
ಕೋಲಾರ, ಏಪ್ರಿಲ್ 10: ಅರಣ್ಯ ಭೂಮಿ ಒತ್ತುವರಿ (ಭೂಮಿ ಅತಿಕ್ರಮಣ) ವಿಚಾರಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆಗೆ ಭೂಮಿಯನ್ನು ಬಿಟ್ಟುಕೊಡುವಂತೆ ಮೇಲ್ಮನವಿ ಪ್ರಾಧಿಕಾರ ಮತ್ತು ಅರಣ್ಯ ಸಂರಕ್ಷಣಾಧಿಕಾರಿಗಳ ನ್ಯಾಯಾಲಯ ಶುಕ್ರವಾರ ಆದೇಶ ಹೊರಡಿಸಿದೆ. ಆ ಮೂಲಕ ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ಗೆ ಹಿನ್ನಡೆಯಾಗಿದೆ. ಜೊತೆಗೆ ಅವರು ಸಲ್ಲಿಸಿದ ಮೇಲ್ಮನವಿಗೆ ಅರ್ಹತೆ ಇಲ್ಲವೆಂದು ವಜಾಗೊಳಿಸಲಾಗಿದೆ.
ಅರಣ್ಯ ಇಲಾಖೆಗೆ ಭೂಮಿ ಬಿಟ್ಟುಕೊಡುವಂತೆ ಆದೇಶ
ಪ್ರಕರಣಕ್ಕೆ ರಮೇಶ್‌ಕುಮಾರ್ ಸಲ್ಲಿಸಿದ ಮೇಲ್ಮನವಿ ಅಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಅರಣ್ಯ ಇಲಾಖೆಗೆ ಭೂಮಿ ಬಿಟ್ಟುಕೊಡುವಂತೆ ಸೂಚಿಸಲಾಗಿದೆ. ಈ ಅರಣ್ಯ ಕಾಯ್ದೆ 64(A) ವಿಧಿಯಡಿ ಒತ್ತುವರಿಗಾಗಿ ನ್ಯಾಯಾಲಯದ ನಿರ್ದೇಶನ ನೀಡಿದೆ. 2025ರ ಜನವರಿ 15 ಮತ್ತು 16ರಂದು ನಡೆಸಿದ ಜಂಟಿ ಸಮೀಕ್ಷೆಯ ವರದಿ ಆಧರಿಸಿ ಈ ಆದೇಶ ನೀಡಲಾಗಿದೆ.
ಇದನ್ನೂ ಓದಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಮತ್ತೆ ಭೂಸಂಕಷ್ಟ? ಜ. 15 ರೊಳಗೆ ಸರ್ವೆ ಮುಗಿಸಲು ಆದೇಶ
ಆದೇಶವನ್ನು ಸ್ವೀಕರಿಸಿದ ದಿನಾಂಕದಿಂದ 30 ದಿನಗಳೊಳಗೆ ಅತಿಕ್ರಮಣ ಭೂಮಿಯನ್ನು ಶಾಂತಿಯುತವಾಗಿ ಅರಣ್ಯ ಇಲಾಖೆಗೆ ಹಸ್ತಾಂತರಿಸಲು ಸೂಚಿಸಲಾಗಿದೆ. ನಿಗದಿತ ಅವಧಿಯ ಆದೇಶ ಪಾಲನೆ ಮಾಡಿದ್ದು, ಕೋಲಾರದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಭೂಮಿ ಸೂಚಿಸಲಾಗಿದೆ.
ಏನಿದು ಪ್ರಕರಣ?
ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕಳೆದ 2 ರಿಂದ ಅರಣ್ಯ ಭೂಮಿಯ ವಿವಾದದಲ್ಲಿ ಸಿಲುಕಿದ್ದಾರೆ. ಅವರ ಹುಟ್ಟೂರಾದ ಕೋ ಜಿಲ್ಲೆ, ಶ್ರೀನಿವಾಸಪುರ ತಾಲೂಕಿನ ಹೊಸಹುಡ್ಯ ಗ್ರಾಮದಲ್ಲಿರುವ ಸರ್ವೆ ಸಂಖ್ಯೆ 1 ಮತ್ತು 2ರಲ್ಲಿ 60.23 ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವ ಆರೋಪ ಕೇಳಿಬಂದಿತ್ತು.
ಇದನ್ನೂ ಓದಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ 64 ಅರಣ್ಯ ಭೂಮಿ ಒತ್ತುವರಿ ಆರೋಪ
ಬೇರೆ ಬೇರೆ ರೈತರಿಂದ ಖರೀದಿ ನಡೆದ ಭೂಮಿಯ ಸುತ್ತಲೂ 60.23 ಎರಕೆ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿದ ಜಂಟಿ ಸರ್ವೆ ಕಾರ್ಯದ ವರದಿಯಲ್ಲಿ ನಮೂದಿಸಲಾಗಿದೆ. ಅದರಂತೆ ಜಂಟಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.