ಹಿರಿಯ ಗಾಯಕಿ ಆಶಾ ಭೋಸ್ಲೆ ಅವರು ಹೃದಯಾಘಾತದಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎದೆನೋವು ಮತ್ತು ಸೋಂಕಿನಿಂದ ಬಳಲುತ್ತಿರುವುದಾಗಿ ಅವರ ಮೊಮ್ಮಗಳು ಖಚಿತಪಡಿಸಿದ್ದು, ವದಂತಿಗಳಿಗೆ ಕಿವಿಗೊಡದಂತೆ ಕುಟುಂಬ ಮನವಿ ಮಾಡಿದೆ.
ಹಿರಿಯ ಗಾಯಕಿ ಆಶಾ ಭೋಸ್ಲೆ ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಕೆಲವು ತಿಂಗಳುಗಳಿಂದ ಆಶಾ ಬೋಸ್ಲೆ ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು ವರದಿಯಾಗಿದೆ. ಸದ್ಯ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಡಾ. ಪ್ರತೀತ್ ಸಮ್ದಾನಿ ಪ್ರತಿಕ್ರಿಯಿಸಿದ್ದು, ಏಪ್ರಿಲ್ 11 ರ ಶನಿವಾರ ಆಶಾ ಭೋಸ್ಲೆ ಅವರಿಗೆ ಹೃದಯಾಘಾತವಾಯಿತು. ನಂತರ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತುರ್ತು ವೈದ್ಯಕೀಯ ಸೇವೆಗಳ ಘಟಕಕ್ಕೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ" ಎಂದು ಮಾಹಿತಿ ನೀಡಿದ್ದಾರೆ.

ಆಶಾ ಭೋಸ್ಲೆ ಅವರ ಮೊಮ್ಮಗಳು ಜನೈ ಬೋಸ್ಲೆ, ನನ್ನ ಅಜ್ಜಿ ಎದೆನೋವು ಮತ್ತು ಸೋಂಕಿನಿಂದ ಬಳಲುತ್ತಿದ್ದಾರೆ. ಅಜ್ಜಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೇಗ ಗುಣಮುಖರಾಗುತ್ತಾರೆ ಎಂದು ಭಾವಿಸಿದ್ದು, ಶೀಘ್ರದಲ್ಲಿಯೇ ಆರೋಗ್ಯದ ಕುರಿತು ಮಾಹಿತಿ ನೀಡುತ್ತೇವೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಇದೇ ಪೋಸ್ಟ್‌ನಲ್ಲಿ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಆಶಾ ಭೋಸ್ಲೆ ಕುಟುಂಬ ಮನವಿ ಮಾಡಿಕೊಂಡಿದೆ. 92 ವರ್ಷದ ಗಾಯಕಿ ಸುಮಾರು 70 ವರ್ಷಗಳಿಂದ ಸಿನಿ ಇಂಡಸ್ಟ್ರಿಯಲ್ಲಿ ಸಕ್ರಿಯರಾಗಿದ್ದಾರೆ. ಹಿಂದಿ ಮಾತ್ರವಲ್ಲದೆ 20 ಭಾರತೀಯ ಮತ್ತು ಹಲವಾರು ವಿದೇಶಿ ಭಾಷೆಗಳಲ್ಲಿ ಆಶಾ ಭೋಸ್ಲೆ ಹಾಡಿದ್ದಾರೆ.

ತಮ್ಮ ವೃತ್ತಿಜೀವನದಲ್ಲಿ ಅನೇಕ ಸಾಧನೆಗಳನ್ನು ಮಾಡಿರುವ ಆಶಾ ಭೋಸ್ಲೆ ಅವರಿಗೆ 2000 ರಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. 2008 ರಲ್ಲಿ ಭಾರತ ಸರ್ಕಾರ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು. ಇದೇ ರೀತಿ ಹಲವು ಪ್ರಶಸ್ತಿಗಳನ್ನು ಆಶಾ ಬೋಸ್ಲೆ ಪಡೆದುಕೊಂಡಿದ್ದಾರೆ.

Source link
Asha Bhosle: ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ, ಗಂಭೀರ? ಐಸಿಯುನಲ್ಲಿ ಚಿಕಿತ್ಸೆ