
ಜನವರಿ, ಏಪ್ರಿಲ್ 10: ಆನ್‌ಲೈನ್ ವಂಚನೆಗಳನ್ನು ನಿಯಂತ್ರಿಸುವ ಉದ್ದೇಶದಿಂದ ಡಿಜಿಟಲ್ ಪೇಮೆಂಟ್ ಸಿಸ್ಟಂನಲ್ಲಿ (ಡಿಜಿಟಲ್ ಪಾವತಿ ವ್ಯವಸ್ಥೆ) ಸರ್ಕಾರ ಒಂದಷ್ಟು ಮಾರ್ಪಾಡು ಮಾಡಲು ಹೊರಟಿದೆ. ಡಿಜಿಟಲ್ ಪೇಮೆಂಟ್ ಅನ್ನು ಹೆಚ್ಚು ಸುರಕ್ಷಿತವಾಗಿಸಲು ಅಧಿಕ ಮೌಲ್ಯದ ವಹಿವಾಟುಗಳಿಗೆ ಒಂದು ಗಂಟೆ ವಿಳಂಬ ಪಾವತಿ ವ್ಯವಸ್ಥೆ ತರುವ ಪ್ರಸ್ತಾಪವನ್ನು ಆರ್ಬಿಐ ಮುಂದಿದೆ ಎಂದು ವರದಿಗಳು ಹೇಳುತ್ತವೆ. ಈ ಪ್ರಸ್ತಾಪದ ಪ್ರಕಾರ ಯುಪಿಐ ಮತ್ತು ಐಎಂಪಿಎಸ್ ಇತ್ಯಾದಿಗಳಿಂದ ಮಾಡಲಾಗುವುದು 10,000 ರೂಗ್ ಅಧಿಕ ಮೊತ್ತದ ಪೇಮೆಂಟ್‌ಗಳು ರಿಯಲ್ ಟೈಮ್‌ನಲ್ಲಿ ಸಂದಾಯವಾಗುವುದಿಲ್ಲ.
ಗಮನಿಸಬೇಕಾದ ಸಂಗತಿ ಎಂದರೆ ಈ ನಿರ್ಬಂಧವು ವ್ಯಕ್ತಿಯಿಂದ ವ್ಯಕ್ತಿಗೆ ಮಾಡಲಾಗುವ ಪೇಮೆಂಟ್ ಅನ್ವಯವಾಗುತ್ತದೆ. ವರ್ತಕರಿಗೆ ಮಾಡಲಾಗುವ ಪೇಮೆಂಟ್‌ಗಳು ಮಾಮೂಲಿ ರೀತಿಯಲ್ಲಿ ರಿಯಲ್ ಟೈಮ್‌ನಲ್ಲೇ ಆಗುತ್ತವೆ.
ಇದನ್ನೂ ಓದಿ: ಟೋಲ್ ಬೂಟ್‌ನಲ್ಲಿ ಇನ್ಮುಂದೆ ಕ್ಯಾಶ್ ಪೇಮೆಂಟ್‌ಗೆ ಅವಕಾಶವಿಲ್ಲ; ಫಾಸ್ಟ್ಯಾಗ್ ಕಡ್ಡಾಯ
10,000 ರೂಗಿಂತ ಹೆಚ್ಚಿನ ಮೊತ್ತದ ಪೇಮೆಂಟ್ ಮಾಡಿದರೆ ಒಂದು ಗಂಟೆಯ ಕೂಲಿಂಗ್ ಪೀರಿಯಡ್ ಬರುತ್ತದೆ. ಈ ಸಂದರ್ಭದಲ್ಲಿ ಆ ಹಣವು ತತ್ಕ್ಷಣವೇ ವ್ಯಕ್ತಿಯ ಖಾತೆಗೆ ರವಾನೆಯಾಗುವುದಿಲ್ಲ. ಆನ್‌ಲೈನ್‌ನಲ್ಲಿ ಕೆಲವರು ಲಿಂಕ್‌ಗಳನ್ನು ಕಳುಹಿಸಿ ಅಕ್ರಮವಾಗಿ ಪೇಮೆಂಟ್ ಮಾಡಿಸಿಕೊಳ್ಳುತ್ತಿರುವ ಪ್ರಕರಣಗಳು ಹಲವು ಬೆಳಕಿಗೆ ಬರುತ್ತಿವೆ. ಜೊತೆಗೆ, ಯುಪಿಐ ಗ್ರಾಹಕರು ತಪ್ಪಾಗಿ ಹಣ ಕಳುಹಿಸುವ ಸಾಧ್ಯತೆಗಳಿವೆ. ಇದನ್ನು ತಪ್ಪಿಸಲು ಆರ್ಬಿಐ ಈ ರೀತಿಯ ಕ್ರಮವನ್ನು ತೆಗೆದುಕೊಂಡಿದೆ.
ಪರಿಚಿತ ವ್ಯಕ್ತಿಗಳ ವೈಟ್ಲಿಸ್ಟ್
ಆರ್ಬಿಐ ಬಳಿ ಇನ್ನೊಂದು ಪ್ರಸ್ತಾಪವಿದೆ. ಹಣ ಕಳುಹಿಸುವ ವ್ಯಕ್ತಿಗಳು ಅಪರಿಚಿತರಾಗಿದ್ದರೆ ರಿಯಲ್ ಟೈಮ್‌ನಲ್ಲಿ ಪೇಮೆಂಟ್ ಮಾಡಲು ಅಪಾಯವಾಗಬಹುದು. ಆದರೆ, ಪರಿಚಿತರಾಗಿದ್ದರೆ? ಆರ್ಬಿಐ ಇಡಕ್ಕೊಂದು ಪರಿಹಾರ ಹುಡುಕಿದೆ. ನೆಟ್‌ಬ್ಯಾಂಕಿಂಗ್‌ನಲ್ಲಿ ಇರುವಂತೆ ಪರಿಚಿತ ಅಥವಾ ಖಾತ್ರಿ ಇರುವ ವ್ಯಕ್ತಿಗಳಿಗೆ ಪೂರ್ವಾನುಮತಿ ಕೊಡಲು ವೈಟ್‌ಲಿಸ್ಟಿಂಗ್‌ನಂತಹ ವ್ಯವಸ್ಥೆ ಮಾಡುವುದು ಆರ್ ಬಿಐನ ಉದ್ದೇಶವಾಗಿದೆ.
ಇದನ್ನೂ ಓದಿ: AMFI ಡೇಟಾ: ಮಾರ್ಚ್‌ನಲ್ಲಿ ಈಕ್ವಿಟಿ ಫಂಡ್‌ಗಳಿಗೆ ಹೂಡಿಕೆ ಸುಗ್ಗಿ; ಶೇ. 55ರಷ್ಟು ಹೆಚ್ಚಿದ ಒಳಹರಿವು
10,000ಕ್ಕೂ ಹೆಚ್ಚಿನ ಮೊತ್ತದ ಟ್ರಾನ್ಸಾಕ್ಷನ್ಗಳ ಮೇಲೆ ಆರ್ಬಿಐ ನಿರ್ಬಂಧ ಹಾಕಲು ಕಾರಣವಿದೆ. ಹೆಚ್ಚಿನ ಫ್ರಾಡ್ ಕೇಸ್ಗಳು ಈ ಮೊತ್ತದ ಟ್ರಾನ್ಸಾಕ್ಷನ್ಗಳಿಗೆ ಸಂಬಂಧಿಸಿದೆ ಆಗಿವೆ. ಈ ಫ್ರಾಡ್‌ಗಳಿಗೆ ಜನರು ಕಳೆದುಕೊಂಡಿರುವ ಒಟ್ಟು ಹಣದ ಶೇ. 98.5ರಷ್ಟು ಮೊತ್ತವು ಈ ಕೆಟಗರಿಯದ್ದಾಗಿದೆ. ಹೀಗಾಗಿ, ವ್ಯಕ್ತಿಯಿಂದ ವ್ಯಕ್ತಿಗೆ 10,000 ರೂಗೂ ಅಧಿಕ ಯುಪಿಐ, ಐಎಂಪಿಎಸ್ ಪೇಮೆಂಟ್ ನಿಯಮವನ್ನು ಆರ್ ಬಿಐ ಬಿಗಿಗೊಳಿಸಲು ಮುಂದಾಗಿದೆ.
ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ