ದಾಖಲೆಗಳ ಸರದಾರ ವಿರಾಟ್ ಕೊಹ್ಲಿ (ವಿರಾಟ್ ಕೊಹ್ಲಿ) ಹೆಸರಿಗೆ ಮತ್ತೊಂದು ವಿಶ್ವ ದಾಖಲೆ ಸೇರ್ಪಡೆಯಾಗಿದೆ. ಈ ಬಾರಿ ಕೊಹ್ಲಿ ಮುರಿದಿರುವುದು ಯುನಿವರ್ಸ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್ ಅವರ ವಿಶ್ವ ದಾಖಲೆಯನ್ನು. ಅದು ಸಹ ಶತಕದ ಜೊತೆಯಾಟವಾಡುವ ಮೂಲಕ.
ಹೌದು, ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧ ಆಟಗಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಸ್ಫೋಟಕ ದಾಂಡಿಗ ಫಿಲ್ ಸಾಲ್ಟ್ ಜೊತೆಗೂಡಿ 120 ರನ್ ಗಳ ಜೊತೆಯಾಟವಾಡಿದ್ದರು.
ಈ ಜೊತೆಯಾಟದೊಂದಿಗೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ ಶತಕದ ಜೊತೆಯಾಟವಾಡಿದ ಬ್ಯಾಟರ್ ಎಂಬ ವಿಶ್ವ ದಾಖಲೆ ವಿರಾಟ್ ಕೊಹ್ಲಿ ಪಾಲಾಯಿತು. ಇದಕ್ಕೂ ಮುನ್ನ ಈ ವಿಶ್ವ ದಾಖಲೆ ವೆಸ್ಟ್ ಇಂಡೀಸ್ ನ ಎಡಗೈ ದಾಂಡಿಗ ಕ್ರಿಸ್ ಗೇಲ್ ಹೆಸರಿನಲ್ಲಿತ್ತು.
ವೆಸ್ಟ್ ಇಂಡೀಸ್ ಹಾಗೂ ವಿವಿಧ ಲೀಗ್ಗಳಲ್ಲಿ 455 ನಿಂಗ್ಸ್ ಆಡಿರುವ ಕ್ರಿಸ್ ಗೇಲ್ 46 ಬಾರಿ ಶತಕದ ಜೊತೆಯಾಟವಾಡಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಅತ್ಯಧಿಕ ಬಾರಿ ಸೆಂಚುರಿ ಪಾರ್ಟನರ್ ಶಿಪ್ ಆಡಿದ ಬ್ಯಾಟರ್ ಎನಿಸಿಕೊಂಡರು. ಇದೀಗ ಈ ದಾಖಲೆಯನ್ನು ಮುರಿದಿದ್ದಾರೆ.
ಟೀಮ್ ಇಂಡಿಯಾ ಹಾಗೂ ಆರ್ಸಿಬಿ ಪರ ಮಾತ್ರ ಟಿ20 ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ ಒಟ್ಟು 400 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 47 ಬಾರಿ ಶತಕದ ಜೊತೆಯಾಟವಾಡಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ ಶತಕದ ಜೊತೆಯಾಟವಾಡಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.




