Headlines

ಇರಾನ್ ಮತ್ತೆ ಮಾತುಕತೆಗೆ ಬರಲಿ, ಬರ್ದೇ ಇರ್ಲಿ ಡೋಂಟ್ ಕೇರ್: ಡೊನಾಲ್ಡ್​ ಟ್ರಂಪ್

ಇರಾನ್ ಮತ್ತೆ ಮಾತುಕತೆಗೆ ಬರಲಿ, ಬರ್ದೇ ಇರ್ಲಿ ಡೋಂಟ್ ಕೇರ್: ಡೊನಾಲ್ಡ್​ ಟ್ರಂಪ್


ಇರಾನ್ ಮತ್ತೆ ಮಾತುಕತೆಗೆ ಬರಲಿ, ಬರ್ದೇ ಇರ್ಲಿ ಡಾಂಟ್ ಕೇರ್: ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್, ಏಪ್ರಿಲ್ 13: ಪಾಕಿಸ್ತಾನದ ಆತಿಥ್ಯದಲ್ಲಿ ನಡೆದ ಅಮೆರಿಕ-ಇರಾನ್ ಶಾಂತಿ ಮಾತುಕತೆಗಳು ಯಾವುದೇ ಒಪ್ಪಂದವಿಲ್ಲದೆ ಮುಕ್ತಾಯಗೊಂಡ ಬೆನ್ನಲ್ಲೇ, ಅಧ್ಯಕ್ಷ ಡೊನಾಲ್ಡ್ ಟ್ರಂಪ್(ಡೊನಾಲ್ಡ್ ಟ್ರಂಪ್) ಮತ್ತೆ ಗುಡುಗಿದ್ದಾರೆ. ಇರಾನ್ ಮಾತುಕತೆಗೆ ಮರಳುತ್ತದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ನನಗೆ ಕಿಂಚಿತ್ತೂ ಕಳವಳವಿಲ್ಲ ಎಂದು ಹೇಳಿದ್ದಾರೆ. ಫ್ಲೋರಿಡಾದಿಂದ ಹಿಂದಿರುಗಿದ ನಂತರ ಜಂಟಿ ಬೇಸ್ ಆಂಡ್ರ್ಯೂಸ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಅಮೆರಿಕದ ಹಿತಾಸಕ್ತಿಯೇ ಅವರಿಗೆ ಮುಖ್ಯ ಎಂದು ಸ್ಪಷ್ಟಪಡಿಸಿದರು.

ಇರಾನ್ ಮಾತುಕತೆಯ ಮೇಜಿಗೆ ಮರಳುತ್ತದೆಯೋ ಇಲ್ಲವೋ ಎಂಬುದು ನನಗೆ ಮುಖ್ಯವಲ್ಲ. ಅವರು ಬರದಿದ್ದರೆ ನನಗೇನು ನಷ್ಟವಿಲ್ಲ, ಆದರೂ ಅಂತಿಮವಾಗಿ ನಾವೇ ಗೆಲ್ಲುತ್ತೇವೆ ಎಂದು ಅವರು ಪ್ರತಿಪಾದಿಸಿದರು.

ಇಸ್ಲಾಮಾಬಾದ್‌ನಲ್ಲಿ 21 ಗಂಟೆಗಳ ಮಾತುಕತೆಯಲ್ಲಿ ಇರಾನ್ ಪರಮಾಣು ಶಸ್ತ್ರಾಸ್ತ್ರಗಳ ತಯಾರಿಕೆಯಲ್ಲಿ ಆಸಕ್ತಿ ಇದೆ ಎಂದು ತಿಳಿದುಬಂದಿದೆ. ಆದರೆ, ಇರಾನ್ ಯಾವುದೇ ಕಾರಣಕ್ಕೂ ಪರಮಾಣು ಅಸ್ತ್ರ ಹೊಂದುವುದಿಲ್ಲ ಎಂದು ಟ್ರಂಪ್ ಮತ್ತೊಮ್ಮೆ ಎಚ್ಚರಿಕೆ ನೀಡಿದ್ದಾರೆ.

ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ನೇತೃತ್ವದ ನಿಯೋಗವು ಮೊಹಮ್ಮದ್ ಬಘರ್ ಗಾಲಿಬಾಫ್ ನೇತೃತ್ವದ ಇರಾನಿನ ತಂಡದೊಂದಿಗೆ ನಡೆಸಿದ ಸುದೀರ್ಘ ಚರ್ಚೆಯ ವಿವರಗಳು ಈಗ ಹೊರಬರುತ್ತಿವೆ. ಲೆಬನಾನ್‌ನಲ್ಲಿ ಹಿಜ್ಬುಲ್ಲಾ ಮೇಲೆ ಇಸ್ರೇಲ್ ನಡೆಸುತ್ತಿರುವ ದಾಳಿಗಳು ಮತ್ತು ಹಾರ್ಮುಜ್ ಜಲಸಂಧಿಯ ಬಿಕ್ಕಟ್ಟು ಕದನ ವಿರಾಮದ ಮೇಲೆ ಭಾರಿ ಒತ್ತಡ ಹೇರಿವೆ.

ಮತ್ತಷ್ಟು ಓದಿ: ಇರಾನ್ ಮುಗಿಸಲು ಒಂದೇ ಒಂದು ರಾತ್ರಿ ಸಾಕು, ಗಡುವು ಮುಗಿಯುವ ಮುನ್ನವೇ ಇರಾನ್‌ಗೆ ಟ್ರಂಪ್ ಬೆದರಿಕೆ

ಮಾತುಕತೆಗಳ ಕುಸಿತವು ಕೇವಲ ರಾಜತಾಂತ್ರಿಕ ವೈಫಲ್ಯವಲ್ಲ, ಇದು ಜಾಗತಿಕ ಆರ್ಥಿಕತೆಯ ಮೇಲೂ ಕರಾಳ ನೆರಳು ಬೀರಿದೆ. ಈ ಜಲಸಂಧಿಯನ್ನು ಮತ್ತೆ ತೆರೆಯುವ ಮೂಲಕ ತೈಲ ಬೆಲೆಗಳನ್ನು ಸ್ಥಿರಗೊಳಿಸಬಹುದು ಎಂಬ ಭರವಸೆ ಈಗ ಮಸುಕಾಗಿದೆ. ಅಮೆರಿಕವು ಇರಾನ್ ವಿರುದ್ಧ ತನ್ನ ಮಿಲಿಟರಿ ಕಾರ್ಯಾಚರಣೆಯನ್ನು ಮತ್ತೆ ಯಾವಾಗ ಪ್ರಾರಂಭಿಸಬಹುದು ಎಂಬ ಅನಿಶ್ಚಿತತೆ ಈಗ ಇಡೀ ಜಗತ್ತನ್ನು ಆತಂಕಕ್ಕೆ ತಳ್ಳಿದೆ.

ಇನ್ನೊಂದೆಡೆ, ಇರಾನ್ ಅಧ್ಯಕ್ಷರು ತಮ್ಮ ದೇಶವು ಸಮತೋಲಿತ ಮತ್ತು ನ್ಯಾಯಯುತ ಒಪ್ಪಂದಕ್ಕೆ ಮಾತ್ರ ಸಿದ್ಧವಾಗಿದೆ ಎಂದು ಹೇಳುವ ಮೂಲಕ ಅಮೆರಿಕದ ಷರತ್ತುಗಳನ್ನು ತಳ್ಳಿಹಾಕಿದ್ದಾರೆ. ಡೊನಾಲ್ಡ್ ಟ್ರಂಪ್ ಅವರು ಗೆದ್ದೇ ಗೆಲ್ಲುತ್ತೇವೆ ಎಂಬ ಆತ್ಮವಿಶ್ವಾಸ ಮತ್ತು ಇರಾನ್‌ನ ಪಟ್ಟು ಸದ್ಯಕ್ಕೆ ಯಾವುದೇ ಶಾಂತಿಯ ಮುನ್ಸೂಚನೆ ಕೊಡುತ್ತಿಲ್ಲ, ಎರಡು ವಾರಗಳಲ್ಲಿ ಈ ದುರ್ಬಲ ಕದನ ವಿರಾಮವು ದೊಡ್ಡ ಮಟ್ಟದ ಯುದ್ಧಕ್ಕೆ ದಾರಿ ಮಾಡಿಕೊಡುತ್ತದೆ ಎಂಬುದು ಈಗಿನ ದೊಡ್ಡ ಪ್ರಶ್ನೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *