Headlines

ಸ್ವಪಕ್ಷ ಸಚಿವರ ಕಾರ್ಯವೈಖರಿಗೆ ಶಾಸಕ ರವಿಕುಮಾರ್ ಗಣಿಗ ಗರಂ; ಹೊಸಬರಿಗೆ ಅವಕಾಶಕ್ಕೆ ಆಗ್ರಹ

ಸ್ವಪಕ್ಷ ಸಚಿವರ ಕಾರ್ಯವೈಖರಿಗೆ ಶಾಸಕ ರವಿಕುಮಾರ್ ಗಣಿಗ ಗರಂ; ಹೊಸಬರಿಗೆ ಅವಕಾಶಕ್ಕೆ ಆಗ್ರಹ


ಸ್ವಪಕ್ಷ ಸಚಿವರ ಕಾರ್ಯವೈಖರಿಗೆ ಶಾಸಕ ರವಿಕುಮಾರ್ ಗಣಿಗ ಗರಂ; ಹೊಸಬರಿಗೆ ಅವಕಾಶಕ್ಕೆ ಆಗ್ರಹ

ಮಂಡ್ಯ, ಏಪ್ರಿಲ್ 12: ಸಚಿವ ಸಂಪುಟ ಪುನರ್‌ರಚನೆ ಕುರಿತು ಶಾಸಕ ರವಿಕುಮಾರ್ ಗಣಿಗ ಮಂಡ್ಯದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ. ಅವರೆಲ್ಲರಿಗೂ ಸಚಿವ ಸ್ಥಾನ ಸಿಕ್ಕು ರಾಜ್ಯಕ್ಕೆ ಸೇವೆ ಸಲ್ಲಿಸಲಿ. ಈ ಸಂಬಂಧ ತಾವು ಸೇರಿದಂತೆ 38 ಶಾಸಕರು ಪತ್ರ ಬರೆದಿದ್ದು, ಐದು ಮಂದಿ ಹೊಸಬರಿಗೆ ಮಂತ್ರಿಗಿರಿ ನೀಡುವಂತೆ ಕೋರಿದ್ದಾರೆ. ಹೊಸದಾಗಿ ಶಾಸಕರಾದವರಿಗೆ ಸಚಿವ ಸ್ಥಾನ ಸಿಗಬೇಕು ಎಂಬ ತಮ್ಮ ಆಗ್ರಹದಲ್ಲಿ ಯಾವುದೇ ಬದಲಾವಣೆ ಇಲ್ಲ. ವೈಯಕ್ತಿಕವಾಗಿ ತನಗೆ ಸಚಿವ ಸ್ಥಾನ ಬೇಡ ಎಂದು ರವಿಕುಮಾರ್ ಗಣಿಗ. ಹಾಲಿ ಇರುವ ಕೆಲವು ಸಚಿವರು ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿರುವುದು ಮತ್ತು ಜನರಿಗೆ ಲಭ್ಯವಿಲ್ಲದಿರುವುದು ಕೆಲಸಗಳಿಗೆ ಅಡ್ಡಿಯಾಗುತ್ತಿದೆ. ಈ ರೀತಿಯ ಸಚಿವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡುವುದು ಉತ್ತಮ. ಹೀಗಿದ್ದರೂ ಈ ನಿರ್ಧಾರ ಮುಖ್ಯಮಂತ್ರಿಗಳು ಮತ್ತು ಪಕ್ಷದ ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ಅವರು ಹೇಳಿದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *