
ಕಗ್ಗದಾಸಪುರದಲ್ಲಿ ಅಮಾನವೀಯವಾಗಿ ನಾಯಿಗಳನ್ನು ಚೀಲಗಳಲ್ಲಿ ಕಟ್ಟಿ ಸಾಗಿಸಿದ ಆರೋಪ ಕೇಳಿಬಂದಿದೆ. ಡಿಆರ್‌ಡಿಒ ಸಂಕೀರ್ಣದಲ್ಲಿ ಇತ್ತೀಚೆಗೆ ಈ ಘಟನೆ ನಡೆದಿದೆ. ಅದರ ಬೆನ್ನಲ್ಲೇ, ಬೀದಿ ನಾಯಿಗಳು (ಬೀದಿ ನಾಯಿಗಳು) ಮೇಲಿನ ಕ್ರೌರ್ಯ ಖಂಡಿಸಿ ಪ್ರತಿಭಟನೆ ನಡೆಸಲಾಯಿತು. ಇದರಲ್ಲಿ ನಟಿ ರಮ್ಯಾ ಕೂಡ ಭಾಗಿ ಆಗಿದ್ದಾರೆ. ಏಪ್ರಿಲ್ 11 ರಂದು ಶ್ವಾನ ಪ್ರಿಯರು ಫ್ರೀಡಂ ಪಾರ್ಕ್‌ನಲ್ಲಿ ಒಗ್ಗೂಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ಹೋರಾಟಕ್ಕೆ ಧ್ವನಿಯಾದ ರಮ್ಯಾ (ರಮ್ಯಾ ದಿವ್ಯ ಸ್ಪಂದನ) ಅವರು ಶ್ವಾನಗಳ ಮೇಲೆ ನಡೆದ ದೌರ್ಜನ್ಯದ ದೃಶ್ಯಗಳನ್ನು ಕಂಡು ಭಾವುಕರಾದರು.
‘ನಾಯಿಗಳಿಗೆ ಏನಾಗಿರಬಹುದು ಎಂದು ಕಲ್ಪಿಸಿಕೊಂಡರೆ ನೋವಾಗುವುದಿಲ್ಲ. ಈ ರೀತಿ ಗೊತ್ತಾಗಿದ್ದು ನನಗೆ ಆಯಿತು’ ಎಂದು ರಮ್ಯಾ ಅವರು ಪ್ರತಿಭಟನೆ ವೇಳೆ ಕಣ್ಣೀರು ಹಾಕಿದ್ದಾರೆ. ಸಂಸ್ಥೆಯೊಂದು ಇಷ್ಟು ಬೇಜವಾಬ್ದಾರಿಯಾಗಿ ನಡೆದುಕೊಂಡಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಮ್ಯಾ ಕಣ್ಣೀರು ಹಾಕಿದ ವಿಡಿಯೋ:
‘ನಾಪತ್ತೆಯಾಗಿರುವ ನಾಯಿಗಳು ಸುರಕ್ಷಿತವಾಗಿ ನಮಗೆ ತೋರಿಸಿ, ಇಲ್ಲದಿದ್ದರೆ ಈ ಕೃತ್ಯಕ್ಕೆ ಕಾರಣರಾದವರನ್ನು ಶಿಕ್ಷಿಸಿ’ ಎಂದು ರಮ್ಯಾ ಹೇಳಿದರು. ಸುಮಾರು 20ಕ್ಕೂ ಹೆಚ್ಚು ನಾಯಿಗಳು ನಾಪತ್ತೆ ಆಗಿವೆ. ಅನಿಮಲ್ ಬರ್ತ್ ಕಂಟ್ರೋಲ್ ನಿಯಮಗಳ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಆಗ್ರಹ ಮಾಡಲಾಗಿದೆ. ಸಿ.ವಿ. ರಾಮನ್ ನಗರ ಅನಿಮಲ್ ಸ್ಕ್ವಾಡ್ ಮತ್ತು ಪ್ರಾಣಿ ಕಲ್ಯಾಣ ಹೋರಾಟಗಾರ್ತಿ ಪ್ರಿಯಾ ಚೆಟ್ಟಿ ರಾಜಗೋಪಾಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಈ ಪ್ರಕರಣ ಮಹದೇವಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ವಿಚಾರಣೆಯಲ್ಲಿದೆ. ಏಪ್ರಿಲ್ 16 ರಂದು ಮುಂದಿನ ವಿಚಾರಣೆ ಇದೆ.
ಇದನ್ನೂ ಓದಿ: ನಾಯಿ ಮೇಲೆ ಕಾರು ಹತ್ತಿಸಿದ ಪ್ರಕರಣ: ಮೃತ ಶ್ವಾನ ಲಾರಾ ಅಂತ್ಯಕ್ರಿಯೆಯಲ್ಲಿ ಕಣ್ಣೀರಿಟ್ಟ ನಟಿ ರಮ್ಯಾ
ರಮ್ಯಾ ಅವರು ಪ್ರಾಣಿಗಳ ಬಗ್ಗೆ ಕಾಳಜಿ ವಹಿಸಿದ್ದಾರೆ. ಅವರು ನಾಯಿಗಳ ರಕ್ಷಣೆ ಬಗ್ಗೆ ಧ್ವನಿ ಎತ್ತಿರುವುದು ಮೊದಲೇನಲ್ಲ. ಈ ಹಿಂದೆ ಅವರ ಇಂಥ ಘಟನೆಗಳು ನಡೆದ ಮಾಧ್ಯಮಗಳ ಎದುರು ಬಂದು ಮಾತನಾಡಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಕೂಡ ಅವರು ಇಂತಹ ಕೃತ್ಯಗಳನ್ನು ಖಂಡಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.