ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!


ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಬರ್ಬರ ಹತ್ಯೆ!

ಧಾರವಾಡ, ಏಪ್ರಿಲ್ 11: ಅವಳಿ ನಿಮ್ಮಿಂದ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದ ಫೈರೋಜ್ ಪಠಾಣ್ ಅವರನ್ನು ಧಾರವಾಡ ನಗರದ ಹಾಶ್ಮಿ ನಗರದಲ್ಲಿರುವ ಅವರ ಮನೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಶುಕ್ರವಾರ ರಾತ್ರಿ ಆತನ ಮನೆಗೆ ನುಗ್ಗಿದ ಆರೋಪಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಘಟನೆಯ ಮಾಹಿತಿ ತಿಳಿದು ಉಪನಗರ ಠಾಣೆಗೆ ಭೇಟಿ ನೀಡಿ ಪರಿಶೀಲನೆ ಆರು ಮಂದಿ ಸೇರಿ ಕೃತ್ಯವನ್ನೆಸಗಿದ್ದಾರೆ.

ಇಬ್ಬರು ಆರೋಪಿಗಳ ಬಂಧನ!

ಮೊಹಮ್ಮದ್ ಶಾ ಸೇರಿದಂತೆ ಸದ್ದಾಂ, ಗೌಸ್, ಪರ್ವೇಜ್ ಹತ್ಯೆಗೈದ ಆರೋಪಿಗಳು ಎಂದು ಸೂಚಿಸಿದ್ದಾರೆ. ಕೊಲೆ ಸಂಚು ರೂಪಿಸಿದ್ದ ಅರ್ಬಾಜ್ ಪಠಾಣ್ ಮತ್ತು ಗುಲಾಬ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹತ್ಯೆಗೈದ ನಾಲ್ವರು ಆರೋಪಿಗಳು ಪರಾರಿ, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ವೈಯಕ್ತಿಕ ಹಾಗೂ ವೈಷಮ್ಯವೇ ಹತ್ಯೆಗೆ ಕಾರಣವಾಗಿರಬಹುದೆಂದು ಶಂಕಿಸಲಾಗಿದ್ದು, ಉಪನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

(ಮಾಹಿತಿ ಅಪ್‌ಡೇಟ್ ಆಗುತ್ತಿದೆ)

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *