
ಪಬ್ಲಿಕ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ
ಕೊರಟಗೆರೆ: ಡಾ.ರಂಗನಾಯಕಮ್ಮ ಡಾ. ಡೋಂತಿ ಶ್ರೀ ರಾಮಯ್ಯ ಶ್ರೇಷ್ಠಿ ಬೆಂಗಳೂರು ಇವರ ನೆನಪಿನಾರ್ಥ ಕೊರಟಗೆರೆ ತಾಲ್ಲೂಕು ಹೊಳವನಹಳ್ಳಿ ಹೋಬಳಿ ವ್ಯಾಪ್ತಿಯ ಚಿಂಪುಗಾನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಕಿರಿಯ ಪ್ರಾಥಮಿಕ ಪಾಠ ಶಾಲೆಯ ಮಕ್ಕಳಿಗೆ ಪಬ್ಲಿಕ್ ಚಾರಿಟಬಲ್ ಟ್ರಸ್ಟ್ ಮತ್ತು ಆರ್ಯ ವೈಶ್ಯ ಮಂಡಳಿ ಸಹಯೋಗದೊಂದಿಗೆ ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್ ಮತ್ತು ಲೇಖನ ಸಾಮಗ್ರಿಗಳನ್ನ ವಿತರಣೆ ಮಾಡಲಾಯಿತು.

ಆರ್ಯ ವೈಶ್ಯ ಮಂಡಳಿಯ ಅಧ್ಯಕ್ಷರಾದ ಕೆ. ಎಸ್. ಶ್ರೀರಾಮ ಶೆಟ್ಟಿ ಅವರು ಮಾತನಾಡಿ ಪ್ರತಿ ವರ್ಷವೂ ನಮ್ಮ ಹಿರಿಯರ ಹೆಸರಿನಲ್ಲಿ ಸರ್ಕಾರಿ ಶಾಲಾ ಬಡ ಮಕ್ಕಳಿಗೆ ನೋಟ್ ಬುಕ್ ಲೇಖನ ಸಾಮಗ್ರಿ ಸೇರಿದಂತೆ ಶಾಲಾ ಮಕ್ಕಳಿಗೆ ಅನುಕೂಲವಾಗುವ ಪರಿಕರಗಳನ್ನು ವಿತರಣೆ ಮಾಡಲಾಗುತ್ತಿದೆ ನಮ್ಮ ಚಾರಿಟಬಲ್ ಟ್ರಸ್ಟ್ ವತಿಯಿಂದ ನಮ್ಮ ಹೋಬಳಿ ವ್ಯಾಪ್ತಿಯ ಸರ್ಕಾರಿ ಶಾಲೆಗಳನ್ನ ಗುರುತಿಸಿ ನೋಟ್ ಬುಕ್ ವಿತರಣೆ ಮಾಡಲಾಗುತ್ತಿದೆ ಎಂದು ಅಭಿಪ್ರಾಯ ಪಟ್ಟರು.

ಚಿಂಪುಗಾನಹಳ್ಳಿ ಸರ್ಕಾರಿ ಹಿರಿಯ ಕಿರಿಯ ಶಾಲೆಯ ಮುಖ್ಯೋಪಾಧ್ಯಾಯರು ಸೇರಿದಂತೆ ಸಹ ಶಿಕ್ಷಕರು ಮಕ್ಕಳು ಹಾಗೂ ಗ್ರಾಮಸ್ಥರು ಆರ್ಯ ವೈಶ್ಯ ಮಂಡಳಿ ಮತ್ತು ಪಬ್ಲಿಕ್ ಚಾರಿಟಬಲ್ ಟ್ರಸ್ಟ್ ಮಾಡಿರುವ ಕಾರ್ಯ ಶ್ಲಾಘಿಸಿ ಶುಭ ಹಾರೈಸಿದರು.