Headlines

ನನ್ನಿಂದ ಅಂತಾ ತಪ್ಪು‌ ಏನಾಗಿದೆ? ರಾಜೀನಾಮೆ ಬೆನ್ನಲ್ಲೇ ಗುಡುಗಿದ ಕಾಂಗ್ರೆಸ್ ಮುಖಂಡ ಅಬ್ದುಲ್‌ ಜಬ್ಬಾರ್

ನನ್ನಿಂದ ಅಂತಾ ತಪ್ಪು‌ ಏನಾಗಿದೆ? ರಾಜೀನಾಮೆ ಬೆನ್ನಲ್ಲೇ ಗುಡುಗಿದ ಕಾಂಗ್ರೆಸ್ ಮುಖಂಡ ಅಬ್ದುಲ್‌ ಜಬ್ಬಾರ್


ನನ್ನಿಂದ ಅಂತಾ ತಪ್ಪು ಏನಾಗಿದೆ? ರಾಜೀನಾಮೆ ಬೆನ್ನಲ್ಲೇ ಗುಡುಗಿದ ಕಾಂಗ್ರೆಸ್ ಮುಖಂಡ ಅಬ್ದುಲ್ ಜಬ್ಬಾರ್

ಬೆಂಗಳೂರು, ಏಪ್ರಿಲ್ 11: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ದಾವಣಗೆರೆ ಕಾಂಗ್ರೆಸ್ (ಕಾಂಗ್ರೆಸ್) ಅಭ್ಯರ್ಥಿ ಸಮರ್ಥ್ ವಿರುದ್ಧ ಷಡ್ಯಂತ್ರ ಆರೋಪ ಸಂಬಂಧ ರಾಜೀನಾಮೆ ಕೊಡುವ ಪರಿಸ್ಥಿತಿ ಬಂದಿದೆ. ಪಕ್ಷ ವಿರೋಧದ ಚಟುವಟಿಕೆಯಲ್ಲಿ ಭಾಗಿ ಆರೋಪ ಸಂಬಂಧ ಹೈಕಮಾಂಡ್ ಕೈಗೆ ವರದಿಯಾಗಿದೆ ಎಂದು ಖಡಕ್ ಆಗಿ ರಾಜೀನಾಮೆ ಕೊಡಿ ಅಂತಾ ಐಸಿಸಿ ಸೂಚನೆ ಕೊಟ್ಟಿದೆ. ಅದರಂತೆ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಮುಖಂಡ ಅಬ್ದುಲ್ ಜಬ್ಬಾರ್ (ಅಬ್ದುಲ್ ಜಬ್ಬಾರ್) ರಾಜೀನಾಮೆ ಕೊಟ್ಟಿದ್ದಾರೆ.

ನನ್ನಿಂದ ಅಂತಾ ತಪ್ಪು ಏನಾಗಿದೆ: ಅಬ್ದುಲ್ ಜಬ್ಬಾರ್

ಬೆಂಗಳೂರಿನಲ್ಲಿ ಟಿವಿ9ಗೆ ಕಾಂಗ್ರೆಸ್ ಮುಖಂಡ ಅಬ್ದುಲ್ ಜಬ್ಬಾರ್ ಹೇಳಿಕೆ ನೀಡಿದ್ದಾರೆ, ಏಪ್ರಿಲ್ 3 ರಂದು ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ಹೈಕಮಾಂಡ್ ಯಾವುದೇ ತೀರ್ಮಾನ ಕೈಗೊಂಡಿದೆ ಅದಕ್ಕೆ ಬದ್ಧ. ನನ್ನಿಂದ ಅಂತಾ ತಪ್ಪು ಏನಾಗಿದೆ ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಈ ಕೂಡಲೇ ರಾಜೀನಾಮೆ ನೀಡಿ: ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್‌ಗೆ ಸೂಚನೆ! ಮುಂದಿನ ತಲೆದಂಡ ಸಚಿವ ಜಮೀರ್?

ಅತಿ ಬುದ್ಧಿವಂತಿಕೆ ಒಳ್ಳೆಯದಲ್ಲ. ಬೀಳಿಸಿ ಕಾಲು ಎಳೆಯುವ ಕೆಲಸ ಬೇಡ. ಹೈಕಮಾಂಡ್ ಹುದ್ದೆ ಕೊಟ್ಟಿತ್ತು, ಅರ್ಹತೆ ಇಲ್ಲದೆ ಏಕೆ ಕೊಡುತ್ತಾರೆಂದು ಗೊತ್ತಿಲ್ಲ. ಕಾಂಗ್ರೆಸ್ ಪಕ್ಷ ಬಿಟ್ಟು ನಾನು ಬೇರೆ ಪಕ್ಷದ ಕಡೆ ಯೋಚನೆ ಮಾಡಲ್ಲ. ಪಕ್ಷದಲ್ಲಿ ನ್ಯಾಯ ನೀತಿ ಇತ್ತು, ಅದನ್ನು ಮುಂದುವರಿಸಿ ಹೋಗಬೇಕು. ಸಮುದಾಯಕ್ಕಾಗಿ ಕಾಂಗ್ರೆಸ್ ಪಕ್ಷಕ್ಕೆ ವಿರೋಧ ಮಾಡುವುದಕ್ಕೆ ಆಗಲ್ಲ. ಇನ್ನು ಅವರು ಸಚಿವ ಸ್ಥಾನಕ್ಕಾಗಿ ಒಡಕು ಮೂಡಿಸುತ್ತಿದ್ದಾರೆ. ನನಗೆ ಸಚಿವ ಸ್ಥಾನ ಕೊಡಿ ಅಂತಾ ಕೇಳಿಲ್ಲ. ಅಲ್ಪಸಂಖ್ಯಾತರಿಗೆ ಸಚಿವ ಸ್ಥಾನ ಕೊಡಿ ಅಂತಾ ಪತ್ರದಲ್ಲಿ ಬರೆದಿದ್ದೇವೆ ಎಂದು ಹೇಳಿದ್ದಾರೆ.

ಅದನ್ನು ಪ್ರಶ್ನಿಸಿದ್ದೇ ತಪ್ಪಾ?

ಇನ್ನು ಬೈಎಲೆಕ್ಷನ್ ಸಂಬಂಧ ಯಾವೊಬ್ಬ ನಾಯಕರೂ ನನ್ನ ಜತೆ ಚರ್ಚಿಸಿಲ್ಲ. ನನ್ನ ಬಿಟ್ಟು ಚುನಾವಣೆಗೆ ಹೋಗಿದ್ದಾರೆ, ಆದರೂ ಗೆಲ್ಲಲಿ ಅಂತಾ ಹಾರಿಸುವೆ. ಕುರುಬ ಸಮುದಾಯ ಸೇರಿ ಬೇರೆಯವರಿಗೆ ಟಿಕೆಟ್ ಕೊಡಿ ಅಂದಿದ್ದೆ. ಒಂದೇ ಮನೆಯಲ್ಲಿ ನಾಲ್ವರಿಗೆ ಟಿಕೆಟ್ ಕೊಟ್ಟರೆ ಹೇಗೆ? ಅದನ್ನು ಪ್ರಶ್ನಿಸಿದ್ದೇ ತಪ್ಪಾ? ಸಚಿವ ಜಮೀರ್ ಬಂದ್‌ಮೇಲೆ ಶೇ.50ರಷ್ಟು ವಿರೋಧ ಕಡಿಮೆಯಾಗಿತ್ತು. ಯಾವ ನಾಯಕರೂ ಸ್ಪಷ್ಟೀಕರಣ ಕೇಳಿಲ್ಲ ಎಂದು ಅಬ್ದುಲ್ ಜಬ್ಬಾರ್.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *