ಈ ತಕ್ಷಣವೇ ರಾಜೀನಾಮೆ ನೀಡಿ: ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್‌ಗೆ ಸೂಚನೆ! ಮುಂದಿನ ತಲೆದಂಡ ಸಚಿವ ಜಮೀರ್?

ಈ ತಕ್ಷಣವೇ ರಾಜೀನಾಮೆ ನೀಡಿ: ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್‌ಗೆ ಸೂಚನೆ! ಮುಂದಿನ ತಲೆದಂಡ ಸಚಿವ ಜಮೀರ್?


ಈ ಕೂಡಲೇ ರಾಜೀನಾಮೆ ನೀಡಿ: ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್‌ಗೆ ಸೂಚನೆ! ಮುಂದಿನ ತಲೆದಂಡ ಸಚಿವ ಜಮೀರ್?

ಬೆಂಗಳೂರು, ಏ.11 : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ವ ಬೆಳವಣೆಗೆಗಳು ನಡೆದಿವೆ. ಕಾಂಗ್ರೆಸ್ ಆಂತರಿಕ ಕಚ್ಚಾಟಕ್ಕೆ ರಾಜೀನಾಮೆ ಮೂಲಕ ತೆರೆ ಬೀಳುವ ಸಾಧ್ಯತೆಯಿದೆ. ದಾವಣಗೆರೆ ಚುನಾವಣಾ ಪ್ರಚಾರದಲ್ಲಿ ನಡೆದ ಘಟನೆಗಳು ಹಾಗೂ ಸಂಪೂರ್ಣ ಆಂತರಿಕ ವರದಿ ಕಾಂಗ್ರೆಸ್ ಹೈಕಮಾಂಡ್ ಕೈಸೇರಿದೆ. ಇದೀಗ ಈ ವರದಿ ಹೈಕಮಾಂಡ್ ಕೈಸೇರುತ್ತಿರುವ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿದೆ. ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ಅಭಿಷೇಕ್ ದತ್ ನೀಡಿದ ವರದಿ ಬೆನ್ನಲ್ಲೇ, ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಶಿಸ್ತು ಕ್ರಮದ ತೂಗುಕತ್ತಿ ನೇತಾಡುತ್ತಿದೆ.

ಉಪಚುನಾವಣೆ ಸಂದರ್ಭದಲ್ಲಿ ಪಕ್ಷದ ಆಂತರಿಕ ಬೆಳವಣಿಗೆಗಳು ಮತ್ತು ನಾಯಕರ ನಡುವಿನ ಮುನಿಸು ಕಾಂಗ್ರೆಸ್ ಅಭ್ಯರ್ಥಿಗೆ ಅಡ್ಡಿಯಾಗಬಹುದು ಎಂಬ ಆತಂಕವನ್ನು ವರದಿ ಮಾಡಿದೆ. ಪ್ರಮುಖವಾಗಿ ಅಲ್ಪಸಂಖ್ಯಾತ ಸಮುದಾಯದ ಕೆಲವು ಶಾಸಕರೇ ಸಚಿವ ಜಮೀರ್ ಅಹ್ಮದ್ ಅವರ ವಿರುದ್ಧ ಹೈಕಮಾಂಡ್‌ಗೆ ದೂರು ನೀಡಿದ್ದು, ಸಚಿವ ಸಂಪುಟ ಪುನಾರಚನೆ ವೇಳೆ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.

ಹೈಕಮಾಂಡ್ಯಕ್ಷನ್ ಪ್ರಾರಂಭವಾಗುವ ಸೂಚನೆ ಸಿಗುತ್ತಿದ್ದಂತೆಯೇ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮತ್ತು ಎಂಎಲ್‌ಸಿ ಅಬ್ದುಲ್ ಜಬ್ಬಾರ್ ತಮ್ಮ ಸ್ಥಾನಕ್ಕೆ ಬಿಡುಗಡೆ ಮಾಡಿದರು. ಪಕ್ಷವು ಸಸ್ಪೆಂಡ್ ಮಾಡುವ ಮುನ್ಸೂಚನೆ ಅರಿತ ಜಬ್ಬಾರ್, ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಮತ್ತೊಂದೆಡೆ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹಾಗೂ ಎಂಎಲ್‌ಸಿ ನಜೀರ್ ಅಹ್ಮದ್ ಅವರಿಗೂ ರಾಜೀನಾಮೆ ನೀಡಲು ಹೈಕಮಾಂಡ್ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಕಾಂಗ್ರೆಸ್ ಮುಸ್ಲಿಂ ನಾಯಕರಲ್ಲಿ ಕಿಚ್ಚು ಹೊತ್ತಿಸಿದ ದಾವಣಗೆರೆ ದಂಗಲ್, ಪಕ್ಷದ ವಿರುದ್ಧ ಜಮೀರ್ ಷಡ್ಯಂತ್ರ ರೂಪಿಸಿದ್ರಾ?

ಸದ್ಯದ ಬೆಳವಣಿಗೆಗಳು ಸಚಿವ ಜಮೀರ್ ಅಹ್ಮದ್ ಅವರನ್ನೇ ಗುರಿಯಾಗಿಸಿಕೊಂಡಿವೆ. ಸಚಿವ ಸಂಪುಟ ಪುನಾರಚನೆಯ ಸಂದರ್ಭದಲ್ಲಿ ಜಮೀರ್ ಅವರ ‘ತಲೆದಂಡ’ವಾಗುವುದು ನಿಶ್ಚಿತ ಎಂಬ ಮಾತುಗಳು ಕೈ ಪಾಳಯದಲ್ಲಿ ಕೇಳಿಬರುತ್ತಿವೆ. ಇತ್ತ ಈ ಭಾರಿ ಬೆಳವಣಿಗೆಯಿಂದ ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಯ್ದುಕೊಂಡಿದ್ದಾರೆ. ದಾವಣಗೆರೆ ವಿದ್ಯಮಾನ ಮತ್ತು ರಾಜೀನಾಮೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಈ ಬಗ್ಗೆ ನನಗೆ ಗೊತ್ತಿಲ್ಲ” ಎನ್ನುವ ಮೂಲಕ ಜಾಣ್ಮೆಯ ಮೌನ ವಹಿಸಿದ್ದಾರೆ.

ವರದಿ: ಈರಣ್ಣ ಬಸವ

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *