
ಬೆಂಗಳೂರು, ಏಪ್ರಿಲ್ 12: ಬೆಂಗಳೂರು-ಹಾಸನ ಹೆದ್ದಾರಿಯಲ್ಲಿ ನಡೆದ ರಸ್ತೆ ಅಪಘಾತ ಸಂಭವಿಸಿದ್ದ ವ್ಯಕ್ತಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತಕ್ಷಣ ಮಾನವೀಯ ನೆರವು ನೀಡಿದ್ದಾರೆ. ಖಾಸಗಿ ಕಾರ್ಯಕ್ರಮದ ನಿಮಿತ್ತ ಹಾಸನಕ್ಕೆ ತೆರಳುತ್ತಿದ್ದ ಕುಮಾರಸ್ವಾಮಿ, ಬೆಂಗಳೂರು-ಹಾಸನ ರಸ್ತೆಯಲ್ಲಿ ಆಟೋ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತವನ್ನು ಗಮನಿಸಿದ್ದಾರೆ. ಈ ಅಪಘಾತದಲ್ಲಿ ವಿಕ್ರಂ ಎಂಬ ವ್ಯಕ್ತಿ ಗಂಭೀರವಾಗಿತ್ತು, ಸುಮಾರು ಅರ್ಧ ಗಂಟೆಯಿಂದ ರಸ್ತೆಯಲ್ಲೇ ಬಿದ್ದಿದ್ದರು. ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಿ, ಗಾಯಾಳುವವರನ್ನು ಪೊಲೀಸ್ ವಾಹನದಲ್ಲಿ ಆದಿಚುಂಚನಗಿರಿ ಆಸ್ಪತ್ರೆಗೆ ಕಳುಹಿಸಲು ವ್ಯವಸ್ಥೆ ಮಾಡಲಾಗಿದೆ. ಜೊತೆಗೆ, ಆಸ್ಪತ್ರೆಯ ವೈದ್ಯರಿಗೆ ದೂರವಾಣಿ ಕರೆ ಮಾಡಿ, ವಿಕ್ರಂಗೆ ತಕ್ಷಣ ಸೂಕ್ತ ಮತ್ತು ತುರ್ತು ಚಿಕಿತ್ಸೆ ನೀಡುವಂತೆ ಸೂಚಿಸಲಾಗಿದೆ. ಕೇಂದ್ರ ಸಚಿವರ ಈ ಸಮಯೋಚಿತ ಮತ್ತು ಮಾನವೀಯ ಕಾರ್ಯವು ಸ್ಥಳೀಯರಿಂದ ಮತ್ತು ಸಾರ್ವಜನಿಕರಿಂದ ಪ್ರಶಂಸೆಗೊಳಗಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.