕೃಷಿ ಮಾರಾಟ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ ಈ ಪರೀಕ್ಷೆಗಳು ನಡೆಯಲಿವೆ. ಈ ಮೂಲಕ ಬಹುದಿನಗಳ ಪರೀಕ್ಷೆಗಾಗಿ ಕಾಯುತ್ತಿದ್ದ ಅಭ್ಯರ್ಥಿಗಳಿಗೆ ಪ್ರಾಧಿಕಾರವು ಸ್ಪಷ್ಟನೆ ನೀಡಿದೆ.

ಪರೀಕ್ಷಾ ಸೂಚನೆಗಳನ್ನು ಸುಗಮವಾಗಿ ನಡೆಸಲು ಪ್ರಾಧಿಕಾರವು ನಿಗದಿಪಡಿಸಿದ್ದು, ಹೈದರಾಬಾದ್ ಕರ್ನಾಟಕ ಹಾಗೂ ಉಳಿದ ಜಿಲ್ಲೆಗಳ ಅಭ್ಯರ್ಥಿಗಳಿಗೆ ಪ್ರತ್ಯೇಕ ದಿನಗಳಂದು ಪರೀಕ್ಷೆ. ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರು ನೀಡಿರುವ ಮಾಹಿತಿಯಂತೆ, ಮೂಲ ವೃಂದದ (RPC) ಹುದ್ದೆಗಳಿಗೆ ಏಪ್ರಿಲ್ 26 ಮತ್ತು ಮೇ 10 ರಂದು ಪರೀಕ್ಷೆಗಳು ನಡೆಯಲಿವೆ. ಅದೇ ರೀತಿ, ಕಲ್ಯಾಣ ಕರ್ನಾಟಕ ವೃಂದದ (ಎಚ್‌ಕೆ) ಅಭ್ಯರ್ಥಿಗಳಿಗೆ ಏಪ್ರಿಲ್ 27 ಮತ್ತು ಮೇ 9 ರಂದು ಲಿಖಿತ ಪರೀಕ್ಷೆಗಳನ್ನು ನಡೆಸಲು ನಿಗದಿಪಡಿಸಲಾಗಿದೆ.

ಇದನ್ನೂ ಓದಿ: ಕೆಲಸಕ್ಕೆ ಸೇರಿದ ಮೊದಲ ದಿನವೇ ರಾಜೀನಾಮೆ; ವೈದ್ಯಕೀಯ ಲೋಕದ ಕರಾಳ ಮುಖ ಅನಾವರಣ!

ಈ ನೇಮಕಾತಿ ಪರೀಕ್ಷೆಗಳಲ್ಲಿ ತಾಂತ್ರಿಕ ಮತ್ತು ತಾಂತ್ರಿಕೇತರ ಹೀಗೆ ಶ್ರೇಣಿಯ ಹುದ್ದೆಗಳು ಒಳಗೊಂಡಿವೆ. ಪರೀಕ್ಷೆಯ ಪಠ್ಯಕ್ರಮ, ಪರೀಕ್ಷಾ ಕೇಂದ್ರಗಳ ವಿವರ ಮತ್ತು ಪ್ರವೇಶ ಪತ್ರದ ಲಭ್ಯತೆಯ ಕುರಿತು ಅಭ್ಯರ್ಥಿಗಳು ನಿರಂತರವಾಗಿ ಕೆಇಇ ಅಧಿಕೃತ ವೆಬ್‌ಸೈಟ್(cetonline.karnataka.gov.in) ಗಮನಿಸಲು ಸೂಚಿಸಲಾಗಿದೆ. ಪರೀಕ್ಷಾ ದಿನಾಂಕಗಳನ್ನು ಘೋಷಿಸಲಾಗಿದೆ ಅಭ್ಯರ್ಥಿಗಳು ತಮ್ಮ ಅಂತಿಮ ಸಿದ್ಧತೆಯನ್ನು ಚುರುಕುಗೊಳಿಸಲು ಇದು ಸಕಾಲ. ಹೆಚ್ಚಿನ ತಾಂತ್ರಿಕ ಮಾಹಿತಿ ಅಥವಾ ಬದಲಾವಣೆಗಳಲ್ಲಿ ಪ್ರಾಧಿಕಾರವು ತನ್ನ ಜಾಲತಾಣದಲ್ಲಿ ಅಪ್‌ಡೇಟ್ ಮಾಡಲಿದೆ ಎಂದು ತಿಳಿಸಲಾಗಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *