
ಬೆಂಗಳೂರು, ಏಪ್ರಿಲ್ 13: ಕರ್ನಾಟಕದಾದ್ಯಂತ (ಬೆಂಗಳೂರು ಹವಾಮಾನ) ಬಿಸಿಲ ಧಗೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವಾಗ, ಜನರನ್ನು ಕಂಗಾಲಾಗಿಸಿದೆ. ಈ ಮಧ್ಯೆ ತುಸು ತಂಪೆರೆಯುವಂಥ ಸುದ್ದಿಯನ್ನು ಹವಾಮಾನ ಇಲಾಖೆ (IMD) ನೀಡಿದೆ. ಹವಾಮಾನ ಇಲಾಖೆಯ ಇತ್ತೀಚಿನ ಮುನ್ಸೂಚನೆ ಪ್ರಕಾರ, ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇಂದು ಮತ್ತು ನಾಳೆ (ಏಪ್ರಿಲ್ 13 ಮತ್ತು 14) ರಾಜ್ಯದ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಎಲ್ಲೆಲ್ಲಿ ಮಳೆ ಸಾಧ್ಯತೆ?
ಐಎಂಡಿ ವರದಿಯ ಪ್ರಕಾರ, ಏಪ್ರಿಲ್ 13 ಮತ್ತು 14 ರಂದು ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಳೆಯ ಸಮಯದಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ. ಇನ್ನೂ ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.
ಬೆಂಗಳೂರಿನಲ್ಲಿ ಎಷ್ಟಿರಲಿದೆ? ಮಳೆ ಬರುತ್ತಾ?
ಬೆಂಗಳೂರಿನಲ್ಲಿ ಮೋಡದ ವಾತಾವರಣವಿರಲಿದೆ, ಗರಿಷ್ಠ ತಾಪಮಾನ 36-37 ಕವಿ ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದೆ. ಏಪ್ರಿಲ್ 13 ರ ಸಂಜೆ ಅಥವಾ ರಾತ್ರಿಯ ವೇಳೆ ಬೆಂಗಳೂರು ನಗರದ ಕೆಲವು ಭಾಗಗಳಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆ 30% ಎಂದು ಗೂಗಲ್ ವೆದರ್ ಮುನ್ಸೂಚನೆ ನೀಡಿದೆ.
ಇನ್ನಷ್ಟು ಏರಿಕೆಯಾಗಲಿದೆ ತಾಪಮಾನ
ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಉಷ್ಣಾಂಶವಾಗಲಿದ್ದು, ಸೆಖೆಯ ವಾತಾವರಣ ನಡೆಯಲಿದೆ. ರಾಜ್ಯದ ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರಗಿ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 2 ರಿಂದ 4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ, ಶಾಖದ ಅಲೆ (ಹೀಟ್ವೇವ್) ಮುನ್ಸೂಚನೆಯನ್ನು ನೀಡುತ್ತದೆ. ಈ ಸಮಯದಲ್ಲಿ ಜನರು ಸನ್ ಸ್ಟ್ರೋಕ್ ನಿಂದ ರಕ್ಷಿಸಿಕೊಳ್ಳಲು ಮಧ್ಯಾಹ್ನದ ವೇಳೆ ಮನೆಯಿಂದ ಹೊರಬರದಂತೆ ಮತ್ತು ನೀರು ಕುಡಿದು ದೇಹವನ್ನು ಹೈಡ್ರೇಟ್ ಆಗಿರುವಂತೆ ನೋಡಿಕೊಳ್ಳಲು ಆರೋಗ್ಯ ಇಲಾಖೆ ಸಲಹೆ ನೀಡಿದೆ.
ಇದನ್ನೂ ಓದಿ: ಕರ್ನಾಟಕ ಹವಾಮಾನ ವರದಿ: ಕರಾವಳಿ ಭಾಗಗಳಲ್ಲಿ ಉಷ್ಣ ಅಲೆ; ಶಿವಮೊಗ್ಗ ಸೇರಿದಂತೆ ಹಲವೆಡೆ ಮಳೆಯಾಗುವ ಮುನ್ಸೂಚನೆ
ಏತನ್ಮಧ್ಯೆ, ಉತ್ತರ ಕರ್ನಾಟಕದ ಹಲವೆಡೆ ಗುಡುಗು ಸಹಿತ ಮಳೆಯ ಮುನ್ಸೂಚನೆಯನ್ನು ಸೂಚಿಸಲಾಗಿದೆ, ರೈತರು ಕಟಾವು ಮಾಡಿದ ಬೆಳೆಗಳನ್ನು ಸುರಕ್ಷಿತವಾಗಿರಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ